ಬರ್ತ್‌ ಡೆ ಪಾರ್ಟಿ ಯಲ್ಲಿ ಚರ್ಚೆಯಾಯ್ತು ಕಮೀಷನ್‌,ಪಕ್ಷಪಾತ,ತಾರತಮ್ಯ!

ದೇಶದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಪ್ರಾರಂಭವಾದ ೪೦-೫೦-% ಕಮೀಷನ್‌ ವಿಚಾರ ಈಗ ಹಾದಿ-ಬೀದಿಗಳಲ್ಲಿ ಚರ್ಚೆಯ ವಿಷಯವಾಗಿದೆ.ಸಿದ್ಧಾಪುರ,ಶಿರಸಿಗಳಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷರ ಆಪ್ತರು,ಸಂಬಂಧಿಗಳು ಸಾರ್ವಜನಿಕ ಕಾಮಗಾರಿಗಳ ೪೦% ಕಮೀಷನ್‌ ಪಡೆದು ಕಳಪೆ ಕಾಮಗಾರಿ ಮಾಡುತಿದ್ದಾರೆ ಎನ್ನುವ ವಿಷಯ ಈಗ ಮುನ್ನೆಲೆಗೆ ಬಂದಿದೆ.

ರವಿವಾರ ನಗರದ ಲಯನ್ಸ್ ಬಾಲಭವನದಲ್ಲಿ ಬಿ.ಜೆ.ಪಿ. ಯುವಮೊರ್ಚಾ ಯುವ ಘಟಕದ ಮಾಜಿ ಅಧ್ಯಕ್ಷ ಹರೀಶ್‌ ಗೌಡರ್‌ ರ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸೇರಿದ್ದ ಬಿ.ಜೆ.ಪಿ. ಬಂಡಾಯ ಕಾರ್ಯಕರ್ತರೆದುರು ಮಾತನಾಡಿದ ರೈತ ಸಂಘದ ಅಧ್ಯಕ್ಷ ವೀರಭದ್ರನಾಯ್ಕ ತಾಲೂಕು ಮತ್ತು ಕ್ಷೇತ್ರದಲ್ಲಿ ಸ್ವಜನ ಪಕ್ಷಪಾತ ಮೇರೆ ಮೀರಿದೆ. ಶಾಸಕರ ಜಾತಿಯ ಪ್ರಭಾವಿಗಳ ಮನೆಗೆ ಕೋಟ್ಯಾಂತರ ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸಿದ ಶಾಸಕರು ಬಡವರು, ಬಹುಸಂಖ್ಯಾತರಿರುವ ಹಳ್ಳಿಗಳಿಗೆ ಅನುದಾನವನ್ನೇ ಹಂಚಿಲ್ಲ ಇದು ಜಾತೀಯತೆ,ಸ್ವಜನಪಕ್ಷಪಾತವಲ್ಲವೆ? ಎಂದು ಪ್ರಶ್ನಿಸಿ

ಗುಂಜಗೋಡಿನಲ್ಲಿ ಬಿರುಕುಬಿಟ್ಟ ಸ್ವಜಾತಿಯವರ ಮನೆಗೆ ಸರ್ಕಾರದ ೫ ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡುವ ಪಟ್ಟಭದ್ರರು ಅಕ್ಕುಂಜಿ,ಹೆಮ್ಮನಬೈಲ್‌ ಗಳಲ್ಲಿ ಮನೆ ಕಳೆದುಕೊಂಡ ಬಡವರಿಗೆ ೯೫ ಸಾವಿರ ಪರಿಹಾರ ನೀಡಿದ್ದಾರೆ.

ತಾರೇಸರದಲ್ಲಿ ಕುಡಿದು ಮೃತಪಟ್ಟ ಸ್ವಜಾತಿವರಿಗೆ ಒಂದು ದಿವಸದ ಒಳಗೆ ೫ ಲಕ್ಷ ರೂಪಾಯಿ ನೀಡುವ ಶಾಸಕರು ಇತರ ಜಾತಿಯ ಸಾವುಗಳಿಗೆ ಪರಿಹಾರ ನೀಡಿಲ್ಲ ಈ ತಾರತಮ್ಯದ ವಿರುದ್ಧ ತಾಲೂಕಿನ ಜನತೆ ಸಿಡಿದೇಳುತಿದ್ದು ಕಮೀಷನ್‌ ವ್ಯವಹಾರ ಬೆಳೆಸಿ, ಪಕ್ಷಪಾತ ಪೋಶಿಸಿ ತಾರತಮ್ಯ ಮಾಡುತ್ತಿರುವ ಶಾಸಕರು ತಮ್ಮ ಕರ್ಮಕ್ಕೆ ತಕ್ಕ ಪ್ರತಿಫಲ ಪಡೆಯುತ್ತಾರೆ ಎಂದರು.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಪರ ಸಂಘಟನೆಗಳ ಪ್ರತಿನಿಧಿ ಆಕಾಶ್‌ ಕೊಂಡ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಅವರ ಬಿ.ಜೆ.ಪಿ. ಧರ್ಮದ ಹೆಸರಿನಲ್ಲಿ ಜಾತೀಯತೆ ಮಾಡುತ್ತಿದೆ. ಬಡವರು, ಬಹುಸಂಖ್ಯಾತರ ವಿರುದ್ಧ ಇರುವ ಈ ಸಮಯಸಾಧಕರಿಗೆ ಚುನಾವಣೆಯಲ್ಲಿ ಉತ್ತರ ನೀಡಬೇಕು. ಪಕ್ಷದ ಮುಖಂಡರು ಕಾರ್ಯಕರ್ತರನ್ನು ನಿರ್ಲಕ್ಷಿಸಿ ಕೆಲವು ಗುತ್ತಿಗೆದಾರರ ಕೂಟ ನಿರ್ಮಿಸಿಕೊಂಡಿರುವ ಕಾಗೇರಿ ಆ ವಂಧಿಮಾಗಧರಿಂದಲೇ ಸೋಲು ಕಾಣುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವ್ಯವಸ್ಥೆಯ ದೋಶಗಳ ಬಗ್ಗೆ ಮಾತನಾಡಿದ ಪತ್ರಕರ್ತ ಕನ್ನೇಶ್‌ ಕೋಲಶಿರ್ಸಿ ಮತ್ತು ಉದ್ಯಮಿ ಉಪೇಂದ್ರ ಪೈ ಶಾಸಕ ಕಾಗೇರಿಯವರ ಹೆಸರು ಹೇಳದೆ ಕೆಲವು ಜ್ವಲಂತ ವಿಷಯಗಳನ್ನು ಪ್ರಸ್ಥಾಪಿಸಿದರು. ಹುಟ್ಟುಹಬ್ಬದ ನಿಮಿತ್ತ ಏರ್ಪಡಿಸಿದ ಸನ್ಮಾನ ಮತ್ತು ಔತಣಕೂಟದಲ್ಲಿ ನೂರಾರು ಜನರು ಪಾಲ್ಗೊಂಡು ಸಂಬ್ರಮಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *