ಶಿವಮೊಗ್ಗ ದಲ್ಲಿ ಸರ್ಕಾರಕ್ಕೆ ಸವಾಲ್….

ಅಧಿಕಾರಿಗಳಿಂದ ಸಿಗದ ಸ್ಪಂದನೆ: ಶಿವಮೊಗ್ಗದಲ್ಲಿ ಗ್ರಾಮಸ್ಥರಿಂದಲೇ ರಸ್ತೆ ದುರಸ್ಥಿ

ಎಷ್ಟೇ ಮನವಿ ಕೊಟ್ಟರೂ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದೇ ಇದ್ದುದಕ್ಕೆ ಬೇಸರಗೊಂಡ ಸೊರಬ ತಾಲೂಕಿನ ಯಲಸಿ ಗ್ರಾಮಸ್ಥರು ಒಟ್ಟು ಸೇರಿ ರಸ್ತೆ ಸರಿಪಡಿಸಿದರು.

ಶಿವಮೊಗ್ಗ: ಕೆಟ್ಟು ಹೋದ ರಸ್ತೆ ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿದ್ದಾರೆ. ಸೊರಬ ತಾಲೂಕಿನ ಯಲಸಿ ಗ್ರಾಮದ ಒಳಭಾಗದ ರಸ್ತೆ ಹಾಳಾಗಿ ಹಲವು ವರ್ಷಗಳೇ ಕಳೆದಿದ್ದವು.

ರಸ್ತೆ ದುರಸ್ತಿ ಮಾಡಿದ ಗ್ರಾಮಸ್ಥರು

ಅಧಿಕಾರಿಗಳ ದಾರಿ ಕಾದರೆ ರಸ್ತೆ ರಿಪೇರಿಯಾಗದು. ಹೀಗಾಗಿ ಏನಾದ್ರು ಮಾಡಬೇಕೆಂದರಿತ ಗ್ರಾಮಸ್ಥರು ಸೇರಿ ಮಾತುಕತೆ ನಡೆಸಿದ್ದರು. ಗ್ರಾಮದ ಪ್ರತಿ ಮನೆಗೆ ಒಬ್ಬರಂತೆ ಬಂದು ರಸ್ತೆ ರಿಪೇರಿ ಕಾರ್ಯಕ್ಕೆ ಸಹಕಾರ ನೀಡಬೇಕೆಂದು ತಿಳಿಸಲಾಗಿತ್ತು. ಹೀಗೆ ಕಾರ್ಯ ಪ್ರವೃತ್ತರಾದ ಜನರು, ರಸ್ತೆಗೆ ಬೇಕಾದ ಮಣ್ಣನ್ನು ಟ್ರ್ಯಾಕ್ಟರ್​​ನಲ್ಲಿ ತಂದು ಹಾಕಿ ಸುಮಾರು ಒಂದು ಕಿ.ಮೀ ರಸ್ತೆ ದುರಸ್ತಿ ಮಾಡಿದ್ದಾರೆ. ಇದು ಸಿದ್ದಾಪುರ ಹಾಗೂ ಚಂದ್ರಗುತ್ತಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದೆ.

Thumbnail image

ಶಿವಮೊಗ್ಗ: ಸ್ಮಶಾನಕ್ಕೆ ತೆರಳಲು ರಸ್ತೆಯಿಲ್ಲ, ನೀರಿನಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು

ಸ್ಮಶಾನಕ್ಕೆ ತೆರಳುವ ರಸ್ತೆ ಜಲಾವೃತವಾಗಿದ್ದು ಶವಗಳ ಅಂತ್ಯಸಂಸ್ಕಾರ ನಡೆಸಲು ಶಿವಮೊಗ್ಗದ ಗ್ರಾಮವೊಂದರಲ್ಲಿ ಜನರು ಪರದಾಡುತ್ತಿದ್ದಾರೆ.

ಶಿವಮೊಗ್ಗ: ಮೃತದೇಹದ ಅಂತ್ಯಸಂಸ್ಕಾರ ನಡೆಸಲು ಸ್ಮಶಾನಕ್ಕೆ ತೆರಳಲು ಸೂಕ್ತ ರಸ್ತೆಯಿಲ್ಲದೇ ಶವವನ್ನು ನೀರಿನಲ್ಲೇ ಹೊತ್ತು ಸಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಡ್ಲು ಗ್ರಾಮದಲ್ಲಿ ನಡೆಯಿತು. ಕೋಡ್ಲು ಗ್ರಾಮದ ತಮ್ಮಯ್ಯ ಗೌಡ (80) ಎಂಬವರು ವಯೋಸಹಜವಾಗಿ ಸಾವನ್ನಪ್ಪಿದ್ದರು. ಇವರ ಶವವನ್ನು ಗ್ರಾಮಸ್ಥರು ನೀರಿನಲ್ಲಿಯೇ ಹೊತ್ತುಕೊಂಡು ಹೋಗಿ ಸ್ಮಶಾನ ತಲುಪಿ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಶಿವಮೊಗ್ಗ: ಸ್ಮಶಾನಕ್ಕೆ ತೆರಳಲು ರಸ್ತೆಯಿಲ್ಲ, ನೀರಿನಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು

ಪ್ರತಿ ಮಳೆಗಾಲದಲ್ಲಿ ಸ್ಮಶಾನದ ರಸ್ತೆ ಜಲಾವೃತವಾಗುತ್ತಿದೆ. ಹೀಗಾಗಿ ಶವಗಳನ್ನು ಸ್ಮಶಾನಕ್ಕೆ ಸಾಗಿಸುವುದೇ ಸವಾಲಿನ ಕೆಲಸವಾಗುತ್ತಿದೆ. ಮಳೆಗಾಲದಲ್ಲಿ ನಾಲ್ಕೈದು ತಿಂಗಳು ಸ್ಮಶಾನದ ರಸ್ತೆ ಮುಳುಗಡೆಯಾಗುತ್ತಿದೆ. ರಸ್ತೆ ಎತ್ತರಿಸುವಂತೆ ಹಲವು ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದರು. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *