ಮಸೀದಿ ಸಮೀತಿ ಆಯ್ಕೆ ವೇಳೆ ಗಲಾಟೆ ಪರಸ್ಪರ ದೂರು ದಾಖಲು

ಸಿದ್ದಾಪುರ ನಗರದ ಬದ್ರಿಯಾ ಜಮಿಯ ಮಸೀದಿಯ ಶಾದಿ ಹಾಲನಲ್ಲಿ ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆಯ ಸಭೆಯುನಡೆದು ಎಲ್ಲರ ಒಮ್ಮತದಿಂದ ಬುಡಾಣ ಸಾಬ್ ರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದು ನಂತರ ಬುಡನ್ ಸಾಬ್ ರು ಕೆಲವು ಸದಸ್ಯರನ್ನು ಆಯ್ಕೆ ಮಾಡಬೇಕೆಂದು ಹೇಳಿದಾಗ ಚೀಟಿಯಲ್ಲಿದ್ದ ಹೆಸರುಗಳನ್ನು ಮಸೀದಿಯ ಹಂಗಾಮಿ ಅಧ್ಯಕ್ಷರಾದ ಮುನಾವರ್ ಗುರುಕಾರ್ ಓದಲು ಶುರು ಮಾಡಿದಾಗ ಮಸೀದಿಯ ಎರಡು ಗುಂಪುಗಳಲ್ಲಿ ಗಲಾಟೆ ಪ್ರಾರಂಭವಾಗಿ ಹೊಡೆದಾಡಿಕೊಂಡಿದ್ದು ಎರಡು ಗುಂಪಿನವರು ಸಿದ್ದಾಪುರ ಪೊಲೀಸ್ ಠಾಣೆಗೆ ಬಂದು ಪ್ರಕರಣ ದಾಖಲಿಸಿದ್ದಾರೆ.

,ಸಿದ್ದಾಪುರ: ಬೇರೆ ಭಾಷೆಗಳು‌ ಉದರದ ಭಾಷೆಯಾದರೆ ಕನ್ನಡ ಹೃದಯದ ಭಾಷೆಯಾಗಲಿ. ಎಲ್ಲೆಲ್ಲಿ ಸಾಧ್ಯವೋ ಅಲ್ಲಿ ಹೆಚ್ಚಾಗಿ ಕನ್ನಡ ಭಾಷೆಯನ್ನು ಬಳಸಬೇಕೆಂದು ಯುವ ಪೀಳಿಗೆಯವರಲ್ಲಿ ಮನವಿ ಮಾಡುತ್ತೇನೆ‌ ಎಂದು ತಾಲ್ಲೂಕಿನ‌ ನ್ಯಾಯಾಧೀಶರಾದ ತಮ್ಮಯ್ಯ ಜಿ ಹೇಳಿದರು.
ಅವರು ತಾಲ್ಲೂಕಿನ ಭುವನಗಿರಿಯ ಭುವನೇಶ್ವರಿ ದೇವಾಲಯದಲ್ಲಿ ನಡೆದ ಮಾತೃವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು.


ನಾಡಿನ‌ ಹಿರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಿ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದವರ ಮಧ್ಯೆ ಕುಳಿತಿರುವುದು ಹೆಮ್ಮೆಯ ವಿಷಯ. ನಾನೂ ಕೂಡ ನ್ಯಾಯಾಲಯದಲ್ಲಿ ಸಾಧ್ಯವಾದಷ್ಟು ಕನ್ನಡದಲ್ಲಿ ತೀರ್ಪನ್ನು ಕೊಡಲು ಪ್ರಯತ್ನಿಸುತ್ತಿದ್ದೇನೆ‌ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ವೈದ್ಯರಾದ ಆರ್ ಎಸ್ ಹೆಗಡೆ ಹಾರ್ಸಿಮನೆ, ರಾಜ್ಯ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಶ್ರೀಧರ ಹೆಗಡೆ ಹುಲಿಮನೆ,‌ ಸಾಹಿತಿ,ನಿವೃತ್ತ ಮುಖ್ಯೋಪಾಧ್ಯಾಯ ಪದ್ಮಾಕರ ಮಡಗಾಂಕರ ಬಿಳಗಿ, ಸಾಹಿತಿ,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಪಾದ ಹೆಗಡೆ ಮಗೇಗಾರ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಸೆ ಚಿತ್ತಾರ ಕಲಾವಿದ ಈಶ್ವರ ನಾಯ್ಕ ಹಸ್ವಂತೆ, ಅಂತರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಗ್ರಾಹಕರಾದ ನಾಗೇಂದ್ರ ಮುತ್ಮುರಡು ರಿಗೆ “ಶ್ರೀಮಾತಾ ಅನುಗ್ರಹ” ಗೌರವ ಸಂಮಾನ ನೀಡಿ ಗೌರವಿಸಲಾಯಿತು.
ದೇವಾಲಯದ ಅಧ್ಯಕ್ಷ ಶ್ರೀಕಾಂತ ಹೆಗಡೆ ಗುಂಜಗೋಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

https://www.youtube.com/watch?v=ya8zAPjiW54

ಮಾತೃವಂದನಾ ಸಮಿತಿಯ ಕಾರ್ಯಾಧ್ಯಕ್ಷರಾದ ನಾಗರಾಜ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗವೇಣಿ ಭಟ್ ಮುತ್ತಿಗೆ ಸಂಗಡಿಗರು ಪ್ರಾರ್ಥಿಸಿದರು.
ಚಂದ್ರಕಾಂತ ಹೆಗಡೆ ಸ್ವಾಗತಿಸಿದರು.
ಪ್ರಶಾಂತ ಹೆಗಡೆ ವಂದಿಸಿದರು
ಗಣಪತಿ ಹೆಗಡೆ ಗುಂಜಗೋಡ ನಿರೂಪಿಸಿದರು.

https://www.youtube.com/watch?v=OfL6f0k1cOM

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *