ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್…….‌ ಆಪ್‌ ನಲ್ಲಿ ಒಡಕು ಜಿಲ್ಲಾಘಟಕಕ್ಕೆ ರಾಜೀನಾಮೆ ನೀಡಲಿರುವ ನಾಯಕರು

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಮುಖ ಪಕ್ಷಗಳಲ್ಲಿ ಒಡಕು, ಬಂಡಾಯಗಳು ಕಾಣುತಿದ್ದು ಕೆಲವರು ಅಭ್ಯರ್ಥಿಗಳಾಗಲು ಯೋಚಿಸಿದ್ದರೆ ಕೆಲವರು ಪಕ್ಷ ತ್ಯಜಿಸಲು ಯೋಜಿಸಿರುವ ಬಾತ್ಮಿ ಸಮಾಜಮುಖಿಡಾಟ್‌ ನೆಟ್‌ ಗೆ ಲಭಿಸಿದೆ.

ಜಿಲ್ಲೆಯ ಜೆ.ಡಿ.ಎಸ್.‌ ನ ಕೆಲವರು ಕಾಂಗ್ರೆಸ್‌ ಸೇರಲು ಯೋಚಿಸಿದ್ದರೆ, ಬಿ.ಜೆ.ಪಿ.ಯ ಕೆಲವರು ಕಾಂಗ್ರೆಸ್‌ ಹಾಗೂ ಜಾತ್ಯಾತೀತ ಜನತಾದಳ ಸೇರುವ ಸಾಧ್ಯತೆಗಳು ನಿಚ್ಚಳವಾಗಿವೆ.

ಬಿ.ಜೆ.ಪಿ.ಯ ಕೇ.ಜಿ. ನಾಯ್ಕ ಹಣಜಿಬೈಲ್‌ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿರುದ್ಧ ಸೆಡ್ಡು ಹೊಡೆದಿದ್ದು ಬಿ.ಜೆ.ಪಿ. ಯಿಂದ ಬಂಡಾಯ ಸ್ಫರ್ಧೆ ಅಥವಾ ಗೆಲ್ಲುವ ಅನ್ಯ ಪಕ್ಷದ ಅಭ್ಯರ್ಥಿ ಬೆಂಬಲಿಸುವ ಯೋಚನೆಯಲ್ಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‌ ನಲ್ಲಿ ಎ.ರವೀಂದ್ರ ಮತ್ತು ವೆಂಕಟೇಶ ಹೆಗಡೆ ಹೊಸಬಾಳೆ ನಾನಾ ನಾಯಕರ ಬೆಂಬಲಗಳಿಂದ ಕಾಂಗ್ರೆಸ್‌ ಅಧೀಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಮಾಡುವ ಮುನ್ಸೂಚನೆ ದೊರೆತಿದೆ.

ಜಿಲ್ಲೆಯಲ್ಲಿ ಎಲ್ಲರಿಗಿಂತ ಮೊದಲು ಏಕೈಕ ಅಭ್ಯರ್ಥಿ ಘೋಶಿಸಿರುವ ಆಪ್‌ ಸಂಘಟನೆಯಾಗುವ ಮೊದಲೇ ಒಡೆಯುವ ಸಾಧ್ಯತೆ ಹೆಚ್ಚಿದೆ. ಸಮಾಜಮುಖಿ ಡಾಟ್‌ ನೆಟ್‌ ಗೆ ಲಭಿಸಿರುವ ಮಾಹಿತಿಯ ಪ್ರಕಾರ ಆಪ್‌ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಶಿರಸಿ ಕ್ಷೇತ್ರದ ಅಭ್ಯರ್ಥಿಯ ವಿರುದ್ಧ ಬಂಡಾಯ ಮಾಡಿದ್ದು ಆಪ್‌ ಜಿಲ್ಲಾ ಉಪಾಧ್ಯಕ್ಷರ ನೇತೃತ್ವದಲ್ಲಿ ಕನಿಷ್ಟ ಐದು ಜನ ಪ್ರಮುಖ ಪದಾಧಿಕಾರಿಗಳು ಆಪ್‌ ಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರುವ ಬಗ್ಗೆ ಯೋಚಿಸಿದ್ದಾರೆ ಎನ್ನಲಾಗಿದೆ,.

ಚುನಾವಣಾ ರಾಜಕಾರಣ, ಸಾಮಾಜಿಕ ಬದುಕಿನ ಲವಲೇಶಗಳೂ ಇಲ್ಲದ ಆಪ್‌ ಅಭ್ಯರ್ಥಿ ಪಕ್ಷದ ಪ್ರಮುಖರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಗುವವರ ನಡುವೆ ತಾನು ಈಗಲೇ ಗೆದ್ದೆದ್ದೇನಿ ತನ್ನ ೭೦ ಸಾವಿರ ಮತಗಳು ಈಗಲೇ ಭದ್ರವಾಗಿವೆ ಎನ್ನುವ ಬಾಲೀಶ ಹೇಳಿಕೆಗಳ ಮೂಲಕ ಪಕ್ಷ ಮತ್ತು ಪಕ್ಷದ ಪ್ರಮುಖರಿಗೆ ಮುಜುಗರ ಮಾಡುವ ಶಿರಸಿ ಕ್ಷೇತ್ರದ ಅಭ್ಯರ್ಥಿಯ ಹಿತ-ಮಿತ ವರಿಯದ ಅತರೇಕದ ವರ್ತನೆ, ನಡವಳಿಕೆಗಳಿಂದ ಬೇಸತ್ತು ಪಕ್ಷ ತ್ಯಜಿಸುತ್ತಿರುವುದಾಗಿ ಐದು ಜನ ಜಿಲ್ಲಾ ಪದಾಧಿಕಾರಿಗಳು ಆಪ್‌ ಪ್ರಮುಖರಿಗೆ ಮಾಹಿತಿ ನೀಡಿರುವ ಬಗ್ಗೆ ಸಮಾಜಮುಖಿ ನ್ಯೂಸ್‌ ಗೆ ವಿಷಯ ತಿಳಿದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *