ದಾರಿ ತಪ್ಪಿದ ಕುಮಾರಸ್ವಾಮಿ ಕಾಪ್ಟರ್‌,ತಡವಾಗಿ ಬೆಳಕಿಗೆ!

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!

ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

H D kumaraswamy

ಉತ್ತರ ಕನ್ನಡ: ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

ಹೆಲಿಕಾಪ್ಟರ್ ಲ್ಯಾಂಡಿಂಗ್ ನೋಡಲು ಜೋಯಿಡಾ ಕಾಲೇಜು ಮೈದಾನದಲ್ಲಿ ನೂರಾರು ಜನರು ಕಾದು ನಿಂತಿದ್ದರು.  ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸವದತ್ತಿಯಿಂದ ಜೋಯಿಡಾದ ದುರ್ಗಾದೇವಿ ಮೈದಾನದಲ್ಲಿ  ಲ್ಯಾಂಡಿಂಗ್ ಆಗಬೇಕಿತ್ತು. ಲ್ಯಾಂಡಿಂಗ್ ವೇಳೆ ಹೆಲಿಪ್ಯಾಡ್‌ನಲ್ಲಿ ಗಂಧಕದ ಹೊಗೆ ಹಾಕಿ ಸಿಗ್ನಲ್ ನೀಡಬೇಕಿತ್ತು.

https://imasdk.googleapis.com/js/core/bridge3.567.2_en.html#goog_506231480

ಆದರೆ ಇದು ತಡವಾಗಿದ್ದರಿಂದ ಹೆಲಿಕಾಪ್ಟರ್ ಆಕಾಶದಲ್ಲೇ ಹಾರಾಡಿದೆ. ನಂತರ ಲ್ಯಾಂಡಿಗ್ ಮಾಡಲು ಸ್ಥಳ ಸಿಗದೆ ಬೆಳಗಾವಿಯತ್ತ ಹೋಗಿದೆ. ಈ ವಿಷಯ ಗಮನಕ್ಕೆ ಬಂದ ನಂತರ ವೈರ್‌ಲೆಸ್ ಸಿಗ್ನಲ್ ಕಳುಹಿಸಿ ಹೆಲಿಕಾಪ್ಟರನ್ನು ಮರಳಿ ಕರೆಸಿ ಲ್ಯಾಂಡಿಂಗ್ ಮಾಡಲಾಯಿತು.

ಈ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆಯಿಂದ ಜೋಯಿಡಾಗೆ ಬರಲು 30 ನಿಮಿಷ ತಡವಾಯಿತು. ಇದರಿಂದಾಗಿ ಏನೂ ಸಮಸ್ಯೆಯಾಗಿಲ್ಲ ಎಂದರು.

ಜೋಯಿಡಾದಲ್ಲಿ ಸ್ಥಳವನ್ನು ಕಂಡುಹಿಡಿಯುವ ಮೊದಲು ಹೆಲಿಕಾಪ್ಟರ್ ರಾಮನಗರವನ್ನು ಏಳು ಬಾರಿ ಸುತ್ತು ಹಾಕಿತು ಎಂದು ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು. ಇದು ಅರಣ್ಯ ಪ್ರದೇಶವಾದ್ದರಿಂದ ಸ್ವಲ್ಪ ಗೊಂದಲ ಉಂಟಾಗಿ, ನಿಮ್ಮ ಊರನ್ನು ಪತ್ತೆ ಹಚ್ಚುವುದು ಕಷ್ಟವಾಯಿತು  ಎಂದು ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ಕುಮಾರಸ್ವಾಮಿ ತಮಾಷೆಯಾಗಿ ಮಾತನಾಡಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

ಪೂಜೆ, ಪುನಸ್ಕಾರ ಅಂಬೇಡ್ಕರ್‌ ಸಿದ್ಧಾಂತಕ್ಕೆ ವಿರುದ್ಧ…!

ದೇವರಿಗಿಂತ ಹೆಚ್ಚಾಗಿ ಕೆಲಸ,ಮಾನವೀಯತೆ ನಂಬುತಿದ್ದ ಡಾ. ಬಿ.ಆರ್.‌ ಅಂಬೇಡ್ಕರ್‌ ವೈದಿಕ ಪೂಜೆ, ಪುನಸ್ಕಾರಗಳಂಥ ಕಂದಾಚಾರಗಳನ್ನು ವಿರೋಧಿಸುತಿದ್ದರು. ಅಂಥ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *