


ಲೋಪ ಸರಿಪಡಿಸದಿದ್ದರೆ ನಾಳೆಯಿಂದ ಮದ್ಯ ಮಾರಾಟ ಬಂದ್: ಸರ್ಕಾರಕ್ಕೆ ಮಾರಾಟಗಾರರ ಎಚ್ಚರಿಕೆ
ರಾಜ್ಯ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿ ಅಬಕಾರಿ ಆದಾಯ ಹರಿದುಬರುತ್ತಿದೆ. ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಅಬಕಾರಿ ಇಲಾಖೆ ಕೂಡ ಒಂದು.

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9 ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ ಎಚ್ಚರಿಸಿದ್ದಾರೆ. ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆ ಆಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ ಎಂದರು.
ಕೆ.ಎಸ್.ಬಿ.ಸಿ.ಎಲ್ ಅಕೌಂಟ್‌ಗೆ ಹಣ ಹಾಕಿದರೆ ಮೊದಲು ನಮಗೆ ಬೇಕಾದ ಮದ್ಯ ಸುಲಭವಾಗಿ ಸಿಗುತ್ತಿತ್ತು. ಬಿಲ್ ವ್ಯವಸ್ಥೆ ಮ್ಯಾನ್ಯುವಲ್ ಆಗಿತ್ತು. ಆದರೆ ಏಪ್ರಿಲ್ 1ರಿಂದ ಹೊಸ ಪದ್ಧತಿ ಆರಂಭವಾಗಿದೆ. ವೆಬ್ ಇಂಡೆಂಟಿಂಗ್ ವ್ಯವಸ್ಥೆ ಜಾರಿಯಾದಾಗಿನಿಂದ ಎಲ್ಲವನ್ನೂ ಹಿಂದಿನ ದಿನವೇ ಪೂರ್ಣಗೊಳಿಸಬೇಕು. ಇದರಿಂದ ಸಗಟು ಮದ್ಯ ಖರೀದಿದಾರರಿಗೇ ಸಂಕಷ್ಟ ಎದುರಾಗಿದೆ. ಮುಂದಿನ 24 ಗಂಟೆಗಳ ಒಳಗೆ ಮದ್ಯ ಖರೀದಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಇಲ್ಲವಾದಲ್ಲಿ ಮದ್ಯ ಮಾರಾಟವನ್ನು ನಿಲ್ಲಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


ಮದ್ಯ ಮರಾಟಗಾರರಿಗೆ ಸಕಾಲಕ್ಕೆ ಮದ್ಯ ಸಿಗದ ದುಃಸ್ಥಿತಿ ನಿರ್ಮಾಣವಾಗಿದೆ. ಹೊಸ ಇ-ಇಂಡೆಂಟಿಂಗ್ ಸಾಫ್ಟವೇರ್ ನಿಂದಾಗಿ ಸಮಸ್ಯೆ ಉದ್ಭವಿಸಿದೆ. ಅನೇಕ ಬಾರಿ ಸಮಸ್ಯೆ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಜುಲೈ 1ರಿಂದ ಮದ್ಯ ಖರೀದಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, 24 ಗಂಟೆಯಲ್ಲಿ ಸಮಸ್ಯೆ ಸರಿಪಡಿಸಲು ಆಗ್ರಹಿಸಿದರು. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






