
ಕರ್ನಾಟಕ ಚುನಾವಣೆ ಫಲಿತಾಂಶ: ಜನರು ಬಿಜೆಪಿ- ಪ್ರಧಾನಿ ಮೋದಿಯನ್ನು ತಿರಸ್ಕರಿಸಿದ್ದಾರೆ; ಕಾಂಗ್ರೆಸ್ ನಾಯಕರು
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಪ್ರವೃತ್ತಿಯನ್ನು ಅನುಸರಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಪ್ರವೃತ್ತಿಯನ್ನು ಅನುಸರಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಸುದ್ದಿಸಂಸ್ಥೆ ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೇರಾ, ಬಿಜೆಪಿಯ ‘ನಕಾರಾತ್ಮಕ’ ಪ್ರಚಾರವನ್ನು ಜನರು ತಿರಸ್ಕರಿಸಿದ್ದಾರೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನೂ ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಬರಲಿದ್ದೇವೆ ಎಂದಿದ್ದಾರೆ.
ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ ಐಎಎನ್‌ಎಸ್ ಜೊತೆ ಮಾತನಾಡಿ, ‘ನಮ್ಮ ತಪ್ಪುಗಳಿಂದ ನಾವು ಪಾಠ ಕಲಿತಿದ್ದೇವೆ… ಕೆಲವು ತಿಂಗಳ ಹಿಂದೆ ಹಿಮಾಚಲ ಪ್ರದೇಶದ ಫಲಿತಾಂಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯ ಇತ್ತೀಚಿನ ಟ್ರೆಂಡ್‌ಗಳು ಜನರ ಸಮಸ್ಯೆಗಳು ಬಗೆಹರಿಯುತ್ತಿಲ್ಲ ಎಂಬುದನ್ನು ತೋರಿಸುತ್ತವೆ. ಹೀಗಾಗಿ, ಅವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ತಿಳಿಸಿದರು.
ಸರ್ವಜ್ಞನಗರದ ಕಾಂಗ್ರೆಸ್ ಅಭ್ಯರ್ಥಿ ಕೆಜೆ ಜಾರ್ಜ್ ಸುದ್ದಿಸಂಸ್ಥೆ ಎಎನ್ಐ ಜೊತೆ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆ ಸಾಧಿಸಿರುವುದಕ್ಕಾಗಿ, ಮತದಾರರಿಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. (kpc)
