ಉ.ಕ. ಖರ್ವಾ ಬಳಿ ಅಪಘಾತ ೧ ಸಾವು ೧೨ ಜನರಿಗೆ ಗಾಯ

ಹೊನ್ನಾವರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿ: ಓರ್ವ ಸಾವು, 12 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿ. ಓರ್ವ ಸಾವು, 12 ಮಂದಿಗೆ ಗಾಯ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಘಟನೆ.

ಕಾರವಾರ(ಉತ್ತರ ಕನ್ನಡ): ಚಾಲಕನ ನಿಯಂತ್ರಣ ತಪ್ಪಿ ಟೆಂಪೊ ಪಲ್ಟಿಯಾಗಿ ಓರ್ವ ಮೃತಪಟ್ಟು, 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ಜಲವಳ್ಳ ಕರ್ಕಿಯ ಹನುಮಂತ ರಾಮ ಪೂಜಾರಿ ಮೃತರು. ಗೇರುಸೊಪ್ಪ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಹನುಂಮತ ರಾಮ ಪೂಜಾರಿ ತೀವ್ರ ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸರಳಗಿಯ ಮಹೇಶ ರಾಮಪ್ಪ ನಾಯ್ಕ ಎನ್ನುವವರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *