ತಮ್ಮಣ್ಣ ಬೀಗಾರ್ ರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹೊಸ ದೆಹಲಿ, ಆಗಸ್ಟ್ ೨೪:
ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ೨೦೨೨ ರ ಯುವ ಸಾಹಿತ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶಿರ್ಶಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಯ ೨೦೨೨ರ ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿಯು ಐವತ್ತು ಸಾವಿರ ರುಪಾಯಿ ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.

ದಾದಾಪೀರ್ ಅವರ ‘ನೀಲಕುರಿಂಜಿ ‘ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ ತಮ್ಮಣ್ಣ ಬೀಗಾರ ಅವರ ‘ ಬಾವಲಿ ಗುಹೆ ‘ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. ‘ನೀಲಕುರಿಂಜಿ ‘ ಯನ್ನು ರಾಯಚೂರು ಜಿಲ್ಹೆಯ ಕೆ.ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದ್ದರೆ ‘ಬಾವಲಿ ಗುಹೆ ‘ ಯನ್ನು ಬೆಂಗಳೂರಿನ ಅಭಿನವ ಪ್ರಕಾಶನವು ಪ್ರಕಟಿಸಿದೆ.

ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಸ ಉಷಾ, ನಗರಗೆರೆ ರಮೇಶ್ ಹಾಗೂ ಎನ್ ಎಸ್ ಗುಂಡೂರ ಕೆಲಸ ನಿರ್ವಹಿಸಿದ್ದರೆ ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು , ಲೋಹಿತ್ ನಾಯ್ಕರ್ ಹಾಗೂ ಎಂ ಎಚ್ ನಾಗರಾಜ್ ಅವರು ಜ್ಯೂರಿಗಳಾಗಿದ್ದರು.ಪುಸ್ತಕ ಆಯ್ಕೆ ಪ್ರಕ್ರಿಯೆಯು ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆಯಿತು.

ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿ ವಿಜೇತರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.

ಡಾ ಸರಜೂ ಕಾಟ್ಕರ್
ಸಂಯೋಜಕರು
ಕೇಂದ್ರ ಸಾಹಿತ್ಯ ಅಕಾಡೆಮಿ
ಕನ್ನಡ ಭಾಷಾ ವಿಭಾಗ
ಹೊಸ ದೆಹಲಿ
ಮೊಬೈಲ್ ನಂಬರ್

9341029321


(ಹಸಿರೂರಿನ ಹುಡುಗ ಪುಸ್ತಕಕ್ಕೆ ಹೊಂಬಳ ಮಕ್ಕಳ ಸಾಹಿತ್ಯ ಪ್ರಶಸ್ತಿ, ಮಲ್ನಾಡೆ ಮಾತಾಡು ಕೃತಿಗೆ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಹಾಗೂ ಮರಬಿದ್ದಾಗ ಕೃತಿಗೆ ಬಾಲವಿಕಾಸ ಅಕಾಡೆಮಿ ಕೊಡುವ ಮಕ್ಕಳ ಚಂದ್ರ ಪ್ರಶಸ್ತಿ, ಫ್ರಾಗಿ ಮತ್ತು ಗೆಳೆಯರು ಕೃತಿಗೆ ಪುಸ್ತಕ ಸೊಗಸು ಬಹುಮಾನ ಬಂದಿವೆ. ಇದಲ್ಲದೇ ರಾಜ್ಯ ಉತ್ತಮ ಶಿಕ್ಷಕರ ಪ್ರಶಸ್ತಿ, ರಾಷ್ಟ್ರ  ಶಿಕ್ಷಕರ ಪ್ರಶಸ್ತಿ, ಪ್ರಜಾವಾಣಿ ಶಿಶುಕಾವ್ಯ ಸ್ಪರ್ಧಾ ಬಹುಮಾನ ಮುಂತಾದವು ದೊರೆತಿವೆ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *