

ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಬೆಂಗಳೂರು: ಕನ್ನಡದ ಖ್ಯಾತ ಲೇಖಕ ಹಾಗೂ ವಿಮರ್ಶಕ ಜಿ.ಹೆಚ್ ನಾಯಕ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯದ ವಿಮರ್ಶೆ, ವಿಶ್ಲೇಷಣೆ ಹಾಗೂ ಬರಹಲೋಕದ ಅಪರೂಪದ ವ್ಯಕ್ತಿ. ಪ್ರಗತಿಪರ ಚಿಂತಕರು, ಸೌಜನ್ಯಶೀಲ, ನಿಷ್ಠುರ ವಿಮರ್ಶಕರಾದ ನಾಯಕ್ ಅವರು ಪೂರ್ವಾಗ್ರಹವಿಲ್ಲದ ಅಪ್ಪಟ ಮಾನವೀಯ ಮನಸ್ಸುಳ್ಳವರಾಗಿದ್ದರು. ನಾಯಕ್ ಅವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕರಾಗಿ ಸಲ್ಲಿಸಿದ ಸೇವೆ ಅನನ್ಯ. ಹಂಪಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕಾವ್ಯಾಧ್ಯಯನ ಪೀಠದ ಸಂದರ್ಶ ಪ್ರಾಧ್ಯಾಪಕರಾಗಿಯೂ ಅವರ ಸೇವೆ ಗಮನಾರ್ಹವಾಗಿದೆ.


ಸಮಕಾಲೀನ, ಅನಿವಾರ್ಯ ನಿರಪೇಕ್ಷ ಸೇರಿದಂತೆ ಹಲವಾರು ವಿಮರ್ಶಾ ಕೃತಿಗಳು ಹಾಗೂ ಸಾಹಿತ್ಯ ಕೃತಿಗಳನ್ನು ಸಂಪಾದಿಸಿದ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅತ್ಯುತ್ತಮ ಸಾಹಿತ್ಯ ವಿಮರ್ಶೆ ಪ್ರಶಸ್ತಿಯನ್ನು ಒಳಗೊಂಡಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಅವರ ನಿಧನದಿಂದ ಕನ್ನಡ ಸಾಹಿತ್ಯ ಲೋಕದ ಪ್ರಖರ ಚಿಂತರಕೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (kpc)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






