

ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆದ್ರೂ ಭೂತಾನ್ನಿಂದ ಆಮದು: ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ-ಸಿಎಂ ಬೊಮ್ಮಾಯಿ
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50 ಲಕ್ಷಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವಾರ್ಷಿಕ ರೂ. 6000 ಸಹಾಯಧನವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ.
12ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಬಿಡುಗಡೆ ಮಾಡಿದ್ದು, ರಾಜ್ಯದ 50.36 ಲಕ್ಷ ರೈತರಿಗೆ 1007. 26 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
