ಸಿದ್ಧಾಪುರದಲ್ಲಿ ಕ್ರೀಡೆ ಮತ್ತು ನಾಟಕೋತ್ಸವ

ಸಿದ್ದಾಪುರ: ದಿನ ನಿತ್ಯ ಕಚೇರಿಯಲ್ಲಿ ಕುಳಿತು ಕರ್ತವ್ಯ ನಿರ್ವಹಿಸುವವರು ಕ್ರೀಡೆಯಲ್ಲಿ ತೊಡಗಿಕೊಂಡಾಗ ನಮ್ಮ ದೈಹಿಕ ಸಾಮರ್ಥ್ಯ ಹಾಗೂ ಅರೋಗ್ಯದ ಸ್ಥಿರತೆ ಬಗ್ಗೆ ತಿಳಿಯುತ್ತದೆ ಎಂದು ಸಿದ್ದಾಪುರ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ತಿಮ್ಮಯ್ಯ ಜಿ ಹೇಳಿದರು ಅವರು ಕಡಕೇರಿ ಕಾನಳ್ಳಿಯ ಸುಭಾಷಚಂದ್ರಬೋಸ್ ಕ್ರೀಡಾಂಗಣದಲ್ಲಿ ತಾಲೂಕಾ ಪತ್ರಕರ್ತರ ಸಂಘದ ಆಯೋಜಕತ್ವದಲ್ಲಿ ನಡೆದ ತೃತೀಯ ವರ್ಷದ ವಿವಿಧ ಇಲಾಖೆಗಳ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಯ ಸಮಾರೋಪ ಸಮಾರಂಭ ದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು.


ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಹೆಗಡೆ ಮಾತನಾಡಿ ಪತ್ರಕರ್ತರ ಸಂಘ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿದ್ದರೂ ಮುಂದಿನ ದಿನಗಳ ಲ್ಲಿ ಇನ್ನು ಹೆಚ್ಚು ಇಲಾಖೆಗಳಿಗೆ ಅವಕಾಶ ಕಲ್ಪಿಸಿ ಎಲ್ಲರೂ ಸೇರುವಂತಾಗಲಿ ಎಂದರು.


ಬೇಡ್ಕಣಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಮೂರ್ತಿ ಕಡಕೇರಿ ಮಾತನಾಡಿದರು, ಹೆಸ್ಕಾಂ ನ ದಿಲೀಪ್ ಇನ್ಸ್ಪೆಕ್ಟರ್ ಕುಮಾರ್ ಕೆ, ಪಿ ಎಸ್ ಐ ಮಲ್ಲಿಕಾರ್ಜುನ ಕೊರಾ ಣಿ ಉಪಸ್ಥಿತರಿದ್ದರು.

ಪತ್ರಕರ್ತ ಸಂಘದ ಅಧ್ಯಕ್ಷ ಗಂಗಾಧರ್ ಕೊಳಗಿ ಅಧ್ಯಕ್ಷತೆ ವಹಿಸಿದ್ದರು
ಎರಡು ದಿನಗಳು ನಡೆದ ಪಂದ್ಯಾವಳಿಯಲ್ಲಿ ಹೆಸ್ಕಾಂ ಪ್ರಥಮ, ಪೊಲೀಸ್ ದ್ವಿತೀಯ ಸ್ಥಾನ ಪಡೆದವು.

ಸಿದ್ದಾಪುರ. ಪಟ್ಟಣದ ಶಂಕರ ಮಠದಲ್ಲಿ ನಾಲ್ಕು ದಿನಗಳ ನಾಟಕೋತ್ಸವವನ್ನು ರಂಗಕರ್ಮಿ, ನಿರ್ದೇಶಕ,ನೇಪಥ್ಯ ಕಲಾವಿದ ಪುರುಷೋತ್ತಮ ತಲವಾ ಟ ಉದ್ಘಾಟಿಸಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ರಂಗ ಸೌಗಂಧ ಹಾಗೂ ಒಡ್ಡೋಲಗ ನಾಟಕ ತಂಡಗಳು ನಡೆಸುತ್ತಿರುವ ನಾಲ್ಕು ದಿನಗಳ ನಾಟಕೋತ್ಸವಕ್ಕೆ ಚಾಲನೆ ನೀಡಿದ ಪುರುಷೋತ್ತಮ ತಲವಾ ಟ ಅವರಿಗೆ ರಂಗ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ರಂಗಭೂಮಿಯ ನೇಪಥ್ಯ‌ದಲ್ಲೇ ಹೆಚ್ಚುಕೆಲಸ ನಿರ್ವಹಿಸಿದ ತಮಗೆ ಈ ಗೌರವ ಸಂದಿದ್ದಕ್ಕೆ ಸಂತೋಷವಾಗಿದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ರಾಘವೇಂದ್ರ ಶಾಸ್ತ್ರಿ, ಸೀತಾರಾಮ ಶಾಸ್ತ್ರಿಯವರ ರಂಗಭೂಮಿಯ ಪ್ರೀತಿಯ ಬಗ್ಗೆ ಮಾತನಾಡಿದರು. ಅಧ್ಯಕ್ಷತೆವಹಿಸಿದ್ದ ರಂಗಕರ್ಮಿ ಶ್ರೀಧರ ಹೆಗಡೆ ಹುಲಿಮನೆ ಮಾತನಾಡುತ್ತಾ ತಮ್ಮ ತಂದೆ ಸೀತಾರಾಮ ಶಾಸ್ತ್ರಿ ಯವರು ಹಾಕಿಕೊಟ್ಟ ರಂಗಪರಂಪರೆಯನ್ನು ತಮ್ಮ ಕುಟುಂಬ ರಂಗಾಸಕ್ತರ ನೆರವು ಮತ್ತು ಸಹಕಾರದೊಂದಿಗೆ ಮುನ್ನಡೆಸುತ್ತಿದೆ. ಇದನ್ನು ಇನ್ನಷ್ಟು ಬೆಳೆಸುವ ಕನಸಿದೆ ಎಂದರು. ಗಣಪತಿ ಹೆಗಡೆ ಹುಲಿಮನೆ ಸ್ವಾಗತಿಸಿದರು ಶ್ರೀಪಾದ ಹೆಗಡೆ ವಂದಿಸಿದರು. ಗಣಪತಿ ಗುಂಜಗೋಡ ನಿರೂಪಿಸಿದರು. ನಂತರ ಡಾ.ಶ್ರೀಪಾದ ಹೆಗಡೆಯವರು ನಿರ್ದೇಶಿಸಿದ ಆನಂದ ಭಾವಿನಿ ಎಂಬ ಏಕವ್ಯಕ್ತಿ ನಾಟಕವನ್ನು ಸಿರಿ ವಾನಳ್ಳಿಯವರು ಬಹು ಮನೋಜ್ಞವಾಗಿ ಅಭಿನಯಿಸಿ ಪ್ರೇಕ್ಷಕರ ಮನಗೆದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *