ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರ
ತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು.


ನಂತರ ನಡೆದ ಧರ್ಮಸಭೆ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿ ಮಾನವ ಜೀವನದ ಮುಖ್ಯ ಉದ್ದೇಶ ಮುಕ್ತಿ ಪಡೆಯುವುದಾಗಿದೆ. ಮುಕ್ತಿ ಪಡೆಯುವುದಕ್ಕೆ ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮಾತ್ರ ಸಾಧ್ಯ
ಕರ್ಮ, ಭಕ್ತಿ ಹಾಗೂ ಯೋಗ ಮಾರ್ಗದ ಕುರಿತು ವಿವರವಾಗಿ ತಿಳಿಸಿದ ಶ್ರೀಗಳು ಮಠದ ಸೇವೆ ಮಾಡಬೇಕು. ಉಪಾಸನೆ ಮಾಡಬೇಕು. ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ನಮ್ಮಲ್ಲಿರುವ ದೋಷಗಳನ್ನು ಹಾಗೂ ರಾಕ್ಷಸಿಗುಣಗಳನ್ನು ಹೋಗಲಾಡಿಸುವುದಕ್ಕೆ ನಮ್ಮೊಳಗಿನ ದೈವತ್ವವನ್ನು ಅರಿತುಕೊಳ್ಳಲು ಸಹಾಯ ಮಾಡುವ ಶಿಕ್ಷಣವನ್ನು ನಾವು ಅಳವಡಿಸಿಕೊಳ್ಳಬೇಕು. ಅಂತಹ ವ್ಯಕ್ತಿ ಮಾತ್ರ ಸಮಾಜವನ್ನು ಅರ್ಥಮಾಡಿಕೊಂಡು ಸೇವೆ ಮಾಡಲು ಸಮರ್ಥನಾಗುತ್ತಾನೆ.
ತಾಯಂದಿರು ಎಚ್ಚರವಹಿಸಿ ಮಕ್ಕಳಿಗೆ ಶಿಕ್ಷಣ ಹಾಗೂ ಸಂಸ್ಕಾರವನ್ನು ಕಲಿಸಬೇಕು. ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ದೊರಕಿದಾಗ ಮಾತ್ರ ಮಕ್ಕಳು ಸತ್ಪçಜೆಗಳಾಗಲು ಸಾಧ್ಯ ಎಂದು ಹೇಳಿದರು.

ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಮಿರ್ಜಾನ ಶಾಖಾಮಠದ ಶ್ರೀ ನಿಶ್ಚಲಾನಂದ ಶ್ರೀಗಳು ಸಾನಿಧ್ಯವಹಿಸಿದ್ದರು.
ಶತಚಂಡಿ ಯಾಗ ಸಮಿತಿ ಅಧ್ಯಕ್ಷ ಎನ್.ಎಲ್.ಗೌಡ ಕಿಲವಳ್ಳಿ ಅಧ್ಯಕ್ಷತೆವಹಿಸಿದ್ದರು.
ವಿ.ದತ್ತಮೂರ್ತಿ ಭಟ್ಟ ಶಿವಮೊಗ್ಗ, ಸತ್ಯನಾರಾಯಣ ಪಟಗಾರ, ನಿವೃತ್ತ ಇಂಜಿನಿಯರ್ ಆರ್.ಎನ್.ಪಟಗಾರ,ಸೀತಾರಾಮ ಗೌಡ ಕುಳಿಕಟ್ಟು ಉಪಸ್ಥಿತರಿದ್ದರು.


ಬೆಳಗ್ಗೆ ವೇ.ವೆಂಕಟ್ರಮಣ ಕೃಷ್ಣ ಭಟ್ಟ ಹಾಗೂ ವೇ.ಮಂಜುನಾಥ ಗ.ಭಟ್ಟ ಇವರ ಮಾರ್ಗದರ್ಶನದಲ್ಲಿ ದೇವಿ ಸಪ್ತಸತಿ ಪಾರಾಯಣ, ಶತಚಂಡಿ ಯಾಗ, ಪೂರ್ಣಾಹುತಿ ಜರುಗಿತು.
ಸ್ವಾಗತ: ಸಿದ್ದಾಪುರ ತಾಲೂಕಿಗೆ ಆಗಮಿಸಿದ ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ. ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರನ್ನು ಪೂರ್ಣಕುಂಬದೊಂದಿಗೆ ಸ್ವಾಗತಿಸಿ ಬೈಕ್ ರ‍್ಯಾಲಿ, ವಾಧ್ಯ, ಡೊಳ್ಳು ಕುಣಿತದೊಂದಿಗೆ ಮೆರವಣಿಗೆಯ ಮೂಲಕ ಕಿಲವಳ್ಳಿ ಊರಿಗೆ ಸ್ವಾಗತಿಸಲಾಯಿತು. ನಂತರ ಗುರು ಪಾದುಕಾ ಪೂಜೆ, ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು.
ನಾಲ್ಕು ಸಾವಿರಕ್ಕೂ ಹೆಚ್ಚು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳ ದರ್ಶನ ಪಡೆದು ಪ್ರಸಾದ ಭೋಜನ ಸ್ವೀಕರಿಸಿದರು.
ತೇಜಸ್ವಿನಿ ಹಾಗೂ ಪ್ರಣತಿ ಪ್ರಾರ್ಥನೆ ಹಾಡಿದರು. ವಿ.ಆರ್.ಗೌಡ ಸ್ವಾಗತಿಸಿದರು. ಮೋಹನ ಗೌಡ ಪ್ರಾಸ್ತಾವಿಕ ಮಾತನಾಡಿದರು.ಆರ್.ಬಿ.ಗೌಡ ವಂದಿಸಿದರು. ವಿಷ್ಣು ಪಟಗಾರ ಕಾರ್ಯಕ್ರಮ ನಿರ್ವಹಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *