ಸೋಜಿಗವೀಜಗ!- ಸೆಲ್ಫಿ ವಿಥ್‌ ಆನೆ!

ಹುಬ್ಬಳ್ಳಿ: ಎಲ್ಲರ ಗಮನ ಸೆಳೆಯುತ್ತಿರುವ ಆನೆ ಆಕೃತಿಯ ಈ ಮರ, ಈಗ ಸೆಲ್ಫಿ ಕೇಂದ್ರ!

ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ?

The elephant trunk tree in Dajibanpet area of Hubballi - D Hemanth

ಹುಬ್ಬಳ್ಳಿ: ಹುಬ್ಬಳ್ಳಿಯ ದಾಜಿಬಾನ್ ಪೇಟೆಯಲ್ಲಿರುವ ಮರವೊಂದು ಈಗ ಸ್ಥಳೀಯರ ಆಕರ್ಷಣೆಯ ಕೇಂದ್ರಬಿಂದುವಾಗಿದೆ. ಅಂಥದ್ದೇನಿದೆ ಈ ಮರದಲ್ಲಿ ಅಂತೀರಾ? ಆ ಮರ ಆನೆಯ ಆಕೃತಿಯಲ್ಲಿದ್ದು ಸೆಲ್ಫಿ ಪ್ರಿಯರಿಗೆ ಫೋಟೋ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅತ್ಯುತ್ತಮ ತಾಣವಾಗಿ ಮಾರ್ಪಾಡಾಗಿದೆ. 

ಆನೆಯ ಸೊಂಡಿಲ ಮಾದರಿಯಲ್ಲಿ ಈ ಮರ ಬೆಳೆದಿದ್ದು, ಸೆಲ್ಫಿ ಕ್ಲಿಕ್ಕಿಸಿಕೊಳ್ಳುವವರ ಜೊತೆಗೆ ಈ ಮರಕ್ಕೆ ಪೂಜೆ ಸಲ್ಲಿಸುವ ಭಕ್ತಾದಿಗಳ ಸಂಖ್ಯೆಯೂ ಹೆಚ್ಚಳವಾಗಿದೆ. ಈ ಮರಕ್ಕೆ ಜನರು ಹಣ್ಣು, ಹೂವುಗಳನ್ನು ಅರ್ಪಿಸಲು ಪ್ರಾರಂಭಿಸಿದ್ದಾರೆ. 

ಈ ಬೇವಿನ ಮರ ಹಲವು ವರ್ಷಗಳಿಂದ ಇದೆ. ಆದರೆ ಬೆಳೆಯುತ್ತಾ ಅದು ಆನೆಯ ಸೊಂಡಿಲ ಆಕೃತಿ ಪಡೆದಿದ್ದರಿಂದ ಸ್ಥಳೀಯ ವರ್ತಕರು ಅದಕ್ಕೆ ಕಣ್ಣು ಹಾಗೂ ದಂತಗಳನ್ನು ಬರೆದಿದ್ದಾರೆ.  ಕೆಲವು ತಿಂಗಳ ಹಿಂದೆ ಬಣ್ಣ ಹಾಕಿದ ನಂತರ ಈ ಮರ ಮತ್ತಷ್ಟು ಜನಪ್ರಿಯತೆ/ ಖ್ಯಾತಿ ಗಳಿಸಿದ್ದು, ಆ ಪ್ರದೇಶದಲ್ಲಿ ಸಂಚರಿಸುವ ಮಂದಿ ವಾಹನ ನಿಲ್ಲಿಸಿ ತಲೆಬಾಗಿ ನಮಿಸಿ ಮುಂದೆ ಸಾಗುತ್ತಾರೆ. 

ಈ ಬಗ್ಗೆ ಮಾತನಾಡಿರುವ ಕಲಬುರಗಿ ಮ್ಯಾಚಿಂಗ್ ಸೆಂಟರ್ ನ ಮಾಲಿಕರಾಗಿರುವ ಉದಯ್ ಕಲಬುರಗಿ, ಈ ಮರ ತಮ್ಮ ಮಳಿಗೆಯ ಪಕ್ಕದಲ್ಲೇ ಇದ್ದು, ಬಾಲ್ಯದಿಂದಲೂ ಈ ಮರವನ್ನು ನೋಡುತ್ತಿರುವುದಾಗಿ ಹೇಳಿದ್ದಾರೆ.

ಆನೆ ಆಕೃತಿಯನ್ನು ಹೊಂದಿರುವ ಮರ ಬೇವಿನ ಮರವಾಗಿದ್ದು, ಪಕ್ಕದಲ್ಲೇ ಆಲದ ಮರವೂ ಇದೆ. ಎರಡೂ ಮರಗಳೂ ಕನಿಷ್ಟ 100 ವರ್ಷಗಳಷ್ಟು ಹಳೆಯದ್ದಾಗಿದೆ ಎಂಬ ಮಾಹಿತಿ ನೀಡಿದ್ದಾರೆ. 

ನಾಲ್ಕು ವರ್ಷಗಳ ಹಿಂದೆಯೂ ಈ ಮರ ಆನೆಯ ಸೊಂಡಿಲ ಆಕೃತಿಯಲ್ಲಿ ಬೆಳೆಯತ್ತಿರುವುದನ್ನು ಯಾರೂ ಗಮನಿಸಿರಲಿಲ್ಲ. ಏಕಾ ಏಕಿ ಈ ಪ್ರದೇಶದಲ್ಲಿ ಮರ ಇಷ್ಟೊಂದು ಜನಪ್ರಿಯವಾಗಿದೆ ಎನ್ನುತ್ತಾರೆ ಉದಯ್ ಕಲಬುರಗಿ. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಜಾಗೃತೆ ವಾಹನ ಓಡಾಟ ಹೆಚ್ಚಿದೆ, ಮಂಗಗಳು ಸಾಯುತ್ತಿವೆ! ಸಾ. ಸಮ್ಮೇಳನ ಮುಗಿದು ಹೋದ ಮೇಲೆ……

ಉತ್ತರ ಕನ್ನಡ ಜಿಲ್ಲೆಯ ಸಾಹಿತ್ಯ- ಸಂಸ್ಕೃತಿ ಅಭಿವೃದ್ಧಿ ಬಗ್ಗೆ ಕ್ಷಕಿರಣ ಬೀರುವ ಉತ್ತರ ಕನ್ನಡ ಜಿಲ್ಲೆಯ ೨೪ ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿದೆ....

ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……‌

ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್‌ ಎಂಬ ಹಳ್ಳಿಯ ಒಕ್ಕಲಿಗ...

ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ

ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...

ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ

ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...

ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ

ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *