

ಶಿರಸಿ ಕಲ್ಲಿಯ ಮೊರಾರ್ಜಿ ವಸತಿ ಶಾಲೆ ಪ್ರಾಚಾರ್ಯರ ವಿರುದ್ಧ ಕಲ್ಲಿಯಲ್ಲೇ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿರುವ ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮನಮನೆ ಈವರ ದುರ್ವರ್ತನೆ ಬಗ್ಗೆ ಶೀಘ್ರ ಕ್ರಮ ಜರುಗಿಸಲು ಆಗ್ರಹಿಸಿದ್ದಾರೆ.

ಸಿದ್ಧಾಪುರದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ವಸಂತ ನಾಯ್ಕ ಕಲ್ಲಿ ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರು ವಿದ್ಯಾರ್ಥಿಗಳು, ಸಹಶಿಕ್ಷಕರು, ಸಾರ್ವಜನಿಕರು ಸೇರಿದಂತೆ ಯಾರೊಂದಿಗೂ ಸರಿಯಾಗಿ ವರ್ತಿಸುತ್ತಿಲ್ಲ, ಯಾವುದೇ ವಿಷಯ ಕೇಳಿದರೂ ನೀವ್ಯಾರು ಎಂದು ಉದ್ಧಟತನ ತೋರುತ್ತಾರೆ. ಇವರ ವರ್ತನೆ ಸರಿಪಡಿಸಿ ಬಾಧಿತರಿಗೆ ನ್ಯಾಯ ಒದಗಿಸದಿದ್ದರೆ ಕಲ್ಲಿ ವಸತಿ ಶಾಲೆಯ ಎದುರು ಪ್ರತಿಭಟನೆ ಮಾಡಬೇಕಾದ ಅನಿವಾರ್ಯತೆ ಎದುರಾಗುತ್ತದೆ ಎಂದು ಎಚ್ಚರಿಸಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






