ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಗೆ ಬುಧವಾರ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ…

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?

cong1

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಗೆ ಬುಧವಾರ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ 2000 ರೂಪಾಯಿ ಸಹಾಯಧನ ಪಡೆಯಲು ರಾಜ್ಯ ಸರ್ಕಾರ ಹಲವು ಷರತ್ತುಗಳನ್ನು ವಿಧಿಸಿದೆ.

ಪ್ರಮುಖ ಷರತ್ತುಗಳೇನು?
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಅರ್ಜಿ ಸಲ್ಲಿಸುವುದೇಗೆ?
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *