ಮತ ಮಾರಾಟಕ್ಕಿಲ್ಲ ಎನ್ನುವುದು ಜನಾಂದೋಲನವಾಗಲಿ: ಅಭ್ಯರ್ಥಿಗಳು ಯಾರೂ ಸರಿ ಇಲ್ಲ ಅನ್ನಿಸಿದರೆ ನೋಟಾ ಚಲಾಯಿಸಿ: ಕಾಗೇರಿ

ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಭಾರತದ 140 ಕೋಟಿ ಜನರು ನನ್ನ ಮತವನ್ನು ಮಾರಾಟ ಮಾಡುವುದಿಲ್ಲ. ಆತ್ಮಸಾಕ್ಷ್ಮಿ ಪರವಾಗಿ ಮತ ಹಾಕುತ್ತೇನೆ ಎಂದು ಜನಸಮುದಾಯದಲ್ಲಿ ಜನಾಂದೋಲನ ಪ್ರಾರಂಭಿಸಬೇಕು. ಹಿರಿಯ ನಾಗರಿಕರು ತಮ್ಮ ಜೀವನಾನುಭವವನ್ನು ಹಾಗೂ ಸಮಾಜದ ಆಗು-ಹೋಗುಗಳ ಬಗ್ಗೆ ಯುವಕರಿಗೆ ತಿಳಿಸಿ, ಸಮಾಜಕ್ಕೆ ಮಾರ್ಗದರ್ಶನ ನೀಡಿ, ಮತದಾರರಲ್ಲಿ ಕಡ್ಡಾಯವಾಗಿ ಮತ ಹಾಕುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

vishweshwar hegde kageri

ಬೆಂಗಳೂರು: ನಮ್ಮ ಮತ ನಮ್ಮೆಲ್ಲರ ಭವಿಷ್ಯ ನಿರ್ಧರಿಸುತ್ತದೆ. ಆದ್ದರಿಂದ ಪ್ರತಿಯೊಬ್ಬ ಪ್ರಜೆಯು ಮತ ಹಾಕುವ ಮೂಲಕ ಪ್ರಜಾಪ್ರಭುತ್ವದ ಕಾವಲುಗಾರರಾಗಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ಬೆಂಗಳೂರಿನ ಸೆಂಟ್ರಲ್ ಕಾಲೇಜ್‍ನ ಜ್ಞಾನಜ್ಯೋತಿ ಸಭಾಂಗಣದಲ್ಲಿ, ಕಾನೂನು ವ್ಯಾಸಂಗ ಮಾಡುತ್ತಿರುವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳೊಂದಿಗೆ ಹಮ್ಮಿಕೊಳ್ಳಲಾದ “ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯ” ಕುರಿತು ಸಂವಾದ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದ ಅವರು,  ‘ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಯಾರೂ ಸರಿ ಇಲ್ಲ ಅನಿಸಿದರೆ ನೋಟಾ ಚಲಾಯಿಸಿ. ಇಲ್ಲದಿದ್ದರೆ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲೇ ಉತ್ತಮರನ್ನು ಆಯ್ಕೆ ಮಾಡಿ’ ಎಂದು ಸಲಹೆ ನೀಡಿದರು.

‘ರಾಜಕಾರಣಿಗಳು ಹಣ ಕೊಡಬಾರದು. ಮತದಾರರು ಹಣ ತೆಗೆದುಕೊಳ್ಳಬಾರದು. ಪ್ರಸ್ತುತ ಪರಿಸ್ಥಿತಿಯಲ್ಲಿ ನಾವು ವಿಷವರ್ತುಲದಲ್ಲಿ ಸಿಲುಕಿದ್ದೇವೆ. ದೇವಸ್ಥಾನ, ಮಸೀದಿ, ಚರ್ಚ್‌ಗೆ ಹೋದರೂ ಹಣ ಕೇಳುತ್ತಾರೆ. ಮೂಲಸೌಕರ್ಯಗಳ ಬಗ್ಗೆ ಪ್ರಶ್ನೆ ಕೇಳುವ ಬದಲು ಹಬ್ಬ, ಕ್ರೀಡಾಕೂಟಗಳ ಹೆಸರಿನಲ್ಲಿ ರಾಜಕಾರಣಿಗಳಿಂದ ಹಣ ಕೇಳುತ್ತಾರೆ.‌ ರಾಜಕಾರಣಿಗಳು ಎಲ್ಲಿಂದ ಹಣ ತರಬೇಕು? ಇಂತಹ ವಿಷವರ್ತುಲ ದಿಂದ ಹೊರಬರದಿದ್ದರೆ ಪರಿಸ್ಥಿತಿ ಸುಧಾರಿಸುವುದಿಲ್ಲ’ ಎಂದರು.

ಭಾರತದ 140 ಕೋಟಿ ಜನರು ನನ್ನ ಮತವನ್ನು ಮಾರಾಟ ಮಾಡುವುದಿಲ್ಲ. ಆತ್ಮಸಾಕ್ಷ್ಮಿ ಪರವಾಗಿ ಮತ ಹಾಕುತ್ತೇನೆ ಎಂದು ಜನಸಮುದಾಯದಲ್ಲಿ ಜನಾಂದೋಲನ ಪ್ರಾರಂಭಿಸಬೇಕು. ಹಿರಿಯ ನಾಗರಿಕರು ತಮ್ಮ ಜೀವನಾನುಭವವನ್ನು ಹಾಗೂ ಸಮಾಜದ ಆಗು-ಹೋಗುಗಳ ಬಗ್ಗೆ ಯುವಕರಿಗೆ ತಿಳಿಸಿ, ಸಮಾಜಕ್ಕೆ ಮಾರ್ಗದರ್ಶನ ನೀಡಿ, ಮತದಾರರಲ್ಲಿ ಕಡ್ಡಾಯವಾಗಿ ಮತ ಹಾಕುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದರು.

ಮಾಧ್ಯಮಗಳು ಒಳ್ಳೆಯ ಪ್ರಚಾರ ಮಾಡುವುದರ ಮೂಲಕ ಮತದಾನದ ಅರಿವು ಮೂಡಿಸಬೇಕು. ಎಲ್ಲ ರಾಜಕೀಯ ಪಕ್ಷಗಳು ಸಹ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

Latest Posts

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ ಮತ್ತೆ ಗೆಲುವಿನ ನಗೆ ಬೀರಿದೆ. ಶುಕ್ರವಾರ ನಡೆದ ಈ ಚುನಾವಣೆಯ ಮತ ಎಣಿಕೆಯ ಪ್ರಕ್ರೀಯೆ ಸ್ಥಳೀಯ ಬಾಲಿಕೊಪ್ಪ ಶಾಲೆಯಲ್ಲಿ ತಡ ರಾತ್ರಿಯ ವರೆಗೆ ನಡೆದಿತ್ತು. ಹಿಂದಿನ ಅವಧಿಗೆ ಆಯ್ಕೆಯಾಗಿದ್ದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *