ಬಿ.ಜೆ.ಪಿ.ಯಲ್ಲಿ ಬ್ರಾಹ್ಮಣರಿಗೆ ಇರುವ ಬೆಲೆ ಬಹುಸಂಖ್ಯಾತ ಲಿಂಗಾಯತರಿಗೆ ಇಲ್ಲ

ಲಿಂಗಾಯತ ನಾಯಕರ ವಿರುದ್ಧ ಲಿಂಗಾಯತ ನಾಯಕರಿಂದಲೇ ಮಾತಾಡಿಸುವುದು ಬಿಜೆಪಿಯ ಕುತಂತ್ರದ ಭಾಗ- ಕಾಂಗ್ರೆಸ್ 

ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಕುರಿತು ಯಡಿಯೂರಪ್ಪ ಹೇಳಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ShetterBsy1

ಬೆಂಗಳೂರು: ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಕುರಿತು ಯಡಿಯೂರಪ್ಪ ಹೇಳಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್ ಯಡಿಯೂರಪ್ಪ ಅವರನ್ನು  ಟಿಕೆಟ್ ಹಂಚಿಕೆಯ ಸಭೆಯಿಂದ ಹೊರಗಿಟ್ಟಿದ್ದ ಬಿಜೆಪಿ ಇಂದು ಏಕಾಏಕಿ ಜಗದೀಶ್ ಶೆಟ್ಟರ್ ಅವರ ವಿರುದ್ಧ ಮಾತನಾಡಿಸಲು ತಂದು ಕೂರಿಸಿದೆ.ಲಿಂಗಾಯತ ನಾಯಕರ ವಿರುದ್ಧ ಲಿಂಗಾಯತ ನಾಯಕರಿಂದಲೇ ಮಾತಾಡಿಸುವುದು ಬಿಜೆಪಿಯ ಕುತಂತ್ರದ ಭಾಗ ಎಂದು ಟೀಕಿಸಿದೆ.

ಶೆಟ್ಟರ್ ವಿರುದ್ಧ ಬಿಎಸ್ ಯಡಿಯೂರಪ್ಪ,  ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್, ಸೋಮಣ್ಣ ಅವರನ್ನು ಎತ್ತಿಕಟ್ಟುವ ಆಟ ಬಿಜೆಪಿಗೆ ಚೆನ್ನಾಗಿ ಗೊತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದೆ.

ಮತ್ತೊಂದೆಡೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಎಂ.ಬಿ. ಪಾಟೀಲ್, ಬಿಜೆಪಿಯಲ್ಲಿ ಬ್ರಾಹ್ಮಣರಿಗೂ, ಲಿಂಗಾಯತರಿಗೂ ಇರುವ ವ್ಯತ್ಯಾಸ ತಿಳಿಸಿದ್ದಾರೆ.

ಬ್ರಾಹ್ಮಣರಾಗಿರುವ ಸುರೇಶ್ ಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ಒಂದೇ ವಯಸ್ಸು (67) ಆದರೂ ಸುರೇಶ್ ಕುಮಾರ್ ಗೆ ಟಿಕೆಟ್ ನೀಡಲು ಯಾವುದೇ ತಕರಾರು ಇಲ್ಲ. ಹೈಕಮಾಂಡ್ ಬಳಿ ಅಲೆಯುವ ಅಗತ್ಯವಿಲ್ಲ. ಸುಮ್ಮನೆ ಮನೆಯಲ್ಲಿದ್ದರೂ ಟಿಕೆಟ್ ಕಳಿಸಿಕೊಡುತ್ತಾರೆ. ಆದರೆ, ಜಗದೀಶ್ ಶೆಟ್ಟರ್ ಮಾಜಿ ಮುಖ್ಯಮಂತ್ರಿಯಾಗಿದ್ದರೂ ಟಿಕೆಟ್ ಇಲ್ಲ. ಹೈಕಮಾಂಡ್ ಮುಂದೆ ಕೈ ಕಟ್ಟಿ ನಿಂತರೂ ಪ್ರಯೋಜನವಿಲ್ಲ. ಅತಿ ದೊಡ್ಡ ಲಿಂಗಾಯತ ಸಮುದಾಯದವರಾಗಿದ್ದರೂ ಬೆಲೆ ಎಂದು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *