ಶಿರಸಿಯ ಮನೋಜ್ ಹೆಗಡೆಗೆ 213ನೇ ರ‍್ಯಾಂಕ್‌

Thumbnail image

UPSC result-2022..

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಾನ್ಮನೆಯ ಹಣಗಾರಿನ ರಾಮನಾಥ ಹೆಗಡೆ ಮತ್ತು ಗೀತಾ ಹೆಗಡೆ ಪುತ್ರ ಮನೋಜ ಹೆಗಡೆ ಯುಪಿಎಸ್​ಸಿ ಪರೀಕ್ಷೆಯಲ್ಲಿ 213ನೇ ರ‍್ಯಾಂಕ್‌ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

ಶಿರಸಿ(ಉತ್ತರ ಕನ್ನಡ): ಅಪ್ಪಟ ಗ್ರಾಮೀಣ ಪ್ರತಿಭೆಯಾದ ಯುವಕನೋರ್ವ ಯುಪಿಎಸ್​ಸಿ ಪರೀಕ್ಷೆಯಲ್ಲಿ 213ನೇ ರ‍್ಯಾಂಕ್‌ ಪಡೆದು ಮಿಂಚಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜಾನ್ಮನೆಯ ಹಣಗಾರಿನ ರಾಮನಾಥ ಹೆಗಡೆ ಮತ್ತು ಗೀತಾ ಹೆಗಡೆ ಪುತ್ರ ಮನೋಜ ಹೆಗಡೆ ಯುಪಿಎಸ್​ಸಿ ಪರೀಕ್ಷೆಯಲ್ಲಿ 213ನೇ ರ‍್ಯಾಂಕ್‌ ಪಡೆದು ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ತಂದೆ ಪಶು ಇಲಾಖೆ ನಿವೃತ್ತ ಸಿಬ್ಬಂದಿಯಾಗಿದ್ದು, ತಾಯಿ ಶಾಸಕರ ಮಾದರಿ ಶಾಲೆ 5ರಲ್ಲಿ ಶಿಕ್ಷಕಿಯಾಗಿದ್ದಾರೆ.

ಇವರು ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲಿ ಕಲಿತಿದ್ದು, ಉಂಚಳ್ಳಿ ಶಾಲೆಯಲ್ಲಿ 1 ರಿಂದ 6ನೇ ತರಗತಿ ಕಲಿತಿದ್ದಾರೆ. ನಂತರ ಪ್ರೌಢ ಶಿಕ್ಷಣವನ್ನು ಶಿರಸಿಯ ಲಯನ್ಸ್​​ ಪ್ರೌಢಶಾಲೆಯಲ್ಲಿ ಮುಗಿಸಿ, ಪಿಯುಸಿಯನ್ನು ಎಮ್ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಾಡಿದ್ದಾರೆ. ಧಾರವಾಡದಲ್ಲಿ ಬಿಎಸ್ಸಿ ಆಗ್ರಿಕಲ್ಚರ್ ಓದಿ, ಡಿಗ್ರಿ ನಂತರ ಐಎಎಸ್​ಗೆ ತಯಾರಿ ನಡೆಸಿದ್ದರು. ಈಗ ಫಲಿತಾಂಶ ಹೊರ ಬಂದಿದ್ದು, ಶಿರಸಿಯ ಕೀರ್ತಿ ದೇಶ ಮಟ್ಟದಲ್ಲಿ ಬೆಳಗುವಂತಾಗಿದೆ.

ಮನೋಜ್ ಹೆಗಡೆಗೆ 213ನೇ ರ‍್ಯಾಂಕ್‌

ಈ ಫಲಿತಾಂಶದ ಬಗ್ಗೆ ಶಿರಸಿಯಲ್ಲಿ ಪ್ರತಿಕ್ರಿಯೆ ನೀಡಿರುವ ಮನೋಜ್ ಹೆಗಡೆ, ಒಂದು ಬಾರಿ ಕೆಎಎಸ್ ಹಾಗೂ 3 ಬಾರಿ ಐಎಎಸ್ ಪರೀಕ್ಷೆ ಎದುರಿಸಿದ್ದೇನೆ. ಈಗ 5ನೇ ಬಾರಿ ಪ್ರಯತ್ನಕ್ಕೆ ಫಲ ದೊರೆತಿದೆ. ದಿನಕ್ಕೆ ಎಷ್ಟು ತಾಸು ಓದುತ್ತೇವೆ ಎನ್ನುವುದಕ್ಕಿಂತ ಪ್ರಶ್ನೆ ಪತ್ರಿಕೆಗಳನ್ನು ಅರಿತುಕೊಂಡಲ್ಲಿ ಯಶಸ್ಸು ಸಾಧಿಸಬಹುದಾಗಿದೆ. ರ‍್ಯಾಂಕ್‌ ಪ್ರಕಾರ ಐಪಿಎಸ್ ಸಿಗಬಹುದು. ಅಲ್ಲಿ ನೀಡುವ ತರಬೇತಿಯ ನಂತರ ಸಿಗುವ ಕೆಲಸದ ಮೇಲೆ ಯಾವ ರೀತಿ ಜನರಿಗೆ ಒಳ್ಳೆಯದನ್ನು ಮಾಡಬಹುದು ಎಂದು ನಿರ್ಧರಿಸುತ್ತೇನೆ ಎಂದು ಹೇಳಿದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *