


ಕಾರವಾರದ ಮುಂಡಗೋಡದಲ್ಲಿ ಗ್ರಾಮ ಪಂಚಾಯತ್ ಸದಸ್ಯೆಯ ಹತ್ಯೆ- ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ- ಪ್ರಕರಣದ ಸುತ್ತ ಅನುಮಾನದ ಹುತ್ತ

ಕಾರವಾರ (ಉತ್ತರಕನ್ನಡ): ಇಲ್ಲಿನ ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗಂಡನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆತನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೃತ ಮಹಿಳೆಯನ್ನು ಅಕ್ಕಮ್ಮ ಬಸವರಾಜ ಮೇಲಿನಮನಿ ಎಂದು ಗುರುತಿಸಲಾಗಿದೆ.
ಮನೆಯ ಆವರಣದಲ್ಲಿಯೇ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣ ಮಧ್ಯರಾತ್ರಿ ನಡೆದಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ ಮಬನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹದ ಸುತ್ತಲೂ ಕುಂಕುಮ ಹರಡಲಾಗಿದ್ದು, ಮನೆಯ ಒಳಗೆ ಹಾಗೂ ಹೊರಗೆ ಚುನಾವಣಾ ಕರಪತ್ರಗಳನ್ನು ಇಟ್ಟು ಅವುಗಳ ಮೇಲೆ ಹುಲ್ಲು, ಕುಂಕುಮ ಇತ್ಯಾದಿಗಳನ್ನು ಇಡಲಾಗಿದೆ. ವಾಮಾಚಾರಕ್ಕಾಗಿ ಕೊಲೆ ನಡೆದಿದೆಯೋ ಅಥವಾ ಇತರೆ ವಿಷಯಕ್ಕೆ ಕೊಲೆ ನಡೆದಿದೆಯೋ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಲಿದೆ. (etbk)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
