ಕುರಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ಕೇಸ್ ದಾಖಲು

ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

murthy

ಕೋಲಾರ: ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೋಲಾರ ಪೊಲೀಸರು ಹಿಂದೂ ಜಾಗರಣ ವೇದಿಕೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಅಹಮದ್ ಅವರು ಹಿಂದೂ ಜಾಗರಣ ವೇದಿಕೆ ಮುಖಂಡನ ವಿರುದ್ಧ ದೂರು ನೀಡಿದ್ದರು.

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿರೋಧಿಸಿ ಜುಲೈ 1 ರಂದು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಭಾಷಣದಲ್ಲಿ ಕೇಶವ ಮೂರ್ತಿ  “ಕುರಾನ್ ಜನರನ್ನು ಕೊಲ್ಲು ಎಂದು ಹೇಳುತ್ತದೆ. ಆದ್ದರಿಂದ ಕುರಾನ್ ಅನ್ನು ಓದುವವರು ಅದನ್ನು ಅನುಸರಿಸುತ್ತಾರೆ ಎಂದು ನೀವು ಭಾವಿಸುವುದಿಲ್ಲವೇ? ಕುರಾನ್ ಓದುವವರು ಭಯೋತ್ಪಾದಕರು” ಎಂದು ಹೇಳಿದ್ದರೆನ್ನಲಾಗಿದೆ.

ಕೇಶವ ಮೂರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ(ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 295 ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರವಾದಿ ಮೊಹಮ್ಮದ್ ಮತ್ತು ಇಸ್ಲಾಂ ಧರ್ಮದ ವಿರುದ್ಧ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಟೈಲರ್ ಕನ್ಹಯ್ಯಾ ಲಾಲ್ ಅವರನ್ನು ಕಳೆದ ತಿಂಗಳು ಇಬ್ಬರು ವ್ಯಕ್ತಿಗಳು ಹತ್ಯೆ ಮಾಡಿದ್ದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *