ಜಿ.ಪಂ.,ತಾ.ಪಂ. ಚುನಾವಣೆ ಮತ್ತಷ್ಟು ವಿಳಂಬ

Thumbnail image

ತಾಪಂ, ಜಿಪಂ ಕ್ಷೇತ್ರ ಜನಸಂಖ್ಯೆ ನಿಗದಿಗೊಳಿಸಿ ಸುಗ್ರೀವಾಜ್ಞೆ ಹೊರಡಿಸಿದ ಸರ್ಕಾರ.. ಚುನಾವಣೆ ಇನ್ನಷ್ಟು ವಿಳಂಬ?

ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕವನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ.

ಬೆಂಗಳೂರು: ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಆ ಮೂಲಕ ತಾಪಂ ಹಾಗೂ ಜಿಲ್ಲಾ ಪಂಚಾಯತ್‌ ಚುನಾವಣೆ ಮತ್ತಷ್ಟು ವಿಳಂಬವಾಗಲಿದೆ.

ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕವನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್‌ 121 ಮತ್ತು ಸೆಕ್ಷನ್‌ 160ರ ತಿದ್ದುಪಡಿಗೆ ಸುಗ್ರೀವಾಜ್ಞೆ ತರಲಾಗಿದೆ. ಈ ನಿಟ್ಟಿನಲ್ಲಿ ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ತಿದ್ದುಪಡಿ ಅಧ್ಯಾದೇಶಕ್ಕೆ ಆ. 20ರಂದು ರಾಜ್ಯಪಾಲರಿಂದ ಅಂಕಿತ ಬಿದ್ದಿದ್ದು, ಇದೀಗ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಅಧಿಸೂಚನೆ ಹೊರಡಿಸಿದೆ.

ತಿದ್ದುಪಡಿ ಕಾಯ್ದೆಗೆ ತರುತ್ತಿರುವ ಸುಗ್ರೀವಾಜ್ಞೆಯಂತೆ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 25 ಜಿ.ಪಂ. ಸದಸ್ಯರಿರಲಿದ್ದಾರೆ. ಇನ್ನು 7 ರಿಂದ 9.5 ಲಕ್ಷ ಜನಸಂಖ್ಯೆಗೆ ಕನಿಷ್ಠ 28 ಜಿ.ಪಂ ಸದಸ್ಯರು ಇರಲಿದ್ದಾರೆ. ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ತಿದ್ದುಪಡಿ ವಿಧೇಯಕ-2022 ತರಲಾಗಿತ್ತು.

ಅದರಂತೆ, ಸೆಕ್ಷನ್‌ 121 ಪ್ರಕಾರ 2 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 12 ಸಾವಿರಕ್ಕೆ ಕಡಿಮೆಯಿಲ್ಲದ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯ ಇರಬೇಕು. ಅದೇ ರೀತಿ 1 ಲಕ್ಷ ಮೀರಿದ ಹಾಗೂ 2 ಲಕ್ಷ ಮೀರದ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯರಂತೆ ಕನಿಷ್ಠ 11 ಚುನಾಯಿತ ಸದಸ್ಯರು ಇರಬೇಕು.

50 ರಿಂದ 1 ಲಕ್ಷ ಜನಸಂಖ್ಯೆಗೆ ಒಂಬತ್ತು ಸದಸ್ಯರು. 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆಗೆ ಏಳು ಮಂದಿ ಸದಸ್ಯರು ಇರಬೇಕು. ಅದೇ ರೀತಿ ಸೆಕ್ಷನ್‌ 160 ಪ್ರಕಾರ, ಒಂದು ಜಿಲ್ಲೆಯಲ್ಲಿ 35 ರಿಂದ 45 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಒಂದು ಜಿಲ್ಲೆಯಲ್ಲಿ 20 ಜಿ.ಪಂ. ಸದಸ್ಯರು ಇರಬೇಕು.

2022ರ ಮಾರ್ಚ್‌ನಲ್ಲಿ ತರಲಾದ ತಿದ್ದುಪಡಿಯಲ್ಲಿ 2 ಲಕ್ಷ ಮೇಲ್ಪಟ್ಟ ಜನಸಂಖ್ಯೆಗೆ 12 ತಾ.ಪಂ ಸ್ಥಾನಗಳು ಎಂದು ಇತ್ತು. ಆದರೆ, 2 ಲಕ್ಷದ ಮೇಲೆ ಸ್ವಲ್ಪ ಪ್ರಮಾಣದ ಜನಸಂಖ್ಯೆ ಹೆಚ್ಚಿರುವ ಕಡೆ ಸ್ಥಾನಗಳ ನಿಗದಿಗೆ ಸಮಸ್ಯೆ ಆಗುತ್ತಿತ್ತು. ಅದಕ್ಕಾಗಿ ಸುಗ್ರೀವಾಜ್ಞೆಯಲ್ಲಿ 2 ಲಕ್ಷದ ಬದಲಾಗಿ 2.30 ಲಕ್ಷ ಜನಸಂಖ್ಯೆ ನಿಗದಿ ಪಡಿಸಲಾಗಿದೆ.

ಅದೇ ರೀತಿ ಹಿಂದಿನ ತಿದ್ದುಪಡಿಯಲ್ಲಿ ಒಂದು ಜಿಲ್ಲೆಯಲ್ಲಿ ತಾಲೂಕುಗಳಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಪ್ರತಿ ಜಿಲ್ಲೆಯಲ್ಲಿ 20 ಇರಬೇಕು ಎಂದಿತ್ತು. ಇಲ್ಲಿಯೂ ಸಹ ಕಡಿಮೆ ಜನಸಂಖ್ಯೆ ಇರುವ ಜಿಲ್ಲೆಗಳಲ್ಲಿ ಸ್ಥಾನ ನಿಗದಿ ಸಮಸ್ಯೆ ಆಗುತಿತ್ತು. ಅದಕ್ಕಾಗಿ, ಸುಗ್ರೀವಾಜ್ಞೆಯಲ್ಲಿ ಜಿಲ್ಲೆಗಳಿಗೆ ಜನಸಂಖ್ಯೆ ನಿಗದಿಪಡಿಸಲು ಈ ಸುಗ್ರೀವಾಜ್ಞೆ ತರಲಾಗಿದೆ.

ಈ ಸುಗ್ರೀವಾಜ್ಞೆ ಮೂಲಕ ಇದೀಗ ಸರ್ಕಾರ ತಾಪಂ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಇನ್ನಷ್ಟು ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ. ಕಾರಣ ಸುಗ್ರಿವಾಜ್ಞೆಯ ಪ್ರಕಾರ ತಾ.ಪಂ. ಹಾಗೂ ಜಿ.ಪಂ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಲಿದೆ. ಇದು ಮುಂದೆ ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿದೆ‌.‌ (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *