ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಏರಿಸಿ ಸರ್ಕಾರದ ಆದೇಶ

Thumbnail image

ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕನಿಷ್ಠ 6 ವರ್ಷ, ಗರಿಷ್ಠ 7 ವರ್ಷದ ಮಿತಿ- ವಯೋಮಿತಿಯನ್ನು ಏರಿಸಿದ ರಾಜ್ಯ ಸರ್ಕಾರ- ನೂತನ ಆದೇಶ

ಬೆಂಗಳೂರು: ಮಕ್ಕಳನ್ನು ಒಂದನೇ ತರಗತಿಗೆ ದಾಖಲಾತಿ ಮಾಡಲು ವಯೋಮಿತಿಯನ್ನು ನಿರ್ಧರಿಸುವ ಬಗ್ಗೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 2016-17ನೇ ಶೈಕ್ಷಣಿಕ ಸಾಲಿನಿಂದ ಆರ್.ಟಿ.ಇ ಕಾಯ್ದೆ ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ದಾಖಲಾತಿ ಪ್ರವೇಶಾವಕಾಶಕ್ಕೆ ಸಂಬಂಧಿಸಿದಂತೆ ಎಲ್.ಕೆ.ಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4 ವರ್ಷ 10 ತಿಂಗಳು ಆಗಿರಬೇಕು. 1ನೇ ತರಗತಿಗೆ ಮಕ್ಕಳನ್ನು ಸೇರಿಸಲು ಕನಿಷ್ಠ 6ವರ್ಷ ಆಗಿರಬೇಕು, ಗರಿಷ್ಠ 7 ವರ್ಷ ವಯೋಮಿತಿಯನ್ನು ನಿಗದಿಪಡಿಸಿ ನೂತನ ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶ ಪ್ರತಿ

ಸರ್ಕಾರದ ಆದೇಶ ಪ್ರತಿ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪೂರ್ವ ಪ್ರಾಥಮಿಕ ( ಎಲ್.ಕೆ.ಜಿ ) ಹಾಗೂ ಪ್ರಾಥಮಿಕ ಶಾಲೆಯ 1ನೇ ತರಗತಿ ಮಕ್ಕಳನ್ನು ದಾಖಲಾತಿ ಮಾಡಲು ಕರ್ನಾಟಕ ಶಿಕ್ಷಣ ಕಾಯ್ದೆ – 1983ರ ನಿಯಮ -20 ರನ್ವಯ ಆಯಾ ಶೈಕ್ಷಣಿಕ ವರ್ಷದ ಜೂ.1 ಕ್ಕೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ ) 3 ವರ್ಷ 10 ತಿಂಗಳು, 1 ನೇ ತರಗತಿಗೆ 5 ವರ್ಷ 10 ತಿಂಗಳು ಎಂಬುದಾಗಿ 2017 ರ ಜ.13ರಲ್ಲಿ ವಯೋಮಿತಿಯನ್ನು ನಿಗದಿಪಡಿಸಿದ್ದರು. ಅದೇ ತಿಂಗಳ 18 ರಂದು ಆದೇಶವನ್ನು ಮಾರ್ಪಡಿಸಿ ಶೈಕ್ಷಣಿಕ ವರ್ಷ 2018-19ನೇ ಸಾಲಿನಿಂದ ಸರ್ಕಾರಿ, ಅನುದಾನಿತ ಅನುದಾನ ರಹಿತ ಶಾಲೆಗಳಲ್ಲಿ 1ನೇ ತರಗತಿಗೆ ನೇರವಾಗಿ ದಾಖಲಾಗುವ ಮಗುವು ಸಂಬಂಧಿಸಿದ ಶೈಕ್ಷಣಿಕ ವರ್ಷದ ಜೂನ್ 1 ರಂದು 5 ವರ್ಷ, 10 ತಿಂಗಳು ಪೂರ್ಣಗೊಂಡಿರಬೇಕೆಂದು ನಿಗದಿಪಡಿಸಿದ್ದರು.

2009ರಲ್ಲಿ ಆರ್.ಟಿ.ಇ. ಕಾಯ್ದೆ ಮತ್ತು 2012 ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೆ ಬಂದಿವೆ. ಇವುಗಳು ಕರ್ನಾಟಕ ಶಿಕ್ಷಣ ಕಾಯ್ದೆ 1983 ಮತ್ತು ಅದರಡಿ ರಚಿತವಾದ ಎಲ್ಲಾ ನಿಯಮಗಳನ್ನು / ಆದೇಶಗಳನ್ನು ರದ್ದುಪಡಿಸಿ, ಈ ಹೊಸ ಆದೇಶ ನೀಡಲಾಗಿದೆ.

2018 ರ ಮೇ ತಿಂಗಳಲ್ಲಿ ಹೊರಡಿಸಿದ ಆದೇಶದಲ್ಲಿ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಒಂದನೇ ತರಗತಿಗೆ ದಾಖಲಾಗಲು ಮಗುವಿಗೆ ಕನಿಷ್ಠ ವಯೋಮಿತಿಯನ್ನು 05 ವರ್ಷ 05 ತಿಂಗಳು ಹಾಗೂ ಗರಿಷ್ಠ 07 ವರ್ಷಗಳಿಗೆ ನಿಗದಿಪಡಿಸಲಾಗಿದೆ. ತತ್ಸಂಬಂಧಿ ರಾಜ್ಯ ಪತ್ರವನ್ನು ಹಾಗೂ ಸರ್ಕಾರದ ಆದೇಶವನ್ನು 2020 ರ ಮಾ. 20ರಲ್ಲಿ ಶೈಕ್ಷಣಿಕ ವರ್ಷದ ಜೂ.1ರಂದು ಅನ್ವಯವಾಗುವಂತೆ ಎಲ್.ಕೆ.ಜಿ. ದಾಖಲಾತಿ ಹೊಂದಲು 03 ವರ್ಷ 05 ತಿಂಗಳು ಹಾಗೂ ಒಂದನೇ ತರಗತಿಗೆ 05 ವರ್ಷ 05 ತಿಂಗಳು ವಯೋಮಿತಿ ನಿಗದಿಪಡಿಸಲಾಗಿತ್ತು. ಒಟ್ಟಾರೆ ಸಲ್ಲಿಕೆಯಾದ ಎಲ್ಲಾ ಪ್ರಸ್ತಾವನೆಯನ್ನು ಕೂಲಂಕಶವಾಗಿ ಪರಿಶೀಲಿಸಿ ಈ ನೂತನ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *