ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

Thumbnail image

ಕರಾವಳಿಯಲ್ಲಿ ಕಳೆಗಟ್ಟಿದ ಗಣೇಶ ಚತುರ್ಥಿ: ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿ ಅನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಕಾರವಾರ(ಉತ್ತರಕನ್ನಡ): ನಿನ್ನೆ ದೇಶಾದ್ಯಂತ ಗಣೇಶ ಹಬ್ಬ ವಿಜೃಂಭಣೆಯಿಂದ ನಡೆದಿದೆ. ಮನೆ ಮನೆಯಲ್ಲೂ ಗಣಪನ ವಿಗ್ರಹ ತಂದು ಆರಾಧಿಸುವ ಜೊತೆಗೆ ಸಾರ್ವಜನಿಕವಾಗಿಯೂ ವಿಭಿನ್ನ ಬಗೆಯ ವಿನಾಯಕ ಮೂರ್ತಿಗಳನ್ನು ಜನರು ಪ್ರತಿಷ್ಠಾಪಿಸಿದ್ದಾರೆ. ಇಲ್ಲೊಂದು ಟೈ ಹಾಕಿ, ಸೂಟು ಧರಿಸಿ, ನಗುಮೊಗದಿಂದ ಕುಳಿತಿರುವ ದಿ. ಪುನೀತ್​ ರಾಜ್​ಕುಮಾರ್​ ಮೂರ್ತಿ ಜನರನ್ನು ಹೆಚ್ಚು ಆಕರ್ಷಣೆ ಮಾಡಿದೆ.

ಕನ್ನಡದ ಕೋಟ್ಯಾಧಿಪತಿ ಮಾದರಿಯಲ್ಲಿ ಕುಳಿತಿರುವ ಅಪ್ಪು.. ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಪುನೀತ್ ರಾಜ್​​​ಕುಮಾರ್​ ಮೂರ್ತಿಯನ್ನು ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮ ನಡೆಸಿಕೊಡುವ ಮಾದರಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಥೇಟ್ ಅಪ್ಪುವನ್ನೇ ಹೋಲುವ ಮೂರ್ತಿಯಿದು. ಇದರ ಫೋಟೋ, ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದು ಅವರ್ಸಾ ಗ್ರಾಮದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ 39ನೇ ಗಣೇಶೋತ್ಸವ ಆಗಿದೆ.

ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ಮೂರ್ತಿ ತಯಾರಿಸಿದ ಕಲಾವಿದ ದಿನೇಶ ಮೇತ್ರಿ.. ಪುನೀತ್ ರಾಜ್​ಕುಮಾರ್ ಅವರ ಮೂರ್ತಿಯನ್ನು ತಯಾರು ಮಾಡಿರೋದು ಅವರ್ಸಾ ಗ್ರಾಮದ ಹಿರಿಯ ಕಲಾವಿದ ಕುಮ್ಮಣ್ಣ ಮೇತ್ರಿ ಮನೆತನದ ದಿನೇಶ ಮೇತ್ರಿ. ಮೇತ್ರಿ ಕುಟುಂಬ ಮೂರ್ತಿ ತಯಾರಿಕೆಯಲ್ಲಿ ಹಿಂದಿನಿಂದಲೂ ಪ್ರಖ್ಯಾತಿ ಗಳಿಸಿದ್ದಾರೆ. ವರ್ಷವಿಡೀ ಈ ಕುಟುಂಬದಲ್ಲಿ ಮೂರ್ತಿಗಳ ನಿರ್ಮಾಣ ಕಾರ್ಯ ನಡೆಯುತ್ತಲೇ ಇರುತ್ತದೆ. ಈ ಕುಟುಂಬದ ದಿನೇಶ ಮೇತ್ರಿ ಅವರು ಪುನೀತ್ ಹಾಗೂ ಗಣಪನನ್ನು ಕನ್ನಡದ ಕೋಟ್ಯಾಧಿಪತಿಯ ಸೆಟ್‌ನಲ್ಲಿ ಕೂತಂತೆ ತಯಾರು ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ನಗು ಮೊಗದ ಪುನೀತ್ ಕಂಡು ಜನರು ಖುಷ್..​ ಈ ಎರಡೂ ಮೂರ್ತಿಗಳು 9 ಫೀಟ್ ಎತ್ತರ ಇವೆ. ಒಂದು ತಿಂಗಳ ಕಾಲ ದಿನೇಶ ಹಾಗೂ ಅವರ ಕುಟುಂಬದ ಕಲಾವಿದರು ಸೇರಿ ಪುನೀತ್ ಹಾಗೂ ಗಣಪನ ಮೂರ್ತಿಯನ್ನು ಸಿದ್ಧಪಡಿಸಿದ್ದಾರೆ. ಮೂರ್ತಿ ಥೇಟ್ ಪುನೀತ್​ ಅವರನ್ನೇ ಹೋಲುವಂತಿದ್ದು ಸೂಟು, ಕೈಗೆ ವಾಚು, ಕಣ್ಣಿಗೆ ಕಪ್ಪು ಕನ್ನಡಕದ ಜೊತೆಗೆ ಟೈ ಕಟ್ಟಿ ಕುಳಿತಿರುವ ಮೂರ್ತಿ ಎಂಥಹವರನ್ನೂ ಬೆರಗುಗೊಳಿಸುವಂತಿದೆ. ಅಪ್ಪುವನ್ನು ಕಳೆದುಕೊಂಡ ಅಭಿಮಾನಿ ಬಳಗ ನಗುಮೊಗದ ಪುನೀತ್ ಮೂರ್ತಿ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವ ಸಮಿತಿ ಪ್ರಯತ್ನದಿಂದ ನೆಚ್ಚಿನ ನಟನನ್ನು ಕಳೆದುಕೊಂಡಿರುವ ಅಭಿಮಾನಿಗಳಿಗೆ ಮತ್ತೆ ಅಪ್ಪುವನ್ನು ಮೂರ್ತಿ ಮೂಲಕ ಕಣ್ತುಂಬಿಕೊಳ್ಳಲು ಅವಕಾಶ ಸಿಕ್ಕಂತಾಗಿದೆ. ಈಗಾಗಲೇ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿ ಪುನೀತ್ ಅವರ ಮೂರ್ತಿ ವೀಕ್ಷಿಸಿದ್ದಾರೆ. ಮೂರ್ತಿ ಬಳಿ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *