ಖರ್ಗೆ ಭೇಟಿ ಮಾಡಿದ ವಿಶ್ವನಾಥ್: ಸದ್ದಿಲ್ಲದೆ ಬಿಜೆಪಿ ‘ಗೂಡು’ ಬಿಟ್ಟು ಹಾರಲು ಸಿದ್ದವಾಯ್ತಾ ‘ಹಳ್ಳಿ ಹಕ್ಕಿ’?  ರಾಜ್ಯ ರಾಜಕೀಯದಲ್ಲಿ ಸಂಚಲನ!

ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್  ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

Vishwanth met Mallikarjuna kharge

ಬೆಂಗಳೂರು: ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್  ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಶ್ವನಾಥ್ ಭೇಟಿ ಮಾಡಿರುವ ಹಿನ್ನೆಲೆಯಲ್ಲಿ ಮತ್ತೆ ವಿಶ್ವನಾಥ್ ಪಕ್ಷಾಂತರ ಮಾಡುತ್ತಾರೆ ಎಂಬ ಸುದ್ದಿ ದಟ್ಟವಾಗಿದೆ. ಬಾಯ್ಬಿಟ್ರೆ ಸಾಕು ಸ್ವಪಕ್ಷದ​ ವಿರುದ್ಧ ಕಿಡಿಕಾರುವ ಬಿಜೆಪಿ ವಿಧಾನಪರಿಷತ್ ಸದಸ್ಯ  ವಿಶ್ವನಾಥ್, ಇದೀಗ ಸದ್ದಿಲ್ಲದೆ ಮರಳಿ ಕಾಂಗ್ರೆಸ್ ಸೇರುವ ಲಕ್ಷಣಗಳು ಕಾಣುತ್ತಿವೆ. ದೆಹಲಿಯಲ್ಲಿ ನಡೆದ ಈ ಅನಿರೀಕ್ಷಿತ ಬೆಳವಣಿಗೆಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ವಿಶ್ವನಾಥ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು , ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರ ನಡೆಯಿಂದ ಬೇಸತ್ತು ಕಾಂಗ್ರೆಸ್ ತೊರೆದಿದ್ದ ಹೆಚ್​ ವಿಶ್ವನಾಥ್ ಅವರು ಏಕಾಏಕಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹುಣಸೂರು ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತ ಬಳಿಕ ಅವರನ್ನು ಸಮಾಧಾನಪಡಿಸಲೆಂದೇ ಬಿಜೆಪಿ ಅವರಿಗೆ ಸಾಹಿತ್ಯ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯನಾಗಿ ಮಾಡಿತ್ತು. ಆದರೂ ವಿಶ್ವನಾಥ್, ಸ್ವಪಕ್ಷದ ಸರ್ಕಾರದ ಬಹಿರಂಗವಾಗಿ ಟೀಕಿಸುತ್ತಲೇ ಇದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ. ಇದು ಬರೀ ಶುಭ ಹಾರೈಕೆಯ ಭೇಟಿಯಲ್ಲ. ಇದರ ಹಿಂದೆ ಬೇರೆಯದ್ದೇ ರಾಜಕೀಯ ಲೆಕ್ಕಚಾರಗಳು ಅಡಗಿವೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *