ಭಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ  ಬಂದ್

ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು…

Bajrang Dal worker

ಸಾಗರ: ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು, ಇದರ ಬೆನ್ನಲ್ಲೇ ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆಗಳು ಮಂಗಳವಾರ ಸಾಗರ ಬಂದ್’ಗೆ ಕರೆ ನೀಡಿವೆ.

ಸಾಗರದ ನೆಹರು ನಗರ ನಿವಾಸಿ ಸುನೀಲ್ ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲು ಯತ್ನ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ದುಷ್ಕರ್ಮಿಗಳ ಈ ಕೃತ್ಯದ ದೃಷ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು, ಕಾರ್ಯಕರ್ತರು ಸಾಗರ ಟೌನ್ ಪೊಲೀಸ್ ಠಾಣೆ ಎಂದುರು ಪ್ರತಿಭಟನೆ ನಡೆಸಿ ಮಂಗಳವಾರ ಸ್ವಯಂ ಘೋಷಿತ ಬಂದ್’ಗೆ ಕರೆ ನೀಡಿದ್ದಾರೆ.

ಘಟನೆ ಸಂಬಂಧ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿಕೆ ಸುದ್ದಿಗಾರರೊಂದಿಗೆ ಮಾತನಾಡಿ, ಸಮೀರ್ ಎಂಬಾತ ಸಾಗರದ ಜ್ಯುವೆಲ್ಲರಿ ಶೋರೂಂ ಎದುರು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಭಜರಂಗದಳದ ಕಾರ್ಯಕರ್ತ ಸುನಿಲ್ ಎಂಬಾತನ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಸಮೀರ್ ತನ್ನ ಮೋಟಾರ್ ಸೈಕಲ್ ನಲ್ಲಿದ್ದ ಉದ್ದನೆಯ ಆಯುಧವನ್ನು ತೆಗೆದುಕೊಂಡು ಸುನೀಲ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

“ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ದಾಳಿಯ ಕಾರಣವನ್ನು ಕಂಡುಹಿಡಿಯಲು ನಾವು ಮೂರು ತಂಡಗಳನ್ನು ರಚಿಸಿದ್ದೇವೆ. ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ಸಾಗರದ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಸುನೀಲ್ ಮನೆಗೆ ಭೇಟಿ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸಾಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *