ಉತ್ತರ ಕನ್ನಡದಲ್ಲಿ ವರುಣಾರ್ಭಟ: ಜೂನ್​ 25ರವರೆಗೆ ಭಾರಿ ಮಳೆ ಮುನ್ಸೂಚನೆ

Thumbnail image

ಉತ್ತರ ಕನ್ನಡದಲ್ಲಿ ಮಳೆ ಜೋರಾಗಿದ್ದು, ಕಾರವಾರ ನಗರ ಸೇರಿದಂತೆ ತಾಲೂಕಿನ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಹವಾಮಾನ ಇಲಾಖೆಯು ಇನ್ನೂ ನಾಲ್ಕೈದು ದಿನ ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಿದೆ.

ಕಾರವಾರ: ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ವರುಣಾರ್ಭಟ ಜೋರಾಗಿದೆ. ಐದು ದಿನಗಳ ಕಾಲ ರೆಡ್ ಹಾಗೂ ಆರೆಂಜ್ ಅಲರ್ಟ್ ನೀಡಲಾಗಿದ್ದ ಬೆನ್ನಲ್ಲೇ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಕಾರವಾರ ನಗರದಲ್ಲಿ ಮಳೆಯ ಅಬ್ಬರಕ್ಕೆ ಜನವಸತಿ ಪ್ರದೇಶಗಳ ನಿವಾಸಿಗಳು ಪರದಾಡುವಂತಾಗಿದೆ.

ಕಾರವಾರದ ಹಬ್ಬುವಾಡ, ಸೋನಾರವಾಡ, ಹೈಚರ್ಚ್ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ನೀರು ನದಿಯಂತೆ ಹರಿದು ಬಂದಿದ್ದು ರಸ್ತೆಗಳು ಜಲಾವೃತಗೊಂಡಿದ್ದವು. ಮಳೆಯ ನೀರು ಕಾಲುವೆಗಳಲ್ಲಿ ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗಿದ್ದು ರಸ್ತೆಗಳಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಯಿತು. ಮಳೆಗಾಲಕ್ಕೆ ಮುನ್ನ ನಗರಸಭೆ ವತಿಯಿಂದ ಕಾಲುವೆಗಳನ್ನು ಸ್ವಚ್ಛಗೊಳಿಸದಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜನಸಾಮಾನ್ಯರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕಿದ್ದಾರೆ.

ಉತ್ತರ ಕನ್ನಡದಲ್ಲಿ ಭಾರಿ ಮಳೆ

ಜಿಲ್ಲೆಯಲ್ಲಿ ಜೂನ್ 21ರಿಂದ 25ರವರೆಗೆ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಿದ್ದ ಹವಾಮಾನ ಇಲಾಖೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಸತತ ಮಳೆಯಿಂದ ಕಾರವಾರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಗಾ, ಚೆಂಡಿಯಾ ಗ್ರಾಮಗಳಲ್ಲಿ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಹೆದ್ದಾರಿ ಅಗಲೀಕರಣ ಕಾರ್ಯ ಕೈಗೊಂಡಿರುವ ಐಆರ್‌ಬಿ ನಿರ್ಲಕ್ಷ್ಯದಿಂದ ಮಳೆಯ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಜೊತೆಗೆ ನೌಕಾನೆಲೆಯಿಂದ ನೀರು ಸಮುದ್ರಕ್ಕೆ ಸೇರಲು ಅಡ್ಡಿಯಾಗಿದೆ ಅಂತಾ ಅಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *