

ಕೊನೆಕ್ಷಣದಲ್ಲಿ ನಾಮಪತ್ರ ಹಿಂಪಡೆದ ಜೆಡಿಎಸ್ ಅಭ್ಯರ್ಥಿ: ಗೋಕಾಕದಲ್ಲಿ ರಮೇಶ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಜೊತೆ ಮೈತ್ರಿ
ಬೆಳಗಾವಿ ಜಿಲ್ಲೆಯ ಗೋಕಾಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಪಕ್ಷಕ್ಕೆ ತಿಳಿಯದಂತೆ ನಾಮಪತ್ರ ಹಿಂಪಡೆದಿದ್ದಾರೆ. ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಚಂದನ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಪಕ್ಷಕ್ಕೆ ತಿಳಿಯದಂತೆ ನಾಮಪತ್ರ ಹಿಂಪಡೆದಿದ್ದಾರೆ.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಚಂದನ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ.
ಈ ಬೆಳವಣಿಗೆಯ ನಂತರ ಜೆಡಿಎಸ್ ಅಭ್ಯರ್ಥಿಯನ್ನು ಪಕ್ಷದಿಂದ ಉಚ್ಚಾಟಿಸಲು ನಿರ್ಧರಿಸಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬದ್ಧ ವೈರಿಯಾದ ಜಾರಕಿಹೊಳಿ ಅವರಿಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಜೆಡಿಎಸ್ ಅಭ್ಯರ್ಥಿಯು ಕಣದಿಂದ ಹಿಂದೆಸರಿದಿರುವುದರಿಂದ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಂಚಿಕೆಯಾಗುವ ನಿರೀಕ್ಷೆಯಿದ್ದ ಅಲ್ಪಸಂಖ್ಯಾತರ ಮತಗಳು ಈಗ ಮತ್ತೆ ಹಳೆಯ ಪಕ್ಷಕ್ಕೆ ಒಲಿದು ಬರಲಿವೆ. ಜಾರಕಿಹೊಳಿ ಈಗ ಹಿಂದೂ ಮತಗಳ ಧ್ರುವೀಕರಣಕ್ಕೆ ಶ್ರಮಿಸಬೇಕಾಗಿದೆ. ಮಹಾಂತೇಶ ಕಡಾಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.
ಗಿಡ್ಡನವರ್ ಈಗಾಗಲೇ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಲಿಂಗಾಯತ ಮತಗಳ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಜಾರಕಿಹೊಳಿ ಅವರನ್ನು ಶತಾಯಗತಾಯ ಸೋಲಿಸಲು ಡಿಕೆ ಶಿವಕುಮಾರ್ ಸರ್ವಪ್ರಯತ್ನ ನಡೆಸುತ್ತಿರುವುದರಿಂದ ಗೋಕಾಕ ಕ್ಷೇತ್ರ ಇದೀಗ ಹೈವೋಲ್ಟೇಜ್ ಸ್ಪರ್ಧೆಗೆ ಸಾಕ್ಷಿಯಾಗಿದೆ.
ಜಾರಕಿಹೊಳಿ ತುಳಿತಕ್ಕೊಳಗಾದ ವರ್ಗದಿಂದ ಬಂದವರು. (kpc)
