ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲು ಸಾಧ್ಯವಿಲ್ಲ: ರಾಗಾ ಗುಡುಗು

ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ.. ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲಾಗಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಚಾಮರಾಜನಗರದಲ್ಲಿ ಹೇಳಿದ್ದಾರೆ.

ಚಾಮರಾಜನಗರ: ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ವಿಪಕ್ಷಗಳ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ಗುಂಡ್ಲುಪೇಟೆಯಲ್ಲಿ ಭಾರತ್​ ಜೋಡೋ ಯಾತ್ರೆಗೆ ಚಾಲನೆ ಕೊಟ್ಟು ಮಾತನಾಡಿದ ಅವರು, ಮಾಧ್ಯಮಗಳಲ್ಲಿ ನಮ್ಮ ಮಾತು ಪ್ರಸಾರವಾಗುತ್ತಿಲ್ಲ. ಮಾಧ್ಯಮಗಳು ಅವರ ಹಿಡಿತದಲ್ಲಿದೆ. ಸಂಸತ್ತು – ವಿಧಾನಸಭೆಗಳಲ್ಲಿ ಜನರ ಸಮಸ್ಯೆ ಮಾತನಾಡಿದರೇ ಮೈಕ್ ಆಫ್ ಆಗಲಿದೆ. ಎಲ್ಲ ಸಂಸ್ಥೆಗಳು ಅವರ ಹಿಡಿತದಲ್ಲಿದ್ದು, ವಿಪಕ್ಷಗಳ ಸ್ವಾತಂತ್ರ್ಯದ ಮಾರ್ಗ ಮುಚ್ಚಿ ಹಾಕುತ್ತಿದ್ದಾರೆ ಎಂದು ಬಿಜೆಪಿ ಹೆಸರು ಹೇಳದೇ ರಾಗಾ ಕಿಡಿಕಾರಿದರು.

ಸಂವಿಧಾನ ರಕ್ಷಣೆ, ಭಾರತದ ಧ್ವಜದ ರಕ್ಷಣೆಗಾಗಿ ಈ ಪಾದಯಾತ್ರೆ. ಜನರ ದುಃಖ- ದುಮ್ಮಾನಗಳನ್ನು ಕೇಳಲು ಜನರ ಬಳಿಗೆ ನಾವು ತೆರಳುತ್ತಿದ್ದೇವೆ. ಮಳೆ, ಬಿಸಿಲು‌ ಏನೆ ಬಂದರೂ ಬೆಳಗ್ಗೆಯಿಂದ ಸಂಜೆವರೆಗೆ ನಡೆದಿದ್ದೇವೆ. ಲಕ್ಷಾಂತರ ಜನರು ಹುರುಪು ತುಂಬಿದ್ದು, ಯಾವ ಶಕ್ತಿಯೂ ಈ ಪಾದಯಾತ್ರೆ ನಿಲ್ಲಿಸಲಾಗಲ್ಲ ಎಂದು ಗುಡುಗಿದರು.‌

ನಮ್ಮ ಈ ಯಾತ್ರೆಯಲ್ಲಿ ದ್ವೇಷ, ಹಿಂಸೆ ಕಾಣಲ್ಲ. ಈ ಯಾತ್ರೆಯಲ್ಲಿ ಎಲ್ಲ ಧರ್ಮ, ಜಾತಿ ಜನರು ನಡೆಯುತ್ತಿದ್ದಾರೆ. ಈ ಪಾದಯಾತ್ರೆಯಲ್ಲಿ ಯಾರಿಗೇ ಏನೇ ತೊಂದರೆ ಆದರೂ ಮೊದಲು ಸಹಾಯ ಮಾಡುತ್ತಾರೆಯೇ ಹೊರತು ಜಾತಿ – ಭಾಷೆ ಕೇಳಲ್ಲ. ಇದು ನಮ್ಮ ಭಾರತ. ಈ ಭಾರತ ಉಳಿವಿಗಾಗಿ ಯಾತ್ರೆ ಎಂದು ಭಾರತ್ ಜೋಡೋದ ಮಹತ್ವ ತಿಳಿಸಿದರು.

ನಾನು ನಿತ್ಯ 6-7 ಗಂಟೆ ನಡೆಯುತ್ತೇನೆ. ನನ್ನೊಂದಿಗೆ ಲಕ್ಷಾಂತರ ಜನರು ಹೆಜ್ಜೆ ಹಾಕಿದ್ದಾರೆ. ಶ್ರೀಸಾಮಾನ್ಯರು ನಮ್ಮ‌ ಬಳಿ ಬಂದು ಬೆಲೆ ಏರಿಕೆ, ರೈತರ ಮೇಲಾಗುತ್ತಿರುವ ದಬ್ಬಾಳಿಕೆ ಸೇರಿದಂತೆ ಅನೇಕ ಕಷ್ಟಗಳನ್ನು ಹೇಳಿಕೊಳ್ಳುತ್ತಿದ್ದಾರೆ. ನಾವು ಹೆಚ್ಚು ನಡೆಯುತ್ತಿದ್ದರಿಂದ ಜನರ ಅಭಿಪ್ರಾಯ ತಿಳಿದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಮತ್ತು ಕೊನೆಯಲ್ಲಿ ರಾಗಾ ರಾಗಾ ಎಂಬ ಘೋಷಣೆಗಳು ಮೊಳಗಿದವು, ಘೋಷಣೆಗಳು ಕೂಗುತ್ತಿದ್ದಂತೆ ಹರಿಪ್ರಸಾದ್ ಇನ್ನೂ ಕೂಗಿ ಎಂದು ಕೈ ಏರಿಸಿ ಉತ್ಸಾಹ ತುಂಬುತ್ತಿರುವುದು ಕಂಡು ಬಂದಿತು. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *