ನಮ್ಮೂರ ಮಂದಾರ ಹೂವು ಸ್ಮರಿಸಿಕೊಂಡು ತ್ರಿಲ್ಲಾದ ಶಿವರಾಜ್‌ ಕುಮಾರ್

ಶಿರಸಿಯ ಸುಪ್ರಿಯಾ ಇಂಟರ್‌ ನ್ಯಾಶನಲ್‌ ಹೋಟೆಲ್‌ ಉದ್ಘಾಟನೆಗೆ ಬಂದಿದ್ದ ನಟ ಡಾ. ಶಿವರಾಜ್‌ ಕುಮಾರ್‌ ಶಿರಸಿಯಲ್ಲಿ ತಾವು ನಮ್ಮೂರ ಮಂದಾರ ಹೂವೆ ಚಿತ್ರದ ಶೂಟಿಂಗ್‌ ಗೆ ಬಂದ ದಿನಗಳನ್ನು ನೆನಪಿಸಿಕೊಂಡರು. ಉತ್ತರ ಕನ್ನಡ ಸುಂದರ ಜಿಲ್ಲೆ ಶಿರಸಿಯಲ್ಲಿ ಮಂದಾರಹೂವೆ ಚಿತ್ರೀಕರಣ ಸಮಯದಲ್ಲಿ ೨೦ ದಿವಸಗಳಿಗಿಂತ ಹೆಚ್ಚು ಸಮಯ ಇಲ್ಲಿದ್ದೆ. ಇಲ್ಲಿಯ ಶಿವಗಂಗಾ. ಸಾತೊಡ್ಡಿ ಫಾಲ್ಸ್‌, ಬನವಾಸಿ ಶಿರಸಿ ಜಾತ್ರೆ ಎಲ್ಲವೂ ಅದ್ಭುತ ಅನುಭವಗಳು. ಮತ್ತೆ ಅಲ್ಲೆಲ್ಲಾ ಸುತ್ತಾಡಬೇಕು ಎಂದರು. ಈ ಕಾರ್ಯಕ್ರಮದ ನಂತರ ಸಹಸ್ರಲಿಂಗಕ್ಕೆ ಭೇಟಿ ನೀಡಿ ಖುಷಿ ಪಟ್ಟರು.

Thumbnail image

ಕನ್ನಡ ಇಂಡಸ್ಟ್ರಿ ಏನು ಅಂತಾ ಜಗತ್ತಿಗೇ ಪ್ರೂವ್​ ಆಗಿದೆ : ಶಿವರಾಜ್​ ಕುಮಾರ್

ಕನ್ನಡ ಇಂಡಸ್ಟ್ರಿ ಬಗ್ಗೆ ಇಡೀ ಜಗತ್ತಿಗೆ ಗೊತ್ತಾಗಿದೆ. ಕೆಜಿಎಪ್ 2 ನಿಂದ ಅದು ಪ್ರೂವ್​ ಆಗಿದೆ. ಯಾರು ಏನ್​ ಹೇಳಿದರೂ ಈ ಕಿವಿಯಲ್ಲಿ ಕೇಳಬೇಕು ಈ ಕಿವಿಯಲ್ಲಿ ಬಿಡಬೇಕು. ಅವರ ಮಾತು ಅವರ ಯೋಗ್ಯತೆಯನ್ನ ತೋರಿಸುತ್ತೆ ಎಂದು ಶಿವರಾಜ್​ ಕುಮಾರ್​ ಹೇಳಿದರು.

ಶಿರಸಿ: ಯಾರೋ ಏನೋ ಹೇಳಿದರು ಅಂತಾ ಕೇಳವುದು ಬೇಡ. ಕನ್ನಡ ಇಂಡಸ್ಟ್ರಿ ಏನು ಅಂತಾ ಜಗತ್ತಲ್ಲಿ ಪ್ರೂವ್​ ಆಗಿದೆ ಎಂದು ಶಿವರಾಜ್​ ಕುಮಾರ್ ಹೇಳಿದ್ದಾರೆ. ತೆಲಗು ನಿರ್ದೇಶಕ ಗೀತಕೃಷ್ಣ ಸ್ಯಾಂಡಲ್ ವುಡ್ ಇಂಡಸ್ಟ್ರೀ ಡರ್ಟಿ ಎಂಬ ಹೇಳಿಕೆಗೆ ಶಿವಣ್ಣ ಈ ರೀತಿ ಹೇಳುವ ಮೂಲಕ ತಿರುಗೇಟು ನೀಡಿದರು.

ಶಿರಸಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಇಂಡಸ್ಟ್ರಿ ಬಗ್ಗೆ ಇಡೀ ಜಗತ್ತಿಗೆ ಗೊತ್ತಾಗಿದೆ.ಕೆಜಿಎಪ್ 2 ನಿಂದ ಅದು ಪ್ರೂವ್​ ಆಗಿದೆ. ಯಾರು ಏನ್​ ಹೇಳಿದ್ರು ಈ ಕಿವಿಯಲ್ಲಿ ಕೇಳಬೇಕು ಈ ಕಿವಿಯಲ್ಲಿ ಬಿಡಬೇಕು. ಅವರ ಮಾತು ಅವರ ಯೋಗ್ಯತೆಯನ್ನ ತೋರಿಸುತ್ತೆ. ಇಂತವರ ಬಗ್ಗೆ ರಿಯಾಕ್ಟ್ ಮಾಡಿದಷ್ಟು ಅವರಿಗೆ ಬೆನಿಫಿಟ್ ಜಾಸ್ತಿ ಆಗುತ್ತೆ. ನಮ್ಮ ಇಂಡಸ್ಟ್ರಿ ಏನು, ನಮ್ಮ ಗೌರವ ಏನು ಎಲ್ಲರಿಗೂ ಗೊತ್ತು ಎಂದರು.

ಕನ್ನಡ ಇಂಡಸ್ಟ್ರಿ ಏನು ಅಂತಾ ಜಗತ್ತಿಗೇ ಪ್ರೂವ್​ ಆಗಿದೆ : ಶಿವರಾಜ್​ ಕುಮಾರ್

ಅಪ್ಪಾಜಿ ಕಾಲದಿಂದ ಹಿಡಿದು ಇಲ್ಲಿಯವರಗೆ ಎಲ್ಲಾ ಕಲಾವಿದರು ಇಂಡಸ್ಟ್ರಿಯನ್ನ ದೊಡ್ಡ ಮಟ್ಟಕ್ಕೆ ಬೆಳೆಸಿದ್ದಾರೆ. ಇಂತಹವರ ಕೀಳು ಮಾತಿಗೆ ಕಿವಿ ಕೊಡದೇ, ಅವರು ಯಾರು ಅಂತಾ ನೆಗ್ಲೆಟ್ ಮಾಡಬೇಕು ಎಂದ ಅವರು, ನನ್ನ ಮುಂದಿನ ಸಿನಿಮಾ ಬೈರಾಗಿ, ಯಾವುದೇ ಪ್ಯಾನ್ ಇಂಡಿಯಾ ಇಲ್ಲ. ಭಾವನೆಗಳ ಕಥೆ ಇದು, ಪ್ರತಿಯೊಂದು ಪಾತ್ರಕ್ಕೂ ಒಂದೊಂದು ಅರ್ಥ ಇದೆ. ನನ್ನ ಪಾಲಿಗೆ ಬಂದ ಸಿನಿಮಾಗಳನ್ನ ಮಾಡುತ್ತಿದ್ದೇನೆ ಎಂದು ವಿವರಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *