ಬಿ.ಜೆ.ಪಿ.ಗೆ ಎಲ್ಲಿದೆ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸುವ ನೈತಿಕತೆ

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದೆ ಬ್ರಟೀಷರಿಗೆ ಸ್ಸಾರಿ ಎಂದಿದ್ದ ಬಿ.ಜೆ.ಪಿ.ಗಳು ಇಂದು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುತಿದ್ದಾರೆ. ದೇಶದ ವಿಭಜನೆಗೆ ಕಾರಣವಾದ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್‌ ಕಾಂಗ್ರೆಸ್‌ ನ ನವಭಾರತದ ಕನಸಿಗೆ ಬೆಂಕಿ ಇಟ್ಟರು ಇವರೆಲ್ಲಾ ಈಗ ಕಾಂಗ್ರೆಸ್‌ ಟೀಕಿಸುತ್ತಾ ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುತಿದ್ದಾರೆ. ಈ ಮತೀಯವಾದಿಗಳಿಗೆ ಭಾರತ ಸ್ವಾತಂತ್ರ್ಯ,ಅಖಂಡ ಭಾರತದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ ಎಂದು ಎಐಸಿಸಿ ವಕ್ತಾರ ಸುಧೀರ್‌ ಮೊರಳ್ಳಿ ಪ್ರಶ್ನಿಸಿದರು.

ಸಿದ್ಧಾಪುರದಲ್ಲಿ ಕಾಂಗ್ರೆಸ್‌ ಸಂಘಟಿಸಿದ್ದ ಏಕತೆಗಾಗಿ ಪಾದಯಾತ್ರೆ ಕಾರ್ಯಕ್ರಮದ ಸಭೆಯಲ್ಲಿ ವಿಶೇಶ ವಕ್ತಾರರಾಗಿ ಮಾತನಾಡಿದ ಅವರು ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡುತ್ತಲೇ ಅಹಿಂಸೆಯಿಂದ ಸ್ವಾತಂತ್ರ್ಯ ಗಳಿಸಿದ ದೇಶ ಭಾರತವೊಂದೇ. ಈ ಸತ್ಯಾಗ್ರಹದ ಹೋರಾಟದ ಹಿಂದಿನ ಶಕ್ತಿಗಳು ಮಹಾತ್ಮಾಗಾಂಧಿ ಮತ್ತು ಕಾಂಗ್ರೆಸ್‌ ಎಂದು ವಿವರಿಸಿದರು. ದೇಶವನ್ನು ಅಭಿವೃದ್ಧಿ ಮಾಡದೆ ಬಡವರಿಗೆ ವಾಸದ ಮನೆ ಕೊಡದೆ ಹರ್ಘರ್‌ ತಿರಂಗಾ ಎನ್ನುವ ಈಗಿನ ಭಾರತದ ಗುಜರಾತ್‌ ಜೋಡಿ ಖಾದಿ ಬದಲು ಪಾಲಿಸ್ಟರ್‌ ಧ್ವಜ ಮಾರಾಟ ಮಾಡುವ ಮೂಲಕ ಧ್ವಜ ಸಂಹಿತೆ ಮತ್ತು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ದೇಶಪ್ರೇಮದ ಹೆಸರಿನಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದೆ ಎಂದು ಆರೋಪಿಸಿದರು.

.

ಸತ್ಯ ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ ಎನ್ನುವ ಸಂವಿಧಾನ ಬದಲಿಸುವ ಅನಂತ ಹೆಗಡೆ ಅವರ ಅಜ್ಜ ಅಡಿಕೆ ಕತ್ತರಿಸಿದ ಅಡಕತ್ತರಿಯ ಶಬ್ಧಕ್ಕೆ ಹೆದರಿ ಬ್ರಟೀಷರು ದೇಶ ಬಿಟ್ಟು ಹೋದರೆ ಎಂದು ಪ್ರಶ್ನಿಸಿದರು. ದಯೆ,ಅಹಿಂಸೆ,ಸತ್ಯಾಗ್ರಹದಿಂದ ಗಳಿಸಿದ ಸ್ವಾತಂತ್ರ್ಯ ವನ್ನು ವ್ಯಾಪಾರಿಗಳು ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ಈ ದೇಶದ ದುರಂತ ಎಂದು ಅವರು ಹರಿಹಾಯ್ದರು.

ಸಭಾ ಕಾರ್ಯಕ್ರಮ ಉದ್ಘಾಟಿಸಿದ ಏಐಸಿಸಿ ಕಾರ್ಯದರ್ಶಿ ಐವಾನ್‌ ಡಿಸೋಜಾ ಲಾಭ,ಸ್ವಾರ್ಥದ ಮತೀಯವಾದಿಗಳಿಂದ ಈ ದೇಶದ ಅಖಂಡತೆ,ಸ್ವಾತಂತ್ರ್ಯ ಉಳಿಸುವ ಕೆಲಸವನ್ನು ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ಕರ್ತವ್ಯ ಎಂದು ಭಾವಿಸಬೇಕು ಎಂದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *