ರಾಜ್ಯ ರಾಜಕೀಯಕ್ಕೆ ಸುದೀಪ್: ರಮ್ಯಾ ಮೂಲಕ ‘ಕಿಚ್ಚ’ನಿಗೆ ಕಾಂಗ್ರೆಸ್ ಗಾಳ!

ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ

Sudeep

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಕಿಚ್ಚ ಸುದೀಪ್‌ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಕಣಕ್ಕಿಳಿಸುವ ಪ್ರಯತ್ನಗಳು ನಡೆಯುತ್ತಿವೆ.

ಇದೀಗ ಸರ್ಕಾರದ ವಿರುದ್ಧ ವಿವಿಧ ಅಭಿಯಾನಗಳ ಮೂಲಕ ಕಾಂಗ್ರೆಸ್‌ ವಿಶ್ವಾಸ ಹೆಚ್ಚಾಗಿದ್ದು, ಅದಕ್ಕೆ ಕಿಚ್ಚ ಸುದೀಪ್‌ ಬಲ ಸೇರಿದರೆ ಮತ್ತೂ ಶಕ್ತಿ ಸಿಗುತ್ತದೆ. ತಮ್ಮ ಸಿನಿಮಾಗಳ ಮೂಲಕ ರಾಜಕೀಯ ವ್ಯವಸ್ಥೆಯನ್ನು ಸ್ವಚ್ಛಗೊಳಿಸುವ ಸಂದೇಶ ನೀಡುವ ಸುದೀಪ್‌, ಕಾಂಗ್ರೆಸ್‌ಗೆ ಆಗಮಿಸುವುದು ಒಳ್ಳೆಯದು ಎಂದು ಕಾಂಗ್ರೆಸ್‌ ನಾಯಕರು ಚಿಂತನೆ ನಡೆಸಿದ್ದಾರೆ.

ಸುದೀಪ್‌ ಅವರನ್ನು ಕರೆತರು ಖ್ಯಾತ ಚಿತ್ರನಟಿ ರಮ್ಯಾ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೂಲಕ ಪ್ರಯತ್ನ ನಡೆಯುತ್ತಿದೆ. ರಾಜ್ಯಾದ್ಯಂತ ಖ್ಯಾತ ನಟನಾಗಿ ಪ್ರಸಿದ್ಧಿಯಾಗಿರುವ ಸುದೀಪ್‌, ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂಬುದನ್ನೂ ಕಾಂಗ್ರೆಸ್‌ ಗಂಭೀರವಾಗಿ ಪರಿಗಣಿಸಿದೆ.

ಈ ಸಂಬಂಧ ನಟಿ ರಮ್ಯಾ ಅವರು ಈಗಾಗಲೇ ಕಿಚ್ಚ ಸುದೀಪ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ. ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಿ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ ಎನ್ನಲಾಗಿದೆ.

ಪ್ರಮುಖವಾಗಿ ಉತ್ತರ ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯ ಬೃಹತ್‌ ಸಂಖ್ಯೆಯಲ್ಲಿದೆ. ಬಿಜೆಪಿಯಲ್ಲಿ ವಾಲ್ಮೀಕಿ ಸಮುದಾಯದಿಂದ ಶ್ರೀರಾಮುಲು ಮುಂಚೂಣಿಯಲ್ಲಿದ್ದಾರೆ. ಇತ್ತೀಚೆಗೆ ಮೀಸಲಾತಿ ಪ್ರಮಾಣ ಹೆಚ್ಚಳದಿಂದ ಸಮುದಾಯದ ಮತಗಳು ಬಿಜೆಪಿಯತ್ತ ದೃವೀಕರಣವಾಗಿವೆ. ಕಾಂಗ್ರೆಸ್‌ಗೆ ಸುದೀಪ್‌ ಆಗಮಿಸಿದರೆ ವಾಲ್ಮೀಕಿ ಮತಗಳನ್ನು ತನ್ನತ್ತ ಸೆಳೆಯಲು ಸಹಕಾರವಾಗುತ್ತದೆ ಎಂಬ ಲೆಕ್ಕಾಚಾರವಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *