ರಾಹುಲ್‌ ಗಾಂಧಿಗೆ ಕೇಜ್ರಿವಾಲ್‌ ಬೆಂಬಲ

ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ: ಪಿತೂರಿ ಎಂದ ಕೇಜ್ರಿವಾಲ್!

ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ದೋಷಿ ಎಂದು ಪರಿಗಣಿಸಿ, ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ಜಾಮೀನು ಮಂಜೂರು ಮಾಡಿದ ನಂತರ ಆಮ್ ಆದ್ಮಿ ಪಕ್ಷ ರಾಹುಲ್ ಬೆಂಬಲಕ್ಕೆ ಬಂದಿದೆ.

Rahul_Kejriwal1

ನವದೆಹಲಿ: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ದೋಷಿ ಎಂದು ಪರಿಗಣಿಸಿ, ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ಜಾಮೀನು ಮಂಜೂರು ಮಾಡಿದ ನಂತರ ಆಮ್ ಆದ್ಮಿ ಪಕ್ಷ ರಾಹುಲ್ ಬೆಂಬಲಕ್ಕೆ ಬಂದಿದೆ. ಬಿಜೆಪಿಯೇತರ ನಾಯಕರು ಮತ್ತು ಪಕ್ಷಗಳನ್ನು ವಿಚಾರಣೆಗೆ ಒಳಪಡಿಸುವ ಮೂಲಕ ಅವರನ್ನು ನಿರ್ಮೂಲನೆ ಮಾಡಲು ಸಂಚು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. 

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಾಕಾರಿ ಟೀಕೆಗಳಿಗಾಗಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, ‘ಬಿಜೆಪಿಯೇತರ ನಾಯಕರು ಹಾಗೂ ಪಕ್ಷಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಮೂಲಕ ಅವರನ್ನು ಮಟ್ಟ ಹಾಕಲು ಸಂಚು ರೂಪಿಸಲಾಗುತ್ತಿದೆ. ನಮಗೆ ಕಾಂಗ್ರೆಸ್ ಜೊತೆ ಭಿನ್ನಾಭಿಪ್ರಾಯವಿದೆ, ಆದರೆ ಈ ರೀತಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಸಿಲುಕಿಸುವುದು ಸರಿಯಲ್ಲ. ‘ಪ್ರಶ್ನೆ ಕೇಳುವುದು ಸಾರ್ವಜನಿಕರು ಮತ್ತು ಪ್ರತಿಪಕ್ಷಗಳ ಕೆಲಸ. ನಾವು ನ್ಯಾಯಾಲಯವನ್ನು ಗೌರವಿಸುತ್ತೇವೆ ಆದರೆ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಕೇಜ್ರಿವಾಲ್ ಹೇಳಿದ್ದಾರೆ. 

ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಮಾತನಾಡಿ, ವಿರೋಧ ಪಕ್ಷಗಳು ಪ್ರಜಾಪ್ರಭುತ್ವದ ತಿರುಳಾಗಿದ್ದು, ಭಿನ್ನಾಭಿಪ್ರಾಯವನ್ನು ಹತ್ತಿಕ್ಕಬಾರದು ಎಂದಿದ್ದಾರೆ.

‘ರಾಹುಲ್ ಗಾಂಧಿ ವಿರುದ್ಧದ ನ್ಯಾಯಾಲಯದ ತೀರ್ಪನ್ನು ಗೌರವಯುತವಾಗಿ ಒಪ್ಪುವುದಿಲ್ಲ. ವಿಪಕ್ಷಗಳು ಪ್ರಜಾಪ್ರಭುತ್ವದ ತಿರುಳಾಗಿದೆ. ಭಿನ್ನಾಭಿಪ್ರಾಯವನ್ನು ಹತ್ತಿಕ್ಕಬಾರದು. ಭಾರತವು ವಿಮರ್ಶೆಯ ಬಲವಾದ ಸಂಪ್ರದಾಯವನ್ನು ಹೊಂದಿದೆ. ಇದನ್ನು ಒಂದು ಸಿದ್ಧಾಂತ, ಒಂದು ಪಕ್ಷ, ಒಬ್ಬ ನಾಯಕ ಎಂಬ ದೃಷ್ಟಿಕೋನಕ್ಕೆ ಇಳಿಸುವ ಪ್ರಯತ್ನ ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *