ಶಿರಸಿ: ಶಾಲ್ಮಲಾ ನದಿಯಲ್ಲಿರುವ ಐತಿಹಾಸಿಕ ಸಹಸ್ರ ಲಿಂಗಗಳೇ ಕಣ್ಮರೆ!

ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು.‌ ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ.

The idols in the Shalmala river at Sahasralinga in Uttara Kannada district

ಕಾರವಾರ: ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು.‌ ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ.

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಭೈರುಂಬೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿರುವ ಸಹಸ್ರಲಿಂಗ ಕ್ಷೇತ್ರ ಐತಿಹಾಸಿಕ ಮಹತ್ವವನ್ನು ಹೊಂದಿದೆ. ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಿವಲಿಂಗಗಳಿದ್ದವು. ಇವುಗಳು ಒಂದಕ್ಕಿಂತ ಒಂದು ವಿಭಿನ್ನವಾಗಿದ್ದ ಕಾರಣ ಹೆಚ್ಚು ಆಕರ್ಷಕವಾಗಿತ್ತು‌. ಈ ಶಾಲ್ಮಲಾ ನದಿ ಒಟ್ಟು 290 ಕಿ.ಮೀ. ಹರಿಯುತ್ತಿದ್ದು, ಈ ನದಿಯ ಒಳಭಾಗದಲ್ಲೂ ಸಾಕಷ್ಟು ಲಿಂಗಗಳಿವೆ. ಆದರೆ, ಇತ್ತೀಚೆಗೆ ಈ ಕ್ಷೇತ್ರದಲ್ಲಿ ಕಾಣಸಿಗುತ್ತಿದ್ದ ಶಿವಲಿಂಗಗಳ ಸಂಖ್ಯೆ ವಿವಿಧ ಕಾರಣಗಳಿಂದ ಭಾರೀ ಕಡಿಮೆಯಾಗತೊಡಗಿವೆ.

ADVERTISEMENT

ಮಳೆಗಾಲದಲ್ಲಿ ರಭಸವಾಗಿ ಹರಿಯುವ ಶಾಲ್ಮಲಾ ನದಿ ಹಲವು ಬಂಡೆಕಲ್ಲುಗಳನ್ನು ಕೊಚ್ಚಿಕೊಂಡು ಸಾಗಿದ್ದರಿಂದ ಹಾಗೂ ನೀರಿನ ರಭಸಕ್ಕೆ ಸವೆದು ಹೋಗಿರುವುದರಿದ ಇಲ್ಲಿನ ಲಿಂಗಗಳು ಕಣ್ಮರೆಯಾಗುತ್ತಿವೆ. ಇಲ್ಲಿಗೆ ಭೇಟಿ ನೀಡುವ ಕೆಲವು ಕಿಡಿಗೇಡಿ ಪ್ರವಾಸಿಗರು ಕೂಡಾ ದಾಂಧಲೆ ಎಬ್ಬಿಸಿ, ಮೋಜಿಗಾಗಿ ಕಲ್ಲುಗಳನ್ನು ಒಡೆದು ಹಾಕಿರುವ ದೂರುಗಳಿವೆ. ಇನ್ನು ಸಣ್ಣ ಸಣ್ಣ ಲಿಂಗಗಳನ್ನು ಕೆಲವರು ಕೊಂಡೊಯ್ದಿರುವುದಾಗಿಯೂ ಮಾಹಿತಿಗಳಿವೆ.

ಹದಿನೈದನೇ ಶತಮಾನದಲ್ಲಿ ಸೋದೆ ಅರಸರ ಕಾಲದಲ್ಲಿ ಸಹಸ್ರಲಿಂಗಗಳನ್ನು ಕೆತ್ತಿಸಿದ್ದರು ಎಂಬ ಪ್ರತೀತಿಯಿದೆ. ಅಂದಿನಿಂದ ಇಂದಿನವರೆಗೂ ಈ ಸ್ಥಳಕ್ಕೆ ಪ್ರತೀ ವರ್ಷ ಬೇಸಿಗೆಗಾಲದ ಸಮಯದಲ್ಲಿ ಶಿವರಾತ್ರಿ ಹಾಗೂ ಸಂಕ್ರಾಂತಿಯಂದು ಹದಿನೈದರಿಂದ ಇಪ್ಪತ್ತು ಸಾವಿರ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡಿ ಲಿಂಗಗಳಿಗೆ ಪೂಜೆ ಸಲ್ಲಿಸುತ್ತಾರೆ. ಸುಮಾರು 500 ವರ್ಷಗಳಷ್ಟು ಹಳೆ ಯ ಲಿಂಗಗಳಾಗಿವೆ.

ಇಲ್ಲಿ ಮೇಲ್ಗಡೆ 8 ಕಿ.ಮೀ. ಹಾಗೂ ಕೆಳಗಡೆ 8 ಕಿ.ಮೀ.‌ ಸೇರಿ ಒಟ್ಟು 16 ಕಿ.ಮೀ. ವ್ಯಾಪ್ತಿಯಲ್ಲಿ ಸಹಸ್ರಲಿಂಗಗಳು ವ್ಯಾಪಿಸಿವೆ. ಸದ್ಯ ಲಿಂಗಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಗಳು ಇದರತ್ತ ಗಮನ ಹರಿಸಿ ಈ ಸ್ಥಳವನ್ನು ಅಭಿವೃದ್ಧಿ ಪಡಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಮಹಾ ಶಿವರಾತ್ರಿ ಸಮಯದಲ್ಲಿ ಅಪಾರ ಪ್ರಮಾಣದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ.

ಭೈರುಂಬೆ ಗ್ರಾಮ ಪಂಚಾಯಿತಿಯಿಂದ ಸಹಸ್ರಲಿಂಗ ಸ್ಥಳ ನಿರ್ವಹಿಸಲಾಗುತ್ತದೆ. ಗಾರ್ಡ್ ನೇಮಕ ಮಾಡಬಹದು ಅಷ್ಟೇ. ಅಗತ್ಯವಿದ್ದರೆ ನಾವು ಅವುಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಯಂತ್ ಹೇಳಿದರು. ಇನ್ನು ಈ ಬಗ್ಗೆ ಪರಿಶೀಲಿಸುವುದಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಲಿನ್ ತಿಳಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *