

ವರ್ಕೌಟ್ ಆಯ್ತು ಬೊಮ್ಮಾಯಿ ಪ್ಲಾನ್: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ!
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.


ಬೆಂಗಳೂರು: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಚುನಾವಣಾ ನಿರ್ವಹಣ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡರು.


ಶಶಿಭೂಷಣ್ ಹೆಗಡೆ ಹಿಂದೆ ಕುಮಟಾ ಕ್ಷೇತ್ರದಲ್ಲಿ ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು. 2018 ರಲ್ಲಿ ಶಿರಸಿ ಕ್ಷೇತ್ರದಲ್ಲಿ 3ನೇ ಸ್ಥಾನದಲ್ಲಿದ್ದರು. ಮೂರು ಸೋಲಿನ ನಂತರ ಜೆಡಿಎಸ್ ನಲ್ಲೇ ತಮ್ಮ ಅಸ್ತಿತ್ವ ಉಳಿಸಿಕೊಂಡು ಶಿರಸಿ ಕ್ಷೇತ್ರದಲ್ಲಿ ತಮ್ಮ ಹಿಡಿತ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನದಲ್ಲಿ ಸಾಗಿದ್ದರು.
ಈ ಬಾರಿ ಮತ್ತೆ ಸ್ಪರ್ಧಿಸಲು ಅವಕಾಶ ಒದಗಿ ಬಂದರೂ ಸ್ಫರ್ಧಿಸುವ ಮನಸ್ಸು ಮಾಡಲಿಲ್ಲ. ಈ ನಡುವೆ ಕಾಂಗ್ರೆಸ್ ಸಹ ಶಶಿಭೂಷಣ್ ಹೆಗಡೆ ಅವರನ್ನ ಪಕ್ಷಕ್ಕೆ ಸೆಳೆಯಲು ಕಸರತ್ತು ನಡೆಸಿತ್ತು. ಆದರೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಯತ್ನದ ಫಲದಿಂದ ಕೊನೆಗೂ ಮತ್ತೆ ಶಶಿಭೂಷಣ್ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಗೇರಿ ಅವರಿಗೆ ಪ್ರಬಲ ಬ್ರಾಹ್ಮಣ ನಾಯಕರ ಪ್ರತಿಸ್ಪರ್ಧಿ ಇಲ್ಲದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. (ಕಪ್ರಡಾ)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






