ಸಿದ್ಧಾಪುರ ಉತ್ಸವ,ಸ್ಥಳಿಯರಿಗೆ ನಾನಾ ಸ್ಫರ್ಧೆಗಳು

ಸಿದ್ದಾಪುರ: ಪಟ್ಟಣದ ನೆಹರು ಮೈದಾನದಲ್ಲಿ ಫೆ. 17 ರಿಂದ 19 ರವರೆಗೆ ನಡೆಯಲಿರುವ ಸಿದ್ದಾಪುರ ಉತ್ಸವದಲ್ಲಿ ತಾಲೂಕಿನ ಸ್ಥಳೀಯರಿಗೆ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಿದ್ದಾಪುರ ಉತ್ಸವ ಸಮಿತಿಯ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜೀಬೈಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶಿ ಕ್ರೀಡಾಕೂಟ ಸ್ಪರ್ಧೆ

ಉತ್ಸವದ ಪ್ರಯುಕ್ತ ಪಟ್ಟಣದ ನೆಹರು ಮೈದಾನದಲ್ಲಿ
ಫೆ.17 ರಂದು ಬೆಳಗ್ಗೆ 9:30 ರಿಂದ ನಡೆಯಲಿರುವ ಕ್ರೀಡಾಕೂಟದಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆ ಇರಲಿದ್ದು, ಸ್ಪರ್ಧೆಗೆ ಪ್ರತಿ ಗ್ರಾಮ ಪಂಚಾಯತನಿಂದ 7 ಜನರ ಒಂದು ಪುರುಷ ಹಾಗೂ ಒಂದು ಮಹಿಳಾ ತಂಡಗಳಿಗೆ ಅವಕಾಶವಿರುತ್ತದೆ. ಅಲ್ಲದೆ ವೈಯಕ್ತಿಕ ಸ್ಪರ್ಧೆಯಲ್ಲಿ ರಸ್ತೆ ಓಟ (ಕ್ರಾಸ್ ಕಂಟ್ರಿ), ಮಹಿಳೆಯರಿಗೆ ಸಂಗೀತ ಖುರ್ಚಿ ಸ್ಪರ್ಧೆ, ಪುರುಷರಿಗೆ ಗೋಣಿಚೀಲ ಓಟದ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳಿಗೆ ಸೂಕ್ತ ಬಹುಮಾನ ನೀಡಲಾಗುತ್ತದೆ. ಆಸಕ್ತರು ಫೆ.15 ರೊಳಗೆ ತಮ್ಮ ಹೆಸರನ್ನು ಮಾಧವ ಎಮ್. ನಾಯ್ಕ – 9449360803 ರನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

ರಂಗೋಲಿ ಸ್ಪರ್ಧೆ

ಪಟ್ಟಣದ ಶಿಕ್ಷಣ ಪ್ರಸಾರಕ ಸಮಿತಿಯ ಚೇತನಾ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆ.17ರಂದು ಮಧ್ಯಾಹ್ನ 3.30 ರಿಂದ ಸಂಜೆ 5 ಗಂಟೆಯವರೆಗೆ ರಂಗೋಲಿ ಸ್ಪರ್ಧೆಯನ್ನು ಸಮಿತಿ ವತಿಯಿಂದ ತಾಲೂಕಿನ ಸ್ಥಳೀಯರಿಗೆ ಆಯೋಜಿಸಿದ್ದು, ಸ್ಪರ್ಧೆಯಲ್ಲಿ ಚುಕ್ಕಿ ರಂಗೋಲಿ ಬಿಡಿಸಲು ಮಾತ್ರ ಅವಕಾಶವಿದ್ದು, ರಂಗೋಲಿ ಬಿಡಿಸಲು ಬೇಕಾದ ಸಾಮಗ್ರಿಗಳನ್ನು ಸ್ಪರ್ಧಿಗಳೇ ತರಬೇಕಾಗಿದೆ. ನಿಗದಿಪಡಿಸಲಾದ ಸಮಯದ ಅವಧಿಯು 1 ಗಂಟೆ 30 ನಿಮಿಷವಿರಲಿದ್ದು ಸ್ಪರ್ಧಿಗಳು 30 ನಿಮಿಷ ಮೊದಲು ಸ್ಥಳದಲ್ಲಿ ಹಾಜರಿರಬೇಕು. ಒದಗಿಸಿದ ಜಾಗವು 4 * 4 ಅಡಿ ಅಳತೆಯಾಗಿರುತ್ತದೆ. ಅಲ್ಲದೇ ಯಾವುದೇ ಸಂದರ್ಭದಲ್ಲಿ ಹೆಚ್ಚುವರಿ ಸಮಯವನ್ನು ನೀಡಲಾಗುವುದಿಲ್ಲ. ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ಧಿಗಳಿಗೆ ಸೂಕ್ತ ಬಹುಮಾನ ನೀಡಲಾಗುತ್ತಿದ್ದು, ಹೆಸರು ನೋಂದಾಯಿಸಲು ಫೆ.15 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ರಾಘವೇಂದ್ರ ರಾಯ್ಕರ್ 9845297298, ಶಂಕರಮೂರ್ತಿ ನಾಯ್ಕ 8861212683, ಚಂದ್ರಕಲಾ ನಾಯ್ಕ 8123680716, ಸುಮನಾ ಕಾಮತ್ 9945190466, ರಾಧಿಕಾ ಕಾನಗೋಡ 9945105200 ಇವರನ್ನು ಸಂಪರ್ಕಿಸಬಹುದು.

ಅಂಗಡಿ ಮುಂಗಟ್ಟುಗಳಿಗೆ ಅವಕಾಶ

3 ದಿನಗಳ ಕಾಲ ನಡೆಯಲಿರುವ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಲಿರುವ ಹಿನ್ನೆಲೆಯಲ್ಲಿ ವಿವಿಧ ಬಗೆಯ ಖಾದ್ಯ, ವಸ್ತ್ರದ ಮಳಿಗೆ, ಮಕ್ಕಳ ಆಟಿಕೆ ಸಾಮಾನುಗಳು ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳು ಹಾಕುವವರಿಗೆ ಸ್ಥಳಾವಕಾಶ ನೀಡಲಾಗುತ್ತಿದ್ದು, ಅಂಗಡಿ ಮುಂಗಟ್ಟುಗಳಿಗೆ ಸ್ಥಳ ಬೇಕಾದಲ್ಲಿ ಸಮಿತಿಯ ಕೋಶಾಧ್ಯಕ್ಷ ವಿನಯ ಹೊನ್ನೆಗುಂಡಿ 9606730284 ಇವರನ್ನು ಸಂಪರ್ಕಿಸುವಂತೆ ಅವರು ತಿಳಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *