ಈ ವಾರ ಥಂಡಾ…ಥಂಡಾ..ಕೂಲ್‌….,ಕೂಲ್‌ ಯಾಕೆ ಗೊತ್ತೆ?

ಮಾಂಡೌಸ್ ಚಂಡಮಾರುತ ಎಫೆಕ್ಟ್: ಬೆಂಗಳೂರು ಕೂಲ್ ಕೂಲ್, ರಾಜ್ಯ ರಾಜಧಾನಿಯಲ್ಲಿ ಮುಂದುವರೆದ ಜಿಟಿ ಜಿಟಿ ಮಳೆ

ತಮಿಳುನಾಡಿನ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿಗೂ ಮಾಂಡೌಸ್ ಎಫೆಕ್ಟ್‌ ತಟ್ಟಿದ್ದು, ಇದೀಗ ಸಿಲಿಕಾನ್ ಸಿಟಿ ಬೆಂಗಳೂರು ಕೂಲ್ ಕೂಲ್ ಆಗಿದೆ.

File photo

ಕರಾವಳಿ,ಮಲೆನಾಡು ಸೇರಿದಂತೆ ಬಹುತೇಕ ರಾಜ್ಯಾದ್ಯಂತ ಇಂದು ನಿನ್ನೆ,ನಾಳೆ ವರೆಗೆ ವಾತಾವರಣ ಶೀತವಾಗಿರಲು ಇದೇ ಕಾರಣ ಎನ್ನಲಾಗಿದೆ.

ಬೆಂಗಳೂರು: ತಮಿಳುನಾಡಿನ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿಗೂ ಮಾಂಡೌಸ್ ಎಫೆಕ್ಟ್‌ ತಟ್ಟಿದ್ದು, ಇದೀಗ ಸಿಲಿಕಾನ್ ಸಿಟಿ ಬೆಂಗಳೂರು ಕೂಲ್ ಕೂಲ್ ಆಗಿದೆ.

ಈಗಾಗಲೇ 3 ದಿನದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ತುಂತುರು ಮಳೆಯು ಇನ್ನೂ ಮುಂದುವರೆದಿದೆ. ಇಂದೂ ಕೂಡ ಹಗುರದಿಂದ ಸಾಧಾರಣೆ ಮಳೆಯು ದಿನವೀಡಿ ಮುಂದುವರೆಯಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಜಾನೆಯಿಂದಲೇ ದಟ್ಟ ಮಂಜು ಕವಿತ ವಾತಾವರಣವಿದ್ದು, ಬೆಂಗಳೂರಿನಲ್ಲಿ ತಾಪಮಾನ 18 ಡಿಗ್ರಿ ಸೆಲ್ಸಿಯಸ್’ಗೆ ಇಳಿಕೆಯಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆಗಿಂತ‌ ಚಳಿಯೇ ಹೆಚ್ಚು ಕಾಡುತ್ತಿದೆ. ಚಂಡಮಾರುತದ ಗಾಳಿ ಕೆಳಭಾಗದಲ್ಲಿ ಬೀಸುತ್ತಿದ್ದು, ಚಳಿ ಜೋರಾಗಿದೆ.

ಚಂಡಮಾರುತದ ಪರಿಣಾಮ ವೀಕೆಂಡ್ ಮೂಡ್‌ನಲ್ಲಿದ್ದ ಬೆಂಗಳೂರಿಗರಿಗೆ ಮಳೆ ಮತ್ತು ಚಳಿಯ ಅಬ್ಬರಕ್ಕೆ ಥಂಡ ಹೊಡೆದಂತಾಗಿದೆ. ಇನ್ನೂ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಂಡಮಾರುತದ ಎಫೆಕ್ಟ್ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಇಂದು, ನಾಳೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆಯಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉಳಿದಂತೆ ಕರಾವಳಿ, ಉತ್ತರ ಒಳನಾಡಿಗೆ ಸಾಧಾರಣ ಮಳೆ ಮುನ್ಸೂಚನೆಯಿದೆ. ಮುಂದಿನ 24 ಗಂಟೆಗಳ‌ ಕಾಲ ಕವಿದ ವಾತಾವರಣವ ಇರಲಿದೆ. ಗಾಳಿಯ ಪ್ರಮಾಣ 65 ರಿಂದ 75 ಕೀಮೀ‌ ವೇಗದಲ್ಲಿ ಇರಲಿದ್ದು, ಡಿಸೆಂಬರ್ 14 ರವರೆಗೂ ಮಳೆ ಇರಲಿದೆ.

ಸದ್ಯ ನಗರದಲ್ಲಿ ಕನಿಷ್ಟ ಉಷ್ಣಾಂಶ 18ಡಿಗ್ರಿ ಸೆಲ್ಸಿಯಸ್ ಇದ್ದು ಗರಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇದೆ . ಹೀಗಾಗಿ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *