ಹೆಡ್ ಬುಷ್ ವಿವಾದ: ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ವಿರುದ್ಧ ಮುಗಿಬಿದ್ದ ನೆಟ್ವಿಗರು! ಅಷ್ಟಕ್ಕೂ ಆಗಿದ್ದೇನು?

ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ ಅಪಮಾನ ಮಾಡಲಾಗಿದೆ ಎಂಬ ವಿವಾದ
ಮೆತ್ತಿಕೊಂಡಿದೆ.

Minister_Sunil_Kumar1

ಬೆಂಗಳೂರು: ಡಾಲಿ ಧನಂಜಯ್ ನಿರ್ಮಾಣ ಹಾಗೂ ಅಭಿನಯದ ‘ಹೆಡ್ ಬುಷ್’ ಸಿನಿಮಾ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿರುವಂತೆಯೇ, ಇದರಲ್ಲಿ ವೀರಗಾಸೆಗೆ ಅಪಮಾನ ಮಾಡಲಾಗಿದೆ ಎಂಬ ವಿವಾದ
ಮೆತ್ತಿಕೊಂಡಿದೆ.

ಈ ಸಿನಿಮಾಕ್ಕೆ ಪತ್ರಕರ್ತ ಅಗ್ನಿ ಶ್ರೀಧರ್ ಕಥೆ ಬರೆದಿದ್ದು, ಶೂನ್ಯ ನಿರ್ದೇಶಿಸಿದ್ದಾರೆ. ವೀರಗಾಸೆ ಕಲಾವಿದನಿಗೆ ಅಪಮಾನ ಮಾಡಿರುವ ದೃಶ್ಯವನ್ನು ತೆಗೆಯುವಂತೆ ಒತ್ತಾಯಿಸಿ ಈ ಸಮುದಾಯದವರು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಇಂದು ಕೂಡಾ ಪ್ರತಿಭಟನೆ ನಡೆಸಿದರು. ಆದರೆ, ಕರಗದ ಬಗ್ಗೆ ವಿವಾದಿತ ಸಂಭಾಷಣೆಗೆ ಬೀಪ್ ಹಾಕಲು ವಾಣಿಜ್ಯ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಈ ಮಧ್ಯೆ ಹೆಡ್ ಬುಷ್ ವಿವಾದ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಟ್ವೀಟ್ ಮಾಡುತ್ತಿದ್ದಂತೆಯೇ ಇದು ರಾಜಕೀಯ ಸ್ವರೂಪ ಪಡೆದುಕೊಂಡಿದೆ.ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ ಎಂದು ಅವರು ತಿಳಿಸಿದ್ದಾರೆ.

ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದಿದ್ದಾರೆ. 

ಸಚಿವರು ಈ ರೀತಿ ಟ್ವೀಟ್ ಮಾಡುತ್ತಿದ್ದಂತೆಯೇ, ಟ್ವಿಟಿಗರು ಅವರ ಮೇಲೆ ಮುಗಿ ಬಿದಿದ್ದಾರೆ. ಕೇವಲ ಒಂದು ಸಮುದಾಯಕ್ಕೆ ಮಾತ್ರ ಮಾಸಾಶನ ಕೊಟ್ಟಿದ್ದೀರಿ. ವೀರಗಾಸೆ, ಕಂಸಾಳೆ ಹೀಗೆ ಎಲ್ಲ ಜಾನಪದ ಪ್ರಕಾರದ ಕಲಾವಿದರಿಗೂ ಕೊಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸಿದ್ದಾರೆ.

ಬರೀ ನಿಮ್ಮ ಭಾಗದ ಕಲಾವಿದರಿಗೆ ಮಾತ್ರ ಮಾಸಾಶನ ನೀಡಿ ತಾರತಮ್ಯ ತೋರುತ್ತಿದ್ದೀರಿ. ನಿಮಗೆ ವೀರಗಾಸೆಯ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ಕೂಡಲೇ ಅವರಿಗೂ ಮಾಸಾಶನ ನೀಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *