ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)

ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ)

ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…

govind

ತಿರುವನಂತಪುರಂ: ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು ನಿಷೇಧಿಸಬೇಕು ಎಂದು ಕೇರಳದ ಆಡಳಿತಾರೂಢ ಸಿಪಿಐ(ಎಂ) ಮಂಗಳವಾರ ಹೇಳಿದೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಅನ್ನು ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂಬ ವರದಿಗಳ ನಡುವೆ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ ವಿ ಗೋವಿಂದನ್ ಅವರು ಈ ಹೇಳಿಕೆ ನೀಡಿದ್ದಾರೆ.

ಕೇರಳವು ಈಗ ಭಯೋತ್ಪಾದನೆ ಮತ್ತು ಸಮಾಜಘಾತುಕ ಶಕ್ತಿಗಳ “ಹಾಟ್‌ಸ್ಪಾಟ್” ಆಗಿದೆ. ಈ ದಕ್ಷಿಣ ರಾಜ್ಯದ ಜನರ ಜೀವನ ಸುರಕ್ಷಿತವಾಗಿಲ್ಲ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಆರೋಪಿಸಿದ ಮಾರನೇ ದಿನವೇ ಸಿಪಿಐ(ಎಂ) ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ ಎಸ್ ನಿಷೇಧಿಸಿ ಎಂದು ಹೇಳುವ ಮೂಲಕ ತಿರುಗೇಟು ನೀಡಿದೆ.

“ಆರ್ ಎಸ್ಎಸ್ ಕೋಮುವಾದಿ ಚಟುವಟಿಕೆಗಳನ್ನು ನಡೆಸುವ ಪ್ರಮುಖ ಸಂಘಟನೆಯಾಗಿದೆ. ಅದನ್ನು ನಿಷೇಧಿಸಲಾಗುತ್ತದೆಯೇ? ಉಗ್ರಗಾಮಿ ಸಂಘಟನೆಯನ್ನು ನಿಷೇಧಿಸುವುದರಿಂದ ಸಮಸ್ಯೆಗೆ ಪರಿಹಾರವಿಲ್ಲ. ಆರ್‌ಎಸ್‌ಎಸ್ ಅನ್ನು ಈ ಹಿಂದೆ ನಿಷೇಧಿಸಲಾಗಿದೆ. ಸಿಪಿಐ ಅನ್ನು ನಿಷೇಧಿಸಲಾಗಿದೆ, ”ಸಂಘಟನೆಯನ್ನು ನಿಷೇಧಿಸುವುದರಿಂದ ಅದು ಅಥವಾ ಅದರ ಸಿದ್ಧಾಂತ ಕೊನೆಗೊಳ್ಳುವುದಿಲ್ಲ. ಅವರು ಹೊಸ ಹೆಸರು ಅಥವಾ ಗುರುತಿನೊಂದಿಗೆ ಮತ್ತೆ ಹಿಂತಿರುಗುತ್ತಾರೆ. ಇಂತಹ ಗುಂಪುಗಳ ವಿರುದ್ಧ ಜಾಗೃತಿ ಮೂಡಿಸಿ ಅಕ್ರಮ ಎಸಗಿದಾಗ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’’ ಎಂದು ಎಂ ವಿ ಗೋವಿಂದನ್ ಅವರು ಹೇಳಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *