ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದ ಹೆಚ್’ಡಿ.ಕುಮಾರಸ್ವಾಮಿ

ಅತಂತ್ರ ವಿಧಾನಸಭೆ ಸುಳಿವು: ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದ ಹೆಚ್’ಡಿ.ಕುಮಾರಸ್ವಾಮಿ

ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್’ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

HD Kumaraswamy

ಬೆಂಗಳೂರು: ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್’ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

ಸಿಂಗಾಪುರಕ್ಕೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿಯವರು, 50 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ಇದೆ. ಈ ಬಾರಿ ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ಹಲವು ಸಮೀಕ್ಷೆಗಳು ಜೆಡಿಎಸ್ ಪಕ್ಷ ಬಹಳ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಹೇಳಿವೆ. ಆದರೆ, ನಮ್ಮ ಪಕ್ಷ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.

ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ದಿಟ್ಟ ನಿಲುವನ್ನು ಹೊಂದಿದ್ದಾರೆ.

ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ವಿಧಿಸಲು ಮುಂದಾಗಿದ್ದಾರೆ.

ಸರ್ಕಾರವನ್ನು ನಡೆಸಲು ಸ್ವತಂತ್ರ ನೀಡುವುದು, ಯಾರ ಅಪ್ಪಣೆಯೂ ತೆಗೆದುಕೊಳ್ಳುವಂತಿರಬಾರದು, ಯಾರು ಹಿಡಿತಸಾಧಿಸಬಾರದು ಎಂಬುದು ಕುಮಾರಸ್ವಾಮಿಯವರ ಷರತ್ತುಗಳಾಗಿವೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್ ಶಾಸಕರು ಜಲಸಂಪನ್ಮೂಲ, ವಿದ್ಯುತ್ ಮತ್ತು ಸಾರ್ವಜನಿಕ ಕೆಲಸಗಳಂತಹ ಖಾತೆಗಳನ್ನು ಪಡೆಯಬೇಕೆಂದು, ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಜಾರಿಗೆ ತರಲು ಸಮ್ಮಿಶ್ರ ಪಕ್ಷದ ಪಾಲುದಾರರು ಅವಕಾಶ ನೀಡಬೇಕು. ತಮ್ಮ ಸಮ್ಮಿಶ್ರ ಪಾಲುದಾರ ಪಕ್ಷವು ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಂದ ದೂರವಿರಬೇಕು. ಯಾವುದೇ ಸಿದ್ಧಾಂತಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಚರ್ಚೆಯಿಲ್ಲದೆ ಮಾಡಬಾರದು ಎಂಬ ಷರತ್ತುಗಳನ್ನು ಮುಂದಿಟ್ಟಿದ್ದಾರೆಂದು ತಿಳಿದುಬಂದಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *