ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ…..

ಅಮಿತ್ ಶಾ ಆಟ ನನ್ನ ಮುಂದೆ ನಡೆಯಲ್ಲ, ದೇವೇಗೌಡರ ಕಾಲ್ಬೆರಳ ಉಗುರಿಗೂ ಅವರು ಸಮವಲ್ಲ: ಎಚ್ ಡಿ ಕುಮಾರಸ್ವಾಮಿ ಕಿಡಿ

ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕಾಲ್ಬೆರಳ ಉಗುರಿಗೂ ಸಮನಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

HD Kumaraswamy

ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್‌ ಶಾ  ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕಾಲ್ಬೆರಳ ಉಗುರಿಗೂ ಸಮನಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಹೇಳುವ ಅಮಿತ್ ಶಾ ಒಂದೇ ಒಂದು ಭ್ರಷ್ಟಾಚಾರವನ್ನು ಜನರ ಮುಂದಿಡಬೇಕಿತ್ತು. ಆದರೆ ಜೆಡಿಎಸ್ ಪಕ್ಷದ ಭಯದಿಂದ ಬಾಯಿಗೆ ಬಂದಹಾಗೆ ಹೇಳಿ ಹೋಗಿದ್ದಾರೆ ಎಂದು ಕಿಡಿಕಾರಿದರು. ಎಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ, ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ, ಅಥವಾ ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಕುಟುಂಬ ಒಂದೇ ಒಂದು ಭ್ರಷ್ಟಾಚಾರ ಮಾಡಿದ್ದರೆ ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ದೇಶದಲ್ಲಿ 800ಕ್ಕೂ ಹೆಚ್ಚು ಶಾಸಕರನ್ನು, ಸಂಸದರನ್ನು ಖರೀದಿ ಮಾಡಿರುವ ಇತಿಹಾಸ ಇದ್ರೇ ಅದು ಬಿಜೆಪಿಯದ್ದು. ಚುನಾವಣೆಗೂ ಮುನ್ನವೇ ಆಪರೇಷನ್‌ ಕಮಲ ಹುನ್ನಾರ ಮಾಡಿದೆ. ರಾಜ್ಯದಿಂದ ಬಿಜೆಪಿ ಪಕ್ಷವನ್ನು ಕಳುಹಿಸಲು ಜೆಡಿಎಸ್‌ ಪಣ ತೊಟ್ಟಿದೆ ಎಂದ ಅವರು, ನಿಮ್ಮ ರಾಜಕಾರಣ ಉತ್ತರ ಭಾರತದಲ್ಲಿ ಇಟ್ಟುಕೊಳ್ಳಿ, ಕರ್ನಾಟಕದಲ್ಲಿ ಅಲ್ಲ ಎಂದು ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿದರು.

ಇದೇ ಅಮಿತ್ ಶಾ ತನ್ನ ಮಗನಿಗೆ ಬಿಸಿಸಿಐ ವಾರಸುದಾರಿಕೆ ಯಾವ ಅರ್ಹತೆ ಪ್ರತಿಭೆ ಮೇಲೆ ಕೊಡಿಸಿದ್ದಾರೆ ಗೊತ್ತು. ಇವರ ಪಕ್ಷದ ಭ್ರಷ್ಟಾಚಾರದಿಂದ ಬೇಸತ್ತು ಜನ ಸಾಯುತ್ತಿದ್ದಾರೆ. ಮೊನ್ನೆ ತುಮಕೂರಿನಲ್ಲಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದ, ನಿನ್ನೆ ಬೆಂಗಳೂರಿನಲ್ಲಿ ಇವರ ಪಕ್ಷದ ಶಾಸಕರ ಹೆಸರನ್ನು ಬರೆದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ನೀಡಿರುವ ಹೊಸ ವರುಷದ ಕೊಡುಗೆ ಎಂದು ಲೇವಡಿ ಮಾಡಿದರು.

ಮುಂಬರುವ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಆದರೆ ಯಾರು ಇವರ ಮನೆ ಬಾಗಿಲಿಗೆ ಅರ್ಜಿ ಹಿಡಿದುಕೊಂಡು ಹೋಗಿದ್ದರು. 2008 ರಲ್ಲಿ ಇದೇ ಬಿಜೆಪಿಯವರು ಜೆಡಿಎಸ್ ಮನೆ ಬಾಗಿಲ ಬಳಿ ನಿಂತಿದ್ದರು ಎಂದು ಕುಟುಕಿದರು.

https://samajamukhi.net/2023/01/03/%e

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *