obc @ ಜಿಲ್ಲಾ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಜಿ.ಪಂ.ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆ

ಸಿದ್ದಾಪುರ : ಜಿಲ್ಲಾ ಕಾಂಗ್ರೆಸ್ ಹಿಂದುಳಿದ‌ ವರ್ಗಗಳ ಅಧ್ಯಕ್ಷರಾದ ನಾಗರಾಜ ನಾರ್ವೇಕರವರ ಆದೇಶದ ಮೇರೆಗೆ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಸಂತ ನಾಯ್ಕ ಹಾಗೂ ಕಾಂಗ್ರೆಸ್ ಮುಖಂಡರುಗಳ ನೇತೃತ್ವದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಗಂಗಾಧರ ಜಿ. ಮಡಿವಾಳ ತಾಲೂಕಾ ಹಿಂದುಳಿದ ಬ್ಲಾಕ್ ಕಾಂಗೆಸ್ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದಾ ರೆ.
ಹಲಗೇರಿ ಜಿ.ಪಂ. ಕ್ಷೇತ್ರದ ಉಪಾಧ್ಯಕ್ಷರಾಗಿ ಅಣ್ಣಪ್ಪ ಕೆ. ನಾಯ್ಕ ಸುಂಕತ್ತಿ, ಕಾರ್ಯದರ್ಶಿಯಾಗಿ ಉಮೇಶ ಎಂ.
ನಾಯ್ಕ ಗೋಳಗೋಡ.
ದೊಡ್ಮನೆ ಜಿ.ಪಂ. ಕ್ಷೇತ್ರದ ಉಪಾಧ್ಯಕ್ಷರಾಗಿ ರಮೇಶ ಗೌಡ ಬಳೂರು, ಕಾರ್ಯದರ್ಶಿಯಾಗಿ ಕೆ.ಟಿ.ನಾಯ್ಕ, ಕ್ಯಾದಗಿ ಆಯ್ಕೆಯಾಗಿರುತ್ತಾರೆ.
ಅಣಲೇಬೈಲ್ ಜಿ.ಪಂ. ಕ್ಷೇತ್ರದ ಉಪಾಧ್ಯಕ್ಷರಾಗಿ ಶಿವರಾಮ ಗೌಡ ಹೆಗ್ಗರಣಿ, ಕಾರ್ಯದರ್ಶಿಯಾಗಿ ಈಶ್ವರ ಮೊಗೆರ್
ಹಸರಗೋಡು .
ಕಾನಗೋಡು ಜಿ.ಪಂ. ಕ್ಷೇತ್ರದ ಉಪಾಧ್ಯಕ್ಷರಾಗಿ
ಉದಯ ಚೌಡ ನಾಯ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾರುತಿ ಮಡಿವಾಳ, ಕಾನಸೂರು ಆಯ್ಕೆಯಾಗಿದ್ದಾರೆ. ನಗರ ಘಟಕದ ಉಪಾಧ್ಯಕ್ಷರಾಗಿ ಶನೇಶ್ವರ
ಬಂಗಾರ್ಯ ಮಡಿವಾಳ ಹೊಸೂರು, ಕಾರ್ಯದರ್ಶಿಯಾಗಿ ಪ್ರವೀಣ ಬಿ. ನಾಯ್ಕ, ಕೊಂಡ್ಲಿ ಇವರುಗಳು
ಆಯ್ಕೆಯಾಗಿರುತ್ತಾರೆ ಎಂದು ಕಾಂಗ್ರೆಸ್ ತಾಲೂಕಾ ಹಿಂದುಳಿದ ವರ್ಗಗಳ
ಅಧ್ಯಕ್ಷ ಗಂಗಾಧರ ಜಿ. ಮಡಿವಾಳ ಕಡಕೇರಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಸಿದ್ದಾಪುರ: ವಿದ್ಯಾರ್ಥಿ ಸಂಸತ್ ಮುಂತಾದ ಸಂಘಟನೆ ಗಳಿಂದ ನಮ್ಮಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ. ನಮ್ಮಲ್ಲಿ ಅಗಾಧ ಪ್ರತಿಭೆಗಳಿರುವಂತಹ ಮಕ್ಕಳಿದ್ದಾರೆ. ಅವರ ಪ್ರತಿಭೆ ಹೊರಗೆ ಬರಬೇಕೆಂದರೆ ನಮ್ಮಲ್ಲಿ ಅಂಜಿಕೆ ಇರಬಾರದು.
ಪಠ್ಯ ಜ್ಞಾನದೊಂದಿಗೆ ಪಠ್ಯೇತರ ಜ್ಞಾನವನ್ನು ಹೆಚ್ಚು ಸಂಪಾದಿಸಬೇಕು.
ಶಿಕ್ಷಕರ ಮಾತನ್ನು ಚಾಚುತಪ್ಪದೇ ಕೇಳಿದರೆ ಮುಂದೆ ನಮ್ಮ ಬಾಳು ಸುಂದರವಾಗುತ್ತದೆ ಎಂದು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಭೂಮೇಶ ಎ ಎಚ್ ಹೇಳಿದರು. ಅವರು ಪಟ್ಟಣದ ಹೊಸುರಿನ ಬಂಕೇಶ್ವರ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಅಧ್ಯಕ್ಷ ಕೆ ಅಜ್ಜಪ್ಪ ಮಾತನಾಡಿ ನಾವು ಕೇವಲ ನೌಕರಿಗಾಗಿ ಓದದೆ ನಮ್ಮ ಭದ್ರ ಜೀವನಕ್ಕಾಗಿ ಓದಬೇಕು. ವಿದ್ಯಾರ್ಥಿ ಪ್ರಾರಂಭದಿಂದಲೇ ಕಷ್ಟ ಪಟ್ಟು ಓದಬೇಕು. ಆವಾಗ ನಮ್ಮ ಗುರಿ ಈಡೇರುತ್ತದೆ ಸನ್ಮಾನಗಳು ನಮ್ಮನ್ನು ಹುಡುಕಿಕೊಂಡು ಬರುತ್ತವೆ. ಮನುಷ್ಯ ನಿಗೆ ಹಠ ಛಲ ಇರಬೇಕು. ಅಂದಾಗ ಮಾತ್ರ ನಾವು ಅಂದುಕೊಂಡಂತೆ ಗುರಿ ಮುಟ್ಟಲು ಸಾಧ್ಯವಾಗುತ್ತದೆ ಎಂದರು.





2021 – 22 ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎಂಟನೆ ಸ್ಥಾನ ಗಳಿಸಿ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದ ಪವಿತ್ರ ನಾಯ್ಕ, ಶಾಲೆಗೆ ದ್ವಿತೀಯ ಸ್ಥಾನ ಪಡೆದ ಸಂಜನಾ ಶೇಟ್, ತೃತೀಯ ಸ್ಥಾನ ಪಡೆದ ರಾಘವೇಂದ್ರ ನಾಯ್ಕ ರವರನ್ನು ಸನ್ಮಾನಿಸಲಾಯಿತು.
ಪತ್ರಕರ್ತರ ಸುರೇಶ ಮಾಡಿವಾಳ ಕಡಕೇರಿ.
ಸೊರಬ ಗ್ರಾ.ಪಂ ಸದಸ್ಯರಾದ ಶಿವಕುಮಾರ ಮಾತನಾಡಿದರು.
ವಿದ್ಯಾರ್ಥಿ ಸಂಸತ್ತಿನ ಪ್ರತಿನಿಧಿ ಯಶೋಧರ ಎಸ್ ನಾಯ್ಕ ವೇದಿಕೆಯಲ್ಲಿದ್ದರು.
ಶಿಕ್ಷಕ ಎಮ್ ಬಿ ನಾಯ್ಕ ವಿದ್ಯಾರ್ಥಿ ಸಂಸತ್ತಿಗೆ ಆಯ್ಕೆಯಾದ ಪ್ರತಿನಿಧಿಗಳಿಗೆ ಪ್ರಮಾಣವಚನ ಬೋಧಿಸಿದರು.
ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮುಖ್ಯೋಧ್ಯಾ ಪಕರಾದ ಲೋಕೇಶ ನಾಯ್ಕ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕ ಟಿ ಸಿ ನಾಯ್ಕ ನಿರೂಪಿಸಿದರು. ಶಿಕ್ಷಕ ವಿ.ಟಿ ನಾಯ್ಕ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *