ರಾಜ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲರ ಅನುಮೋದನೆ: ಯಾರಿಗೆ ಯಾವ ಖಾತೆ?

ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

Karnataka ministers.

ಬೆಂಗಳೂರು: ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ.

ಮೇ 20 ರಂದು ಎಂಟು ಕ್ಯಾಬಿನೆಟ್ ಸಚಿವರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಕ್ರಮವಾಗಿ ಸಿಎಂ ಮತ್ತು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಾದ ಬಳಿಕ ಮೇ 27 ರಂದು 24 ಹೆಚ್ಚುವರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು.

ಈಗ ಮೇ 28 ರಂದು ಹೊರಡಿಸಿದ ಅಧಿಸೂಚನೆಯಲ್ಲಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಚಿವರಿಗೆ ಖಾತೆಗಳ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಶಿಫಾರಸನ್ನು ಅನುಮೋದಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ ಕೆಲವೇ ದಿನಗಳ ನಂತರ, ಸಚಿವರಿಗೆ ಆಯಾ ಇಲಾಖೆಗಳನ್ನು ನಿಯೋಜಿಸುವುದರೊಂದಿಗೆ ಅಂತಿಮವಾಗಿ ಸಂಪುಟ ರಚನೆಯಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ತಮ್ಮೊಂದಿಗೆ ಇರಿಸಿಕೊಂಡಿದ್ದರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಗೃಹ ಇಲಾಖೆಯನ್ನು ಡಾ.ಜಿ.ಪರಮೇಶ್ವರ ಅವರಿಗೆ ನೀಡಲಾಗಿದ್ದು, ಗುಪ್ತಚರ ಇಲಾಖೆಯನ್ನು ಸಿದ್ದರಾಮಯ್ಯ ಅವರೇ ನಿರ್ವಹಿಸಲಿದ್ದಾರೆ.

ಸಚಿವರ ಖಾತೆ ಹಂಚಿಕೆಯ ಪಟ್ಟಿ ಇಂತಿದೆ…

  • ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ
  • ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ
  • ಡಾ. ಜಿ.ಪರಮೇಶ್ವರ್- ಗೃಹ
  • ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ
  • ಕೆ.ಹೆಚ್.ಮುನಿಯಪ್ಪ- ಆಹಾರ & ನಾಗರಿಕ ಸರಬರಾಜು ವ್ಯವಹಾರ
  • ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
  • ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
  • ಕೆ.ಜೆ.ಜಾರ್ಜ್‌- ಇಂಧನ
  • ದಿನೇಶ್ ಗುಂಡೂರಾವ್: ಆರೋಗ್ಯ & ಕುಟುಂಬ ಕಲ್ಯಾಣ
  • ಹೆಚ್ ಸಿ ಮಹದೇವಪ್ಪ: ಸಮಾಜಕಲ್ಯಾಣ
  • ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
  • ಕೃಷ್ಣ ಬೈರೇಗೌಡ- ಕಂದಾಯ
  • ಪ್ರಿಯಾಂಕ್ ಖರ್ಗೆ-ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್
  • ಶಿವಾನಂದ ಪಾಟೀಲ್-ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
  • ಜಮೀರ್ ಅಹಮದ್ ಖಾನ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳು
  • ಶರಣುಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು
  • ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ
  • ಚಲುವರಾಯಸ್ವಾಮಿ- ಕೃಷಿ
  • ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ
  • ರಹೀ ಖಾನ್: ಪೌರಾಡಳಿತ, ಹಜ್ ಖಾತೆ
  • ಸಂತೋಷ ಲಾಡ್- ಕಾರ್ಮಿಕ
  • ಡಾ.ಶರಣುಪ್ರಕಾಶ್ ಪಾಟೀಲ್-ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ
  • ಆರ್.ಬಿ.ತಿಮ್ಮಾಪುರ- ಅಬಕಾರಿ
  • ಕೆ.ವೆಂಕಟೇಶ್- ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ
  • ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ , ಕನ್ನಡ ಮತ್ತು ಸಂಸ್ಕೃತಿ
  • ಡಿ.ಸುಧಾಕರ್: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ
  • ಬಿ‌.ನಾಗೇಂದ್ರ: ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ
  • ಕೆ.ಎನ್.ರಾಜಣ್ಣ: ಸಹಕಾರ
  • ಬೈರತಿ ಸುರೇಶ್- ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ)
  • ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ
  • ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ
  • ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
  • ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
  • ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *