ಯಕ್ಷ ನೃತ್ಯದ ಮೂಲಕ ವಿಶ್ವಶಾಂತಿ ಸಂದೇಶ ಸಾರುವ ಶಿರಸಿಯ ಬಾಲಕಿ

etv comment image
Thumbnail image

ಯಕ್ಷ ನೃತ್ಯದ ಮೂಲಕವೇ ವಿಶ್ವಶಾಂತಿಯ ಸಂದೇಶ ಸಾರುವ ಈ ಬಾಲಕಿ ಕೇವಲ ಆರು ವರ್ಷದಲ್ಲೇ ಜನರಿಗೆ ಪರಿಚಿತಳಾಗಿದ್ದಳು. ಇದೀಗ ಈಕೆಯ ಸಾಧನೆ ಇಂಡಿಯ ಬುಕ್ ಆಫ್ ರೆಕಾರ್ಡ್‌ ಸೇರಿದೆ.

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಟಕೊಪ್ಪದ ತುಳಸಿ ಹೆಗಡೆ ಎಂಬ ಬಾಲಕಿ ಕಳೆದ ಏಳು ವರ್ಷದಿಂದ ನಿರಂತರವಾಗಿ ವಿಶ್ವಶಾಂತಿ ಸಂದೇಶ ಸಾರುವ ಯಕ್ಷ ನೃತ್ಯ ಮಾಡುತ್ತಿದ್ದರು. ಈ ನೃತ್ಯದ ಮೂಲಕ ಇದೀಗ ಇವರು ಪ್ರತಿಷ್ಟಿತ ಇಂಡಿಯನ್ ಬುಕ್ ಆಫ್ ರೆಕಾರ್ಡ್​ ದಾಖಲೆ ಮಾಡಿದ್ದಾರೆ. ಈ ಮೂಲಕ ದೇಶದ ಅತೀ ಕಿರಿಯ ವಯಸ್ಸಿ‌ನ ವಿಶ್ವಶಾಂತಿ ಸಂದೇಶ ಸಾರುವ ಏಕೈಕ ಬಾಲಕಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದಾರೆ.

ಮಾರಿಕಾಂಬ ಪ್ರೌಢಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ಈಕೆಯ ಸಾಧನೆಗೆ ಇಂಟರ್​​ನ್ಯಾಶನಲ್ ಬುಕ್ ಆಫ್ ರೆಕಾರ್ಡ್​ ಲಭಿಸಿದೆ. ಪೂನಾದ ಸಂಸ್ಥೆಯೊಂದು ನೀಡುವ ಇಂಡಿಯನ್ ಸ್ಟಾರ್ ಐಕಾನ್ ಅವಾರ್ಡ್​ ಕೂಡ ಲಭಿಸಿದ್ದು, ಹಲವು ಪ್ರಶಸ್ತಿಗಳಿಗೆ ಬಾಲಕಿ ಬಾಜನಳಾಗಿದ್ದಾಳೆ. ತುಳಸಿ ಹೆಗಡೆಯು ಒಂದು ಗಂಟೆಗೂ ಅಧಿಕ ಕಾಲದ ಯಕ್ಷನೃತ್ಯ ರೂಪಕವನ್ನು ಪ್ರಸ್ತುತಗೊಳಿಸುತ್ತಿದ್ದಾಳೆ.

ಶಿರಸಿಯ ಬಾಲೆ ತುಳಸಿಯ ಅದ್ಭುತ ಸಾಧನೆ

13 ವರ್ಷದ ತುಳಸಿ ಕಳೆದ ಏಳು ವರ್ಷಗಳಿಂದ ಸತತ ವಿವಿಧ ಪೌರಾಣಿಕ ಕಥೆ ಒಳಗೊಂಡ ವಿಶ್ವಶಾಂತಿ ಸರಣಿ ಪ್ರಸ್ತುತಗೊಳಿಸುತ್ತಿದ್ದು, ಯಕ್ಷಗಾನದ ಬಡಗುತಿಟ್ಟು ಪ್ರಕಾರದಲ್ಲಿ ಮುಮ್ಮೇಳದ ಏಕವ್ಯಕ್ತಿ ರೂಪಕ ಇದಾಗಿದೆ. ಹಿಮ್ಮೇಳದಲ್ಲಿ ಪ್ರಸಿದ್ಧ ಕಲಾವಿದರ, ನಿರ್ದೇಶಕರ, ಸಾಹಿತಿಗಳ, ಪರಿಣಿತರ ಒಂಬತ್ತು ಜನರ ತಂಡ ಕೆಲಸ ಮಾಡುತ್ತಿದೆ. ಒಂದು ಗಂಟೆಗೂ ಮಿಕ್ಕಿದ ವಿಶ್ವಶಾಂತಿ ಸಂದೇಶ, ವಿಶ್ವಶಂಕರಾಕ್ಷರ, ಶ್ರೀಕೃಷ್ಣಂ ವಂದೇ, ವಂದೇ ಪರಮಾನಂದಂ, ಪಂಚಪಾವನ ಕಥಾ, ಪರಿವರ್ತನೆ ಜಗದ ನಿಯಮ, ವಂಶೀವಿಲಾಸ ಯಕ್ಷನೃತ್ಯ ರೂಪಕಗಳನ್ನು ಈಕೆ ಪ್ರದರ್ಶಿಸುತ್ತಾಳೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *