ಬಿ.ಜೆ.ಪಿ.ಅಭ್ಯರ್ಥಿ ಕಳ್ಳ! ಮೋದಿ ರೋಡ್‌ ಶೋ ಕ್ಯಾನ್ಸಲ್!!

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ ಕಳ್ಳತನ ಆರೋಪ ಸಾಬೀತು; ಎಚ್ಚೆತ್ತುಕೊಂಡ ಬಿಜೆಪಿ, ಚಿತ್ತಾಪುರದಲ್ಲಿ ಪ್ರಧಾನಿ ಮೋದಿ ರ‍್ಯಾಲಿ ರದ್ದು!

ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

PM modi

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್​ ವಿರುದ್ಧ ಹಲವಾರು ಅಪರಾಧ ಪ್ರಕರಣಗಳಿದ್ದು, ಈ ಬಗ್ಗೆ ಪ್ರತಿಪಕ್ಷಗಳು ಕಿಡಿಕಾರುತ್ತಲೇ ಇವೆ. ಇದೀಗ ಮಣಿಕಂಠನ ಮೇಲಿದ್ದ ಕಳ್ಳತನ ಆರೋಪವೊಂದು ಸಾಬೀತಾಗಿದ್ದು, ಎಚ್ಚೆತ್ತುಕೊಂಡ ಬಿಜೆಪಿ ಚಿತ್ತಾಪುರದಲ್ಲಿ ಮೋದಿಯವರು ಮಣಿಕಂಠ ರಾಠೋಡ್ ಪರ ನಡೆಸಬೇಕಿದ್ದ ಪ್ರಚಾರವನ್ನು ರದ್ದುಪಡಿಸಿದೆ.

ಅಂಗನವಾಡಿ ಮಕ್ಕಳ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣದಲ್ಲಿ ಮಣಿಕಂಠ ರಾಠೋಡ್ ಅವರು ಶಿಕ್ಷೆಗೆ ಗುರಿಯಾಗಿದ್ದು, ಪ್ರಕರಣ ಸಂಬಂಧ ರಾಠೋಡ್ ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಈ ಪರಿಸ್ಥಿತಿಯಲ್ಲಿ ಮಣಿಕಂಠನ ಅವರ ಮೋದಿಯವರು ಪ್ರಚಾರ ನಡೆಸಿದ್ದೇ ಆದರೆ, ಬಿಜೆಪಿ ಮುಜುಗರಕ್ಕೊಳಗಾಗಬೇಕಾಗುವ ಸಾಧ್ಯತೆಗಳಿವೆ.

ಏಪ್ರಿಲ್​ 28 ರಂದು ಚಿತ್ತಾಪುರದಲ್ಲಿ ಮಣಿಕಂಠ ರಾಠೋಡ್​ ಪರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ ನಡೆಸಿದ್ದರು.

ಮಣಿಕಂಠನ ಮೇಲೆ ಹಲವಾರು ಪ್ರಕರಣ ಇದೆ. ಸಿಎಂ ಅವರ ಪರ ಮತ ಯಾಚನೆ ಮಾಡುವುದು ದುರಂತ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು.

ಟೀಕೆಗಳ ಬೆನ್ನಲ್ಲೇ ತಮ್ಮ ನಡೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಮರ್ಥಿಸಿಕೊಂಡಿದ್ದರು. ಕಾಂಗ್ರೆಸ್​ನ ರಾಷ್ಟ್ರೀಯ-ರಾಜ್ಯ ನಾಯಕರ ಮೇಲೂ ಪ್ರಕರಣಗಳಿವೆ. ಅವರುಗಳೇ ಜಾಮೀನು ಮೇಲೆ ಹೊರಬಂದಿದ್ದಾರೆ. ನಿಮ್ಮ ಮಾತಿನಂತೆಯೇ ನಡೆಯುವುದಾದರೇ ನೀವೆಲ್ಲರೂ ರಾಜಕೀಯದಿಂದಲೇ ಹೊರಗುಳಿಯಬೇಕು ಎಂದು ಹೇಳಿದ್ದರು.‌

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *