ಬಿ.ಜೆ.ಪಿ.ಯಲ್ಲಿ ಶೆಟ್ಟರ್‌ ಸಂತೋಷ ಕಸಿದುಕೊಂಡವರ್ಯಾರು ಗೊತ್ತೆ?

ನನಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ತಪ್ಪಲು ಕೆಲವು ನಾಯಕರು ಕಾರಣರಾಗಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸುವ ಸಮಯ ಇಂದು ಬಂದಿದೆ. ನನಗೆ ಟಿಕೆಟ್ ಕೈತಪ್ಪಲು ಬಿ ಎಲ್ ಸಂತೋಷ್ ಕಾರಣ ಎಂದು ನೇರ ಗಂಭೀರ ಆರೋಪ ಮಾಡಿದ್ದಾರೆ ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್. 

Jagadish Shettar

ಹುಬ್ಬಳ್ಳಿ: ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ತಪ್ಪಲು ಕೆಲವು ನಾಯಕರು ಕಾರಣರಾಗಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸುವ ಸಮಯ ಇಂದು ಬಂದಿದೆ. ನನಗೆ ಟಿಕೆಟ್ ಕೈತಪ್ಪಲು ಬಿ ಎಲ್ ಸಂತೋಷ್ ಕಾರಣ ಎಂದು ನೇರ ಗಂಭೀರ ಆರೋಪ ಮಾಡಿದ್ದಾರೆ ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್. 

ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌, ಇಂದು ಅವರ ಹೆಸರನ್ನು ಬಹಿರಂಗಪಡಿಸುತ್ತಿದ್ದೇನೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್(B L Santosh) ಅವರಿಂದಾಗಿ ನನಗೆ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಕೈತಪ್ಪಿ ಹೋಯಿತು, ಇವರ ಜೊತೆ ಹಲವು ಜನರು ಇರಬಹುದು ಎಂದು ಆರೋಪ ಮಾಡಿದ್ದಾರೆ.

ನಿನ್ನೆ ಸೋಮವಾರ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಇಂದು ಹುಬ್ಬಳ್ಳಿಯಲ್ಲಿ ತಮ್ಮ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದರು.

ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಉತ್ತಮ ಆಡಳಿತ ನೀಡಿದ್ದೇನೆ, ಹಲವು ಜನಪರ ಕಾರ್ಯಕ್ರಮಗಳನ್ನು ತಂದಿದ್ದೇನೆ. ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದೆ. ನನಗೆ ಅವಕಾಶ ಸಿಕ್ಕಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ಸಾರ್ವಜನಿಕ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ನನ್ನ ಮೇಲಿಲ್ಲ, ಆಪಾದನೆಗಳಿಲ್ಲ. ಯಡಿಯೂರಪ್ಪ, ಅನಂತ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಈಗ ಯಡಿಯೂರಪ್ಪ ನಂತರ ರಾಜ್ಯದಲ್ಲಿ ಪ್ರಮುಖ ಲಿಂಗಾಯತ ನಾಯಕ ನಾನೇ. ಹೀಗಿರುವಾಗ ನನ್ನನ್ನು ಬಿಜೆಪಿಯಲ್ಲಿ ಈ ಮಟ್ಟಕ್ಕೆ ಕಡೆಗಣಿಸಿದ್ದು ತೀರಾ ನೋವುಂಟು ಮಾಡಿದೆ ಎಂದರು.

ನನಗೆ ಟಿಕೆಟ್ ಕೈತಪ್ಪಲು ಮೂಲಭೂತವಾಗಿ ಬಿ ಎಲ್ ಸಂತೋಷ್ ಅವರೇ ಕಾರಣ, ಪಕ್ಷದ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಟಿಕೆಟ್ ಘೋಷಣೆಯಾಗುವವರೆಗೆ ಸುಮ್ಮನಿದ್ದೆ. ಮೊದಲ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದಿದ್ದಾಗ ವರಿಷ್ಠರಿಗೆ ಕೇಳಿದ್ದೆ. ನಿಮಗೆ ಟಿಕೆಟ್​ ಕೊಡಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಹೇಳಿದ್ದರು. ನೀವೇ ಚುನಾವಣೆಗೆ ಆಸಕ್ತಿಯಿಲ್ಲವೆಂದು ಹೇಳಿಬಿಡಿ ಸಹ ಎಂದು ಹೇಳಿದ್ದರು. ಒಂದು ಪತ್ರ ಕಳುಹಿಸುತ್ತೇವೆಂದು ಸಹಿ ಮಾಡಿ ಕಳಿಸಿ ಎಂದಿದ್ದರು. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಮಾತು ಕೇಳಿ ಆಘಾತವಾಯ್ತು. ಸೌಹಾರ್ದಯುತವಾಗಿ ಕರೆದು ಮಾತಾಡಿದ್ದರೆ ನಾನು ಒಪ್ಪಿಕೊಳ್ಳುತ್ತಿದ್ದೆ. ಆದರೆ ಬಿಜೆಪಿಯವರು ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸರ ತಂದಿದೆ ಎಂದರು.

ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಅವಕಾಶವಿತ್ತು. ಆದರೆ ಕೆಲವೊಬ್ಬರಿಗೆ ಬಿಜೆಪಿ ಅಧಿಕಾರಕ್ಕೆ ಬರೋದು ಬೇಡ ಅನಿಸುತ್ತಿದೆ. ಬಿಜೆಪಿಯವರೇ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆದಿದ್ದಾರೆ. ಪ್ರಮುಖ ನಾಯಕರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ವಿರುದ್ಧ 1 ವರ್ಷದಿಂದ ಷಡ್ಯಂತ್ರ ಮಾಡಿಕೊಂಡು ಬಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾರಿಂದ ಪ್ಯಾಚ್​ ಅಪ್ ಮಾಡಲಾಗಲ್ಲ ಎಂದು ಶೆಟ್ಟರ್ ಹೇಳಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *