ನಾಳೆ ಕಾನಸೂರಿನಲ್ಲಿ ಯಕ್ಷಗಾನ ಜೋಡಾಟ


ಕಾನಸೂರು: ಶ್ರೀ ಕ್ಷೇತ್ರ ಸಿಗಂದೂರು ಯಕ್ಷಗಾನ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಕಾನಸೂರಿನ ಮಾದನ ಕಳ್ ದಲ್ಲಿ ಕೂಡಾಟ ಮತ್ತು ಜೋಡಾಟ ಹಾಗೂ ಸನ್ಮಾನ ಕಾರ್ಯಕ್ರಮ ಜನವರಿ ೬ರಂದು ನಡೆಯಲಿದೆ.
ಕಾರ್ಯಕ್ರಮವನ್ನು ಬೈಲಹೊಂಗಲ ಡಿವೈಎಸ್ಪಿ ರವಿ ಡಿ ನಾಯ್ಕ ಉದ್ಘಾಟಿಸಲಿದ್ದಾರೆ. ಕಾನಸೂರು ಗ್ರಾಪಂ ಅಧ್ಯಕ್ಷ ವೀರಭದ್ರ ಜಂಗಣ್ಣನವರ್ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ರವಿಕುಮಾರ್, ಉದ್ಯಮಿ ಆರ್‌ಜಿ ಶೇಟ್, ಗ್ರಾಪಂ ಸದಸ್ಯ ಶಶಿಕಾಂತ ನಾಮಧಾರಿ, ನಿವೃತ್ತ ಶಿಕ್ಷಕ ಕೆ.ಆರ್. ಹೆಗಡೆ, ಸಿರ್ಸಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಉಪೇಂದ್ರ ಪೈ, ಗ್ರಾಪಂ ಉಪಾಧ್ಯಕ್ಷೆ ಶಶಿಪ್ರಭಾ ಹೆಗಡೆ ಹಾಗೂ ನಿಕಟಪೂರ್ವ ಯಕ್ಷಗಾನ ಅಕಾಡೆಮಿ ಸದಸ್ಯೆ ನಿರ್ಮಲ ಹೆಗಡೆ ಗೋಳಿ ಕೊಪ್ಪ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಯಕ್ಷಗಾನ ಕಲಾವಿದ ವಿದ್ಯಾಧರ ಜಳವಳ್ಳಿ, ರಘುಪತಿ ನಾಯ್ಕ್ ಹೆಗ್ಗರಣಿ, ಅತ್ಯುತ್ತಮ ಭಾಣಸಿಗ ರಘುನಂದನ್ ಭಟ್ ಶಿರಳಗಿ, ರೇಖಾ ಹೆಗಡೆ ತುಂಬೆಬೀಡು, ಶಿಕ್ಷಕ ಮನೋಹರ್ ದುಂಡಸಿ, ಗುತ್ತಿಗೆದಾರ ಮುತ್ತುಸ್ವಾಮಿ, ವೈದ್ಯ ಡಾಕ್ಟರ್ ವಿಕ್ರಂ ಶೆಟ್ಟಿ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪಶಸ್ತಿ ಪುರಸ್ಕೃತ ಕುಮಾರಿ ಕೌಶಲ್ಯ ಹೆಗಡೆ ಹಾಗೂ ಕುಶ ರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕ ವೆಂಕಟರಮಣ ಹೆಗಡೆ ತಿಳಿಸಿದ್ದಾರೆ.

ಶನಿವಾರ ಶಿರಸಿ ಬಂದ್….
ಸಿದ್ದಾಪುರ:- ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದಲ್ಲಿ ಶ್ರೀಮಠದ ಸಂಕಷ್ಟಾಪನೆ 14 ನೇ ವಾರ್ಷಿಕೋತ್ಸವ, ಮಹಾಸ್ವಾಮಿಗಳ ಜಂಗಮ ದೀಕ್ಷೆ 24 ನೇ ಹಾಗೂ 39ನೇ ಜನ್ಮದಿನ ವಾರ್ಷಿಕೋತ್ಸವ ಮತ್ತು ಜಗದ್ಗುರು ಡಾಕ್ಟರ್ ಶ್ರೀ ಬಸವ ಮಾಚಿದೇವಸ್ವಾಮಿಗಳ್ ರವರ ಐದನೇ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ “ಕಾಯಕ ಜನೋತ್ಸವ – 2023” ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಿದ್ದಾಪುರ ತಾಲೂಕ ಮಡಿವಾಳ ಸಮಾಜದ ಅಧ್ಯಕ್ಷರಾದ ಪಿ ಬಿ ಹೊಸೂರ್ ಕೋರಿದ್ದಾರೆ.‌


ಪಟ್ಟಣದ ರಾಘವೇಂದ್ರ ಮಠದ ಸಭಾಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ವಿಷಯ ತಿಳಿಸಿ 2023 ಜನವರಿ ಐದು ಗುರುವಾರ ಮತ್ತು 6 ಶುಕ್ರವಾರ ರಂದು ಕಾರ್ಯಕ್ರಮಗಳು ನಡೆಯಲಿದ್ದು ಮಾಚಿದೇವರ ಜೀವನ ಮೌಲ್ಯಗಳು ಕುರಿತು ಉಪನ್ಯಾಸ, ಸಾಂಸ್ಕೃತಿಕ ಸಂಭ್ರಮ, ಮತ್ತು ಸಾಧಕರ ಸಮಾವೇಶ ನಡೆಯಲಿದೆ. ಅಂದು ಮಾಚಿದೇವ ಸೇವಾ ರತ್ನ ಪ್ರಶಸ್ತಿ ಪ್ರದಾನ, ವಿವಿಧ ದತ್ತಿ ನಿಧಿಗಳ ದಾನಿಗಳಿಗೆ ಪ್ರಶಸ್ತಿ ಪ್ರಧಾನ, ವಿಶ್ವ ಆದರ್ಶ ಕುಟುಂಬ ಪ್ರಶಸ್ತಿ ಪ್ರಧಾನ, ಕಾಯಕಶ್ರೀ ಪ್ರಶಸ್ತಿ ಪ್ರಧಾನ, ಮಲ್ಲಿಗೆಮ್ಮ ಮಾತೋಶ್ರೀ 2023 ಪ್ರಶಸ್ತಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಮಡಿವಾಳ ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *