ಮೇ 31 ರಿಂದ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಶಾಲೆಗಳು ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.

https://imasdk.googleapis.com/js/core/bridge3.575.0_en.html#goog_47767248

ಶಾಲಾ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಮಧು ಬಂಗಾರಪ್ಪ ಅವರು ಶುಭ ಹಾರೈಸಿದ್ದಾರೆ.

ಶಾಲೆಯಲ್ಲಿ ಪೂರಕ ಸಿದ್ಧತೆಗಳು ಇಂದಿನಿಂದಲೇ ಆರಂಭಗೊಂಡಿವೆ. ಆರೋಗ್ಯಕರ ವಾತಾವರಣದಲ್ಲಿ ಖುಷಿಯ ಕಲಿಕೆ ನಿಮ್ಮದಾಗಲಿ. ಮಾದರಿ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರ, ಪೋಷಕರ ಹಾಗೂ ಕನ್ನಡಿಗರ ಸಹಕಾರವಿರಲಿ ಎಂದು ಹೇಳಿದ್ದಾರೆ.

ಈ ನಡುವೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಸುತ್ತೋಲೆಯಲ್ಲಿ ಎಲ್ಲಾ ಮಕ್ಕಳಿಗೆ ಶಾಲೆಯ ಮೊದಲ ದಿನ ಕಡ್ಡಾಯವಾಗಿ ಸಿಹಿತಿಂಡಿಗಳನ್ನು ನೀಡಬೇಕು ಮತ್ತು ಮೊದಲ ದಿನದಿಂದಲೇ ಪ್ರತಿದಿನ ಮಧ್ಯಾಹ್ನದ ಊಟವನ್ನು ನೀಡಬೇಕು ಎಂದು ತಿಳಿಸಿದೆ.

ಬೇಸಿಗೆ ರಜೆ ಬಳಿಕ ಶಾಲೆಗಳು ಪುನರಾರಂಭವಾಗುತ್ತಿರು ಹಿನ್ನೆಲೆಯಲ್ಲಿ ಮೇ.29 ಮತ್ತು 30 ರಂದು ಶಾಲೆಗಳನ್ನು ಸ್ವಚ್ಛಗೊಳಿಸುವ ಕಾರ್ಯಗಳನ್ನು ನಡೆಸಬೇಕು. ಇತರೆ ಸಿದ್ಧತೆಗಳನ್ನೂ ಮಾಡಿಕೊಳ್ಳಬೇಕು ಎಂದು ಸೂಚಿಸಿದೆ.

ಬಳಕೆಯಾಗದ ವಸ್ತುಗಳ ವಿಲೇವಾರಿ ಸೇರಿದಂತೆ ಶಾಲಾ ಆವರಣವನ್ನು ಸೂಕ್ತ ರೀತಿಯಲ್ಲಿ ಸ್ವಚ್ಛಗೊಳಿಸುವಂತೆ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಸರಿಯಾಗಿ ರೂಪಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದೆ.

2023-24ನೇ ಸಾಲಿನ ಶೈಕ್ಷಣಿಕ ವರ್ಷದ ದಿನಗಳ ಸಂಖ್ಯೆಯನ್ನು 26 ದಿನಗಳು ಕಡಿತಗೊಳಿಸಿದ್ದು, ಒಟ್ಟು 244 ದಿನಗಳು ಮಾತ್ರ ಶಾಲೆಗಳು ತೆರೆದಿರುತ್ತವೆ. ಅದರಲ್ಲಿ 180 ದಿನಗಳು ಮಾತ್ರ ಬೋಧನಾ ದಿನಗಳು ಇರಲಿವೆ. ದಸರಾ ರಜೆ ಕೂಡ ಅಕ್ಟೋಬರ್ 8 ರಿಂದ 24ರವರೆಗೆ ಇರಲಿದೆ ಎನ್ನಲಾಗಿದೆ. (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

Recommended For You

About the Author: Kanneshwar Naik

Leave a Reply

Your email address will not be published. Required fields are marked *