ಅಡಕೆ ಬೆಳೆಗಾರರ ಸಮಾವೇಶದಲ್ಲೂ ಕಾಡು ಪ್ರಾಣಿ ಹಾವಳಿ ಚರ್ಚೆ

ಕೃಷಿ ಚಟುವಟಿಕೆ ಅನುಕೂಲಕ್ಕೆ ಅವಶ್ಯವಿರುವ ಹೊಸ ಸಂಶೋಧನೆಗಳ ಅಗತ್ಯ ಹೆಚ್ಚಿದ್ದು ಖಾಸಗಿ,ಸಹಕಾರ ಕ್ಷೇತ್ರದ ಸಂಶೋಧನೆಗಳಿಗೆ ಸರ್ಕಾರ ಹೆಚ್ಚಿನ ನೆರವು ನೀಡುತ್ತಿದೆ. ಸಂಸ್ಥೆಗಳು ಈ ಅನುಕೂಲವನ್ನು ಬಳಸಿಕೊಳ್ಳುವ ಜೊತೆಗೆ ರೈತರಿಗೆ ಯಾಂತ್ರೀಕರಣಕ್ಕೆ ಉತ್ತೇಜನ ನೀಡಿದರೆ ಸರ್ಕಾರ ಸಹಾಯಧನದ ರೂಪದಲ್ಲಿ ಸಹಕರಿಸಲು ಸಿದ್ಧವಿದೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಸಿದ್ಧಾಪುರ ಟಿ.ಎಂ.ಎಸ್.‌ ನಲ್ಲಿ ನಡೆದ ವಿಜಯಕರ್ನಾಟಕ ಪತ್ರಿಕೆಯ ಆಯೋಜನೆಯ ಅಡಕೆ ಬೆಳೆಗಾರರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸಂಘಟನೆ ಇದ್ದರೆ ಎನನ್ನೂ ಸಾಧಿಸಲು ಸಾಧ್ಯ ಅಡಕೆ ಬೆಳೆಗಾರರು ಸಹಕಾರಿ ಸಂಸ್ಥೆಗಳ ಮೂಲಕ ತಮ್ಮ ಒಗ್ಗಟ್ಟು,ಸಂಘಟನೆಯ ಶಕ್ತಿ ಪ್ರದರ್ಶಿಸುತಿದ್ದಾರೆ.ರೈತರ ಜೊತೆಗೆ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಹೊಸ ಸಂಶೋಧನೆಗಳನ್ನು ಮಾಡಿ ರೈತರ ನೆರವಿಗೆ ಬರಬೇಕು ಎಂದು ಅಪೇಕ್ಷಿಸಿದ. ಸ್ಫೀಕರ್
ಕಾಡುಪ್ರಾಣಿಗಳ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ರೈತರು ಸರ್ಕಾರ,ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರುತ್ತಿರು ತ್ತಾರೆ. ರೈತರ ಪರಂಪರಾಗತ ಮತ್ತು ಹೊಸ ಸಮಸ್ಯೆಗಳ ಪರಿಹಾರಕ್ಕೆ ಇಂಥ ಕಾರ್ಯಕ್ರಮಗಳಿಂದ ಉತ್ತರ ಸಿಗಬೇಕು ಎಂದರು.
ವಿಜ್ಞಾನಿಗಳು, ಸಹಕಾರಿಗಳು ಸೇರಿದ ಸಮಾವೇಶದಲ್ಲಿ ರೈತರ ಸಮಸ್ಯೆಗಳು,ಅವುಗಳಿಗೆ ಪರಿಹಾರೋಪಾಯಗಳ ಬಗ್ಗೆ ಚರ್ಚಿಸಲಾಯಿತು.

ಸಿದ್ದಾಪುರ:- ಇಂದಿನ ದಿನಮಾನದಲ್ಲಿ ರೈತರು ಪ್ರಕೃತಿಯ ಜೊತೆಯಲ್ಲಿ ಕಲಿಯುವ ಶಿಕ್ಷಣ ಬಹಳ ದೊಡ್ಡದಿದೆ. ನಮ್ಮ ಉಳವಿಗಾಗಿ ಎಲ್ಲರೂ ಸಂಘಟಿತರಾಗಿ ಹೋರಾಡಿದರೆ ನಮಗೆ ಹತಾಶರಾಗುವ ಪ್ರಮೇಯವೇ ಬರುವುದಿಲ್ಲ ಎಂದು ವಿಧಾನ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಟಿ ಎಂ ಎಸ್ ಸಭಾಭವನದಲ್ಲಿ ವಿಜಯ ಕರ್ನಾಟಕ ಸಹಯೋಗದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಅಡಿಕೆ ಬೆಳೆಗಾರರ ಸಮಾವೇಶ, ಹಕ್ಕೊತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಬೆಳಗಾರರ ಸಂಘ ಸಂಸ್ಥೆಗಳಿಂತ ಹೆಚ್ಚಾಗಿ ಅಡಿಕೆ ಬೆಳೆಗಾರರ ಸಂಘ ಸಂಸ್ಥೆಗಳು ನಮ್ಮ ಹಿತ ರಕ್ಷಣೆಗೆ ನಿಂತಿವೆ.
ಕಾಡು ಪ್ರಾಣಿಗಳ ಹಾವಳಿ ತಡೆಯುವುದೇ ರೈತರಿಗೆ ಚಿಂತೆಯಾಗಿದೆ. ಕೇವಲ ಸರಕಾರವನ್ನು ಅವಲಂಬಿಸದೆ ಸಂಘ ಸಂಸ್ಥೆಗಳು, ವಿಜ್ಞಾನಿಗಳು
‌ರೋಗ, ಕೀಟ ಬಾಧೆಗೆ ಸಂಶೋಧನೆ ಮಾಡಿ ಪರಿಹಾರ ಕಂಡುಕೊಳ್ಳುವಂತಾಗಬೇಕು.
ಕೂಲಿಕಾರರ ಸಮಸ್ಯೆಗಳನ್ನು ಪರಿಹರಿಸಲು ಯಾಂತ್ರೀಕರಣ ಅವಶ್ಯಕತೆ ಇದೆ. ಅಲ್ಲದೆ ಮೌಲ್ಯ ವರ್ಧನೆ ಮಾಡಿ ಮಾರಾಟ ಮಾಡಲು ಪ್ರೋತ್ಸಾಹ ಮಾಡಬೇಕು. ಎಲ್ಲಾ ಸಮಸ್ಯೆಗಳನ್ನು ಎದುರಿಸುವ ಶಕ್ತಿ ನಮ್ಮಲ್ಲಿರಬೇಕು ಎಂದರು.

ಇದೇ ಸಂದರ್ಭದಲ್ಲಿ ಅಡಿಕೆ ಬೆಳೆಯ ಬೆಲೆ ಬಹುತೇಕ ಸ್ಥಿರವಾಗಿರುವುದಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಹಾಗೂ ರಾಜ್ಯ ಸರಕಾರವನ್ನು ಅಭಿನಂದಿಸಿದರು.
ಅಡಿಕೆ ಬೇಳೆ ಹಾನಿಕಾರಕವಾದುದಲ್ಲ‌. ನಮ್ಮಲ್ಲಿ ಪೂಜ್ಯ ಭಾವನೆ ಇದೆ. ಪಾರಂಪರಿಕ ಅಡಿಕೆ ಬೆಳೆಗಾರರ ಭವಿಷ್ಯ ಏನು ಎನ್ನುವ ಚಿಂತೆ ನಮಗೆ ಕಾಡುತ್ತಿದೆ. ನಮಗೆ ಸವಾಲಿದೆ. ಸರ್ಕಾರ
ಹೊಸತನ ದಿಂದ ಮುನ್ನಡೆಯುವ ಮಾರ್ಗವನ್ನು ಕಂಡುಕೊಳ್ಳಬೇಕು. ಹೊಸತನದ ಚಟುವಟಿಕೆ ಗಳಿಗೆ ಉತ್ತೇಜನ ನೀಡಬೇಕು.
ಅಧ್ಯಕ್ಷತೆ ವಹಿಸಿದ್ದ ಟಿ ಎಮ್ ಎಸ್ ಅಧ್ಯಕ್ಷ ಆರ್ ಎಂ ಹೆಗಡೆ ಬಾಳೆಸರ ಮಾತನಾಡಿ ಪಾರಂಪರಿಕ ಅಡಿಕೆ ಬೆಳೆಗಾರರ ಪರಿಸ್ಥಿತಿ ಸಂಕಷ್ಟದಲ್ಲಿದೆ. ನೀರಾವರಿ ಪ್ರದೇಶದಲ್ಲಿ ನಿಗದಿಪಡಿಸಿದ ಜಾಗದಲ್ಲಿ ಮಾತ್ರ ಅಡಿಕೆ ಬೆಳೆಯುಂತಾಗಬೇಕು. ನಮ್ಮಲ್ಲಿ ಅಡಿಕೆ ಹೊರತುಪಡಿಸಿ ಬೇರೆ ಬೆಳೆಯಲು ಪೂರಕವಾದ ಅವಕಾಶ ಇಲ್ಲಾ. ಅಡಿಕೆ ಯನ್ನು ಆಮುದು ಮಾಡಿಕೊಳ್ಳುವ ಅವಶ್ಯಕತೆ ಇಲ್ಲಾ. ನಮಗೆ ಬೇಕಾಗುವ ಅಡಿಕೆ ನಮ್ಮಲ್ಲಿಯೇ ಬೆಳೆಯಲಾಗುತ್ತಿದೆ‌. ಅವಶ್ಯಕತೆ ಇದ್ದರೆ ಉತ್ತಮ ಗುಣಮಟ್ಟದ ಅಡಿಕೆಯನ್ನು ಆಮುದು ಮಾಡಿಕೊಳ್ಳಲಿ. ಪಾರಂಪರಿಕ ಅಡಿಕೆ ಬೆಳೆಗಾರರ ಹಿತ ದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸಬೇಕು ಎಂದರು.
ರಾಜ್ಯ ಅಡಿಕೆ ಮಹಾಮಂಡಳದ ನಿರ್ದೇಶಕ ರಾದ ಎಚ್ ಎಸ್ ಮಂಜಪ್ಪ, ಕ್ಯಾಂಪ್ಕೋದ ಅಧ್ಯಕ್ಷ ಕಿಶೋರಕುಮಾರ್ ಕೊಡ್ಗಿ, ಟಿ ಎಸ್ ಎಸ್ ಕಾರ್ಯಾಧ್ಯಕ್ಷ ಅರ್ ಎಸ್ ಹೆಗಡೆ ಕಡವೆ, ಕದಂಬ ಮಾರ್ಕೆಟಿಂಗ್ ನ ಶಂಬುಲಿಂಗ ಹೆಗಡೆ, ಲಯನ್ಸ ಮಾಜಿ ಗವರ್ನರ್ ರವಿ ಹೆಗಡೆ ಹೂವಿನಮನೆ, ರಾಘವೇಂದ್ರ ಶಾಸ್ತ್ರಿ, ವಿಜ್ಞಾನಿ ರವಿ ಭಟ್ ಕಾಸರಗೋಡು. ತೋಟಗಾರಿಕಾ ತಜ್ಞ ವಿಜಯ ಎನ್ ಹೆಗಡೆ, ಟಿ ಎಂ ಎಸ್ ಉಪಾದ್ಯಕ್ಷ ಎಮ್ ಜಿ ನಾಯ್ಕ ಹಾದ್ರಿಮನೆ. ವ್ಯವಸ್ಥಾಪಕ ಸತೀಶ ಹೆಗಡೆ ಉಪಸ್ಥಿತರಿದ್ದರು.
ವಿಜಯ ಕರ್ನಾಟಕದ ಸ್ಥಾನಿಕ ಸಂಪಾದಕ ಡಾ, ಬಂಡು ಕುಲಕರ್ಣಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿಜಯ ಕರ್ನಾಟಕ ದ ಸ್ಥಾನಿಕ ವರದಿಗಾರ ಗಣೇಶ ಭಟ್ ಸ್ವಾಗತಿಸಿದರು. ಜಿ ಜಿ ಹೆಗಡೆ ಬಾಳಗೋಡ ನಿರೂಪಿಸಿದರು.

https://samajamukhi.net/2022/12/31/17517/
O

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *