ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ವಿಧಿವಶ

ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು.

Prasad hegde

ಬೆಂಗಳೂರು: ಕನ್ನಡ ಪತ್ರಿಕೋದ್ಯಮದ ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ (45)ನಿಧನರಾಗಿದ್ದಾರೆ. ಪ್ರಸಾದ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಚವತ್ತಿ ಸಮೀಪದವರಾಗಿದ್ದರು.

ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಸಾದ್ ಹೆಗಡೆ ಇಂದು ಬೆಳಗಿನ ಜಾವ 4:30ಕ್ಕೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಸಿರಸಿಯ ಸದ್ಗತಿ ನೆಮ್ಮದಿ ಕುಟೀರದಲ್ಲಿ ನೆರವೇರಲಿದೆ.

ಸದ್ಯ ರಾಜ್ ನ್ಯೂಸ್ ನಲ್ಲಿ ಔಟ್ ಪುಟ್ ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಹಲವು ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿದ್ದ ಪ್ರಸಾದ್ ಹೆಗಡೆ, ಮಾಧ್ಯಮ ಲೋಕದಲ್ಲಿ ಅಪಾರ ಅನುಭವ ಹೊಂದಿದ್ದರು.

ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮುಗಿಸಿದ್ದ ಪ್ರಸಾದ್, ರಂಗಭೂಮಿಯಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಮೈಸೂರು ದಿಗಂತ ಪತ್ರಿಕೆಯಲ್ಲಿ ಪತ್ರಕರ್ತ ವೃತ್ತಿಯನ್ನು ಆರಂಭಿಸಿದ ಪ್ರಸಾದ್, ಬಳಿಕ ಹಲೋ ಮೈಸೂರು ಮತ್ತು ಮೈಸೂರು ಮಿತ್ರ ಪತ್ರಿಕೆಯಲ್ಲಿ ಕೆಲಸ ಮಾಡಿದ್ದಾರೆ. ನಂತರ ರಾಜಧಾನಿ ಬೆಂಗಳೂರಿಗೆ ಬಂದು ದೃಶ್ಯ ಮಾಧ್ಯಮದಲ್ಲಿ ತನ್ನ ವೃತ್ತಿಯನ್ನು ಮುಂದುವರಿಸಿದರು, ಕಸ್ತೂರಿ ಟಿವಿಯಲ್ಲಿ ರಾಜಕೀಯ ವರದಿಗಾರರಾಗಿ, ನಿರೂಪಕರಾಗಿ, ರಾಜಕೀಯ ವಿಶ್ಲೇಷಕರಾಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದರು. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *